ಮದುವೆ ಸುದ್ದಿಗಳ ನಡುವೆ ಅಭಿಮಾನಿಗಳಿಗೆ ಗುಡ್ ನ್ಯೂಸ್.
ರಶ್ಮಿಕಾ ಮಂದಣ್ಣ ಮತ್ತು ವಿಜಯ್ದೇವರಕೊಂಡಅವರು ಕೆಲವೇ ದಿನಗಳಲ್ಲಿ ಹಸೆಮಣೆ ಏರಲಿದ್ದಾರೆ. ಪರಸ್ಪರ ಪ್ರೀತಿಸುತ್ತಿರುವ ಅವರು ಈ ವಿಚಾರವನ್ನು ಬಹಿರಂಗವಾಗಿ ಒಪ್ಪಿಕೊಂಡಿಲ್ಲ. ಅವರ ಮದುವೆಗೆ ಸಕಲ ಸಿದ್ಧತೆ ನಡೆದಿದೆ. ಅದರ ನಡುವೆಯೇ ಅವರಿಬ್ಬರು ಒಂದು ಗುಡ್ ನ್ಯೂಸ್ ನೀಡಿದ್ದಾರೆ. ಅದೇನೆಂದರೆ, ಮತ್ತೊಮ್ಮೆ ವಿಜಯ್ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ ಅವರು ಜೊತೆಯಾಗಿ ನಟಿಸಲಿದ್ದಾರೆ. ಈಗಾಗಲೇ ‘ಡಿಯರ್ ಕಾಮ್ರೇಡ್’, ‘ಗೀತ ಗೋವಿಂದಂ’ ಸಿನಿಮಾಗಳಲ್ಲಿ ನಟಿಸಿ ಅಭಿಮಾನಿಗಳನ್ನು ರಂಜಿಸಿದ್ದ ಅವರು ಈಗ ಹೊಸ ಸಿನಿಮಾದಲ್ಲಿ ಒಂದಾಗುತ್ತಿದ್ದಾರೆ. ಈ ಚಿತ್ರಕ್ಕೆ ‘ರಣಬಾಲಿ’ ಎಂದು ಶೀರ್ಷಿಕೆ ಇಡಲಾಗಿದೆ.
ವಿಜಯ್ ದೇವರಕೊಂಡ ಅವರು ಒಂದು ದೊಡ್ಡ ಗೆಲುವಿಗಾಗಿ ಕಾದಿದ್ದಾರೆ. ಕಳೆದ ವರ್ಷ ಅವರು ನಟಿಸಿದ ‘ಕಿಂಗ್ಡಮ್’ ಸಿನಿಮಾ ಬಿಡುಗಡೆ ಆಗಿತ್ತು. ಅಂದುಕೊಂಡ ಮಟ್ಟಕ್ಕೆ ಆ ಸಿನಿಮಾ ಕಲೆಕ್ಷನ್ ಮಾಡಲಿಲ್ಲ. ಈಗ ಅವರ ಹೊಸ ಸಿನಿಮಾ ‘ರಣಬಾಲಿ’ ಅನೌನ್ಸ್ ಆಗಿದೆ. ಇದು ಅವರ 14ನೇ ಸಿನಿಮಾ ಆಗಿದ್ದು, ಗಣರಾಜ್ಯೋತ್ಸವದ ಪ್ರಯುಕ್ತ ಟೈಟಲ್ ಟೀಸರ್ ರಿಲೀಸ್ ಮಾಡಲಾಗಿದೆ.
‘ಮೈತ್ರಿ ಮೂವೀ ಮೇಕರ್ಸ್’ ಸಂಸ್ಥೆಯು ರಣಬಾಲಿ’ ಸಿನಿಮಾವನ್ನು ನಿರ್ಮಾಣ ಮಾಡುತ್ತಿದೆ. ಇದು ಪ್ಯಾನ್ ಇಂಡಿಯಾ ಚಿತ್ರವಾಗಿದ್ದು ತೆಲುಗು, ಕನ್ನಡ, ಮಲಯಾಳಂ, ತಮಿಳು ಮತ್ತು ಹಿಂದಿಯಲ್ಲಿ ಮೂಡಿಬರಲಿದೆ. ವಿಜಯ್ ದೇವರಕೊಂಡ ಅವರು ರಣಬಾಲಿ ಎಂಬ ಪಾತ್ರವನ್ನು ಮಾಡುತ್ತಿದ್ದಾರೆ. ರಶ್ಮಿಕಾ ಮಂದಣ್ಣ ಅವರಿಗೆ ಜಯಮ್ಮ ಎಂಬ ಪಾತ್ರವನ್ನು ನೀಡಲಾಗಿದೆ.
ಅಂದಹಾಗೆ, ‘ರಣಬಾಲಿ’ ಸಿನಿಮಾದಲ್ಲಿ ಐತಿಹಾಸಿಕ ಕಥಾಹಂದರ ಇದೆ. ಸ್ವಾತಂತ್ರ್ಯ ಸಿಗುವುದಕ್ಕೂ ಮುನ್ನ ಭಾರತದಲ್ಲಿ ಬ್ರಿಟಿಷರು ನಡೆಸಿದ ಹತ್ಯಾಕಾಂಡದ ಬಗ್ಗೆ ಈ ಸಿನಿಮಾದಲ್ಲಿ ತೋರಿಸಲಾಗುವುದು. ಬ್ರಿಟಿಷರ ವಿರುದ್ಧ ತಿರುಗಿಬಿದ್ದ ಯುವಕನಾಗಿ ವಿಜಯ್ ದೇವರಕೊಂಡ ಅವರು ನಟಿಸುತ್ತಿದ್ದಾರೆ. ಈ ಸಿನಿಮಾ ಮೇಲೆ ಅಭಿಮಾನಿಗಳಿಗೆ ನಿರೀಕ್ಷೆ ಮೂಡಿದೆ.
For More Updates Join our WhatsApp Group :




