ಬೈಕ್ ಟ್ಯಾಕ್ಸಿ ಸುರಕ್ಷತೆ ವಿಚಾರಿಸಿ ಮತ್ತೆ ಗಂಭೀರ ಘಟನೆ
ಬೆಂಗಳೂರು : ಬೆಂಗಳೂರಿನಲ್ಲಿ ಬೈಕ್ ಟ್ಯಾಕ್ಸಿಗಳ ಸುರಕ್ಷತೆಯ ಬಗ್ಗೆ ಮತ್ತೆ ಪ್ರಶ್ನೆಗಳು ಎದ್ದಿವೆ. ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ರಾಪಿಡೋ ಬೈಕ್ ಟ್ಯಾಕ್ಸಿ ಚಾಲಕ ಯುವತಿಗೆ ಲೈಂಗಿಕ ಕಿರುಕುಳ ನೀಡಿದ ಬಗ್ಗೆ ವರದಿಯಾಗಿದೆ. ಸಾಫ್ಟ್ವೇರ್ ಕಂಪನಿಯಲ್ಲಿ ಕೆಲಸ ಮಾಡುವ ಯುವತಿಯೊಬ್ಬರು ತಮ್ಮ ನಿವಾಸದಿಂದ ಮಾನ್ಯತಾ ಟೆಕ್ ಪಾರ್ಕ್ಗೆ ತೆರಳಲು ರಾಪಿಡೋ ಬೈಕ್ ಟ್ಯಾಕ್ಸಿಯನ್ನು ಬುಕ್ ಮಾಡಿದ್ದರು. ಪ್ರಯಾಣದ ವೇಳೆ, ಚಾಲಕ ವಿವೇಕ್ ಹಿಂಬದಿಗೆ ಸರಿದು ಆಕೆ ಜತೆ ಅಸಭ್ಯವಾಗಿ ವರ್ತಿಸಿದ್ದಾನೆ.
ಯುವತಿ ಆಕ್ಷೇಪಿಸಿದಾಗ, ಆತ ಆಕೆಯ ಖಾಸಗಿ ಅಂಗಾಂಗಗಳನ್ನು ಸ್ಪರ್ಶಿಸಲು ಪ್ರಯತ್ನಿಸಿದ್ದಾನೆ ಮತ್ತು ಎದೆ ಭಾಗಕ್ಕೆ ಕೈ ಹಾಕಿದ್ದಾನೆ ಎಂದು ಆರೋಪಿಸಲಾಗಿದೆ. ಘಟನೆಯ ನಂತರ ಯುವತಿ ಕಿರುಚಾಡಿ ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾದ ನಂತರ, ಪೊಲೀಸರು ಆರೋಪಿ ವಿವೇಕ್ನನ್ನು ಬಂಧಿಸಿ ವಿಚಾರಣೆ ನಡೆಸಿದ್ದಾರೆ. ಈ ಘಟನೆ ಬೈಕ್ ಟ್ಯಾಕ್ಸಿ ಬಳಸುವ ಮಹಿಳೆಯರ ಸುರಕ್ಷತೆ ಕುರಿತು ಗಂಭೀರ ಚಿಂತನೆಗೆ ಕಾರಣವಾಗಿದೆ.
For More Updates Join our WhatsApp Group :




