ಕೋಲಾರದ ಎಸ್ಎನ್ಆರ್ ಜಿಲ್ಲಾ ಆಸ್ಪತ್ರೆಯು ಗ್ರಂಥಪಾಲಕ ಮತ್ತು ಸಹಾಯಕ ಗ್ರಂಥಪಾಲಕ ಹುದ್ದೆಗಳನ್ನು ಭರ್ತಿ ಮಾಡಲು ಆಗಸ್ಟ್ 5 ರಂದು ನೇರ ಸಂದರ್ಶನವನ್ನು ನಡೆಸಲಿದೆ. ಆಸಕ್ತ ಅಭ್ಯರ್ಥಿಗಳು ಪದವಿ ಅಥವಾ ಡಿಪ್ಲೋಮಾ ಪಡೆದಿರಬೇಕು. ವೇತನ ತಿಂಗಳಿಗೆ ರೂ. 15,000-20,000. ಅರ್ಜಿ ಸಲ್ಲಿಸಲು ಮತ್ತು ಹೆಚ್ಚಿನ ಮಾಹಿತಿಗಾಗಿ, ಅಧಿಕೃತ ಅಧಿಸೂಚನೆಯನ್ನು ಪರಿಶೀಲಿಸಿ.
ಕೋಲಾರದ ಎಸ್ ಎನ್ ಆರ್ ಜಿಲ್ಲಾ ಆಸ್ಪತ್ರೆಯು ಅಧಿಕೃತ ಅಧಿಸೂಚನೆಯ ಮೂಲಕ ಗ್ರಂಥಪಾಲಕ/ಸಹಾಯಕ ಗ್ರಂಥಪಾಲಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಕರ್ನಾಟಕ ಸರ್ಕಾರದಲ್ಲಿ ಅದರಲ್ಲೂ ವಿಶೇಷವಾಗಿ ಕೋಲಾರದಲ್ಲಿ ವೃತ್ತಿಯನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಆಸಕ್ತ ಅಭ್ಯರ್ಥಿಗಳು ಆಗಸ್ಟ್ 05 ರಂದು ನಡೆಯುವ ನೇರ ಸಂದರ್ಶನದಲ್ಲಿ ಭಾಗಿಯಾಗಿ.
SNR ಜಿಲ್ಲಾ ಆಸ್ಪತ್ರೆಯಲ್ಲಿ ಖಾಲಿ ಹುದ್ದೆಗಳ ಅಧಿಸೂಚನೆ:
- ಸಂಸ್ಥೆಯ ಹೆಸರು : SNR ಜಿಲ್ಲಾ ಆಸ್ಪತ್ರೆ
- ಹುದ್ದೆಗಳ ಸಂಖ್ಯೆ: 1
- ಉದ್ಯೋಗ ಸ್ಥಳ: ಕೋಲಾರ, ಕರ್ನಾಟಕ
- ಹುದ್ದೆ ಹೆಸರು: ಗ್ರಂಥಪಾಲಕ/ಸಹಾಯಕ ಗ್ರಂಥಪಾಲಕ
- ವೇತನ: ತಿಂಗಳಿಗೆ ರೂ. 15,000 – 20,000/-
ಶೈಕ್ಷಣಿಕ ಅರ್ಹತೆ:
ಗ್ರಂಥಪಾಲಕ ಹುದ್ದೆಗೆ ಅರ್ಜಿ ಸಲ್ಲಿಸಲು ಬಯಸುವ ವಿದ್ಯಾರ್ಥಿಗಳು ಪದವಿ ಪಡೆದಿರುವುದು ಅಗತ್ಯ.ಇದರ ಜೊತೆಗೆ ಸಹಾಯಕ ಗ್ರಂಥಪಾಲಕ ಹುದ್ದೆಗೆ ಡಿಪ್ಲೊಮಾ ಅಗತ್ಯವಿದೆ.
ಅರ್ಜಿ ಸಲ್ಲಿಸುವುದು ಹೇಗೆ?
ಎಸ್ಎನ್ಆರ್ ಜಿಲ್ಲಾ ಆಸ್ಪತ್ರೆಯ ಗ್ರಂಥಪಾಲಕ/ಸಹಾಯಕ ಗ್ರಂಥಪಾಲಕ ಉದ್ಯೋಗಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ (ಅಧಿಕೃತ ಅಧಿಸೂಚನೆಯಲ್ಲಿ ಉಲ್ಲೇಖಿಸಿದಂತೆ) ಈ ಕೆಳಗಿನ ಸ್ಥಳದಲ್ಲಿ ಆಗಸ್ಟ್ 05 ರಂದು ನಡೆಯುವ ವಾಕ್-ಇನ್-ಇಂಟರ್ವ್ಯೂಗೆ ಹಾಜರಾಗಬಹುದು.
ಸಂದರ್ಶನ ನಡೆಯುವ ಸ್ಥಳ: ಜಿಲ್ಲಾ ಶಸ್ತ್ರಚಿಕಿತ್ಸಕರ ಕಚೇರಿ, ಎಸ್ಎನ್ಆರ್ ಜಿಲ್ಲಾ ಆಸ್ಪತ್ರೆ, ಕೋಲಾರ.
ಅಧಿಕೃತ ಅಧಿಸೂಚನೆ ಪಿಡಿಎಫ್ ಇಲ್ಲಿದೆ ನೋಡಿ:SNR-District-Hospital-Recruitment-2025-Walk-in-Interview-for-1-Librarian-Assistant-Librarian-Posts-Notification
For More Updates Join our WhatsApp Group :