ಬೆಂಗಳೂರು : RCB ಹುಡುಗರು ನಮ್ಮ ಕರ್ನಾಟಕಕ್ಕೆ ಗೌರವ ಮತ್ತು ಹೆಮ್ಮೆ ತಂದಿದ್ದಾರೆ. ಅವರನ್ನು ಅಭಿನಂದಿಸುತ್ತೇನೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಆರ್‌ಸಿಬಿ ತಂಡಕ್ಕೆ ಶುಭಾಶಯ ಕೋರಿದ್ದಾರೆ.

ಐಪಿಎಲ್ ಫೈನಲ್ ಕ್ರೀಡಾ ಪಂಜಾಬ್ ಮಣಿಸಿ ಕಪ್ ಗೆದ್ದ’ಸಿಬಿ ತಂಡದ ಕುರಿತು ಮಾಧ್ಯಮದವರೊಂದಿಗೆ ಅವರು ಮಾತನಾಡಿದರು, ಆರ್‌ಸಿಬಿ ತಂಡವನ್ನು ನಾವು ಗೌರವಿಸಬೇಕು. ಯಾವ ರೀತಿ ಅವರನ್ನು ಗೌರವಿಸಬೇಕು ಎಂಬುದರ ಬಗ್ಗೆ ಚರ್ಚೆ ನಡೆಯುತ್ತಿದೆ. ಟ್ರಾಫಿಕ್ ಸಮಸ್ಯೆ ಆಗಬಾರದು, ಸಾಕಷ್ಟು ಯುವಕರು ಭಾಗವಹಿಸಿದ್ದಾರೆ.
ಅವರು ಶೆಡ್ಯೂಲ್ ಹಾಕಿಕೊಳ್ಳುತ್ತಾರೆ. ಆದರೆ ಕಂಟ್ರೋಲ್ ಮಾಡೋದು ನಾವು. ಗೃಹ ಎಲ್ಲಾ ಸಚಿವರು, ಪೊಲೀಸ್ ಕಮೀಷನರ್ ಕೂತು ಮಾತನಾಡಿ ಈ ಬಗ್ಗೆ ನಿರ್ಧಾರ ತೆಗೆದುಕೊಳ್ಳುತ್ತಾರೆ. ನಾನು ಕೂಡ ಸಂಪೂರ್ಣ ಮ್ಯಾಚ್ ನೋಡಿದ್ದೇನೆ. ಆರ್‌ಸಿಬಿ ಟೀಂ ಬೆಂಗಳೂರಿಗೆ ಆಗಮಿಸುತ್ತಿದ್ದಾರೆ. ಅವರಿಗೆ ಸನ್ಮಾನ ಮಾಡುವ ಬಗ್ಗೆ ಮಾತನಾಡುತ್ತಿದ್ದರು.
