ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ nats.edcucation.gov.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಇಸ್ರೋ ಒಟ್ಟು 75 ಅಪ್ರೆಂಟಿಸ್ ಹುದ್ದೆಗಳಿಗೆ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಿದೆ. ಒಟ್ಟು ಹುದ್ದೆಗಳಲ್ಲಿ ಗ್ರಾಜುಯೇಟ್ ಅಪ್ರೆಂಟಿಸ್ ಟ್ರೈನಿ 46 ಹುದ್ದೆಗಳು, ಡಿಪ್ಲೊಮಾ ಅಪ್ರೆಂಟಿಸ್ ಟ್ರೈನಿ 15 ಹುದ್ದೆಗಳು, ವಾಣಿಜ್ಯ ಅಭ್ಯಾಸದಲ್ಲಿ ಡಿಪ್ಲೊಮಾ 5 ಹುದ್ದೆಗಳು ಮತ್ತು ಟ್ರೇಡ್ ಐಟಿಐ 9 ಹುದ್ದೆಗಳು ಸೇರಿವೆ.

ಗ್ರಾಜುಯೇಟ್ ಅಪ್ರೆಂಟಿಸ್‌ಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಬಿಇ ಅಥವಾ ಬಿಟೆಕ್ ಪದವಿ ಪಡೆದಿರಬೇಕು. ಡಿಪ್ಲೊಮಾ ಅಪ್ರೆಂಟಿಸ್‌ಗಾಗಿ, ಅರ್ಜಿದಾರರು ಸಂಬAಧಿತ ವಿಭಾಗದಲ್ಲಿ ಡಿಪ್ಲೊಮಾ ಹೊಂದಿರಬೇಕು. ಟ್ರೇಡ್ ಐಟಿಐ ಅಪ್ರೆಂಟಿಸ್‌ಗಾಗಿ, ಅಭ್ಯರ್ಥಿಯು ಸಂಬAಧಿತ ವ್ಯಾಪಾರದಲ್ಲಿ ಐಟಿಐ ಪ್ರಮಾಣಪತ್ರವನ್ನು ಹೊಂದಿರಬೇಕು. 2022, 2023 ಮತ್ತು 2024 ರಲ್ಲಿ ಉತ್ತೀರ್ಣರಾದವರು ಮಾತ್ರ ಅಪ್ರೆಂಟಿಸ್‌ಶಿಪ್‌ಗೆ ಅರ್ಹರು. ಹೆಚ್ಚಿನ ಮಾಹಿತಿಗೆ nats.edcucation.gov.in ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ.