ಗ್ರಾಮ ಪಂಚಾಯತ್​ನಲ್ಲಿ ನೇಮಕಾತಿ: ಗ್ರಂಥಾಲಯ ಮೇಲ್ವಿಚಾರಕ ಹುದ್ದೆ

ಬೆಂಗಳೂರು: ಹಾವೇರಿ ಜಿಲ್ಲಾ ಪಂಚಾಯತ್​ ವ್ಯಾಪ್ತಿಯಲ್ಲಿನ ಗ್ರಾಮ ಪಂಚಾಯತ್​ ಗ್ರಂಥಾಲಯ ಮೇಲ್ವಿಚಾರಕರ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಜಿಲ್ಲೆಯ 6 ತಾಲೂಕಿನಲ್ಲಿ ಒಟ್ಟು 18 ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ

ಹುದ್ದೆ ವಿವರ: ಆರು ತಾಲೂಕಿನಲ್ಲಿರುವ ಗ್ರಾಮ ಪಂಚಾಯತ್​ನಲ್ಲಿ ಈ ನೇಮಕಾತಿ ನಡೆಯಲಿದೆ.

  • ರಾಣೆಬೆನ್ನೂರು- 4
  • ಶಿಗ್ಗಾಂವ್​ – 3
  • ಹಾನಗಲ್​ 3
  • ಹಾವೇರಿ- 3
  • ಬ್ಯಾಡಗಿ – 3
  • ಸವಣೂರು – 2

ವಿದ್ಯಾರ್ಹತೆ: ಪಿಯುಸಿ ವಿದ್ಯಾರ್ಹತೆ. ಸರ್ಟಿಫಿಕೇಷನ್​ ಕೋರ್ಸ್​ ಇನ್​​ ಲೈಬ್ರರಿ ಸೈನ್ಸ್​ ಪ್ರಮಾಣಪತ್ರ ಪಡೆದಿರಬೇಕು. ಕನಿಷ್ಠ 3 ತಿಂಗಳ ಕಂಪ್ಯೂಟರ್​ ಕೋರ್ಸ್​ ಉತ್ತೀರ್ಣರಾಗಿರಬೇಕು. ಸರ್ಟಿಫಿಕೇಷನ್​ ಕೋರ್ಸ್​ ಇನ್​ ಲೈಬ್ರರಿ ಸೈನ್ಸ್​ ಪದವಿ ಪಡದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸದಿದ್ದಲ್ಲಿ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳನ್ನು ಹುದ್ದೆಗೆ ಪರಿಗಣಿಸಲಾಗುತ್ತದೆ.

ವಿಶೇಷ ಸೂಚನೆ: ಅಭ್ಯರ್ಥಿಗಳು ಸಂಬಂಧಪಟ್ಟ ಗ್ರಾಮ ಪಂಚಾಯತ್​ ವ್ಯಾಪ್ತಿಯ ನಿವಾಸಿಯಾಗಿರಬೇಕು.

ವಯೋಮಿತಿ: ಕನಿಷ್ಠ 18 ವರ್ಷ, ಗರಿಷ್ಠ 35 ವರ್ಷ ವಯೋಮಿತಿ ಹೊಂದಿರಬೇಕು. ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಪ.ಜಾತಿ, ಪ.ಪಂ ಮತ್ತು ಪ್ರವರ್ಗ 1 ಅಭ್ಯರ್ಥಿಗಳಿಗೆ 5 ವರ್ಷದವರೆಗೆ ವಯೋಮಿತಿ ಸಡಿಲಿಕೆ ಇದೆ.

ಆಯ್ಕೆ: ಮೆರಿಟ್​ ಆಧಾರದ ಮೇಲೆ ದಾಖಲಾತಿ ಪರಿಶೀಲನೆ ನಡೆಸಿ ಬಳಿಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಸಲ್ಲಿಕೆ: ಅಭ್ಯರ್ಥಿಗಳು ಆನ್​ಲೈನ್​ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಸಾಮಾನ್ಯ ಅಭ್ಯರ್ಥಿಗಳಿಗೆ 500 ರೂ, ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ 300 ರೂ., ಪ.ಜಾ, ಪ.ಪಂ ಮತ್ತು ಪ್ರವರ್ಗ ಅಭ್ಯರ್ಥಿಗಳಿಗೆ 200 ರೂ. ಮತ್ತು ವಿಕಲಚೇತನ ಅಭ್ಯರ್ಥಿಗಳಿಗೆ 100 ರೂ. ಅರ್ಜಿ ಶುಲ್ಕ ನಿಗದಿ ಪಡಿಸಲಾಗಿದೆ. ಅಭ್ಯರ್ಥಿಗಳು ಅಧಿಸೂಚನೆಯಲ್ಲಿ ನೀಡಲಾದ ಮಾಹಿತಿ ಅನುಸಾರ ಅರ್ಜಿ ಶುಲ್ಕ ಪಾವತಿಸಬೇಕಿದೆ.

ಈ ಹುದ್ದೆಗೆ ಜುಲೈ 15ರಿಂದ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಪ್ರಾರಂಭವಾಗಿದ್ದು, ಅರ್ಜಿ ಸಲ್ಲಿಕೆಗೆ ಕಡೇಯ ದಿನಾಂಕ ಜುಲೈ 31 ಆಗಿದೆ.

ಈ ಹುದ್ದೆ ಕುರಿತ ಹೆಚ್ಚಿನ ಮಾಹಿತಿ ಮತ್ತು ಅಧಿಕೃತ ಅಧಿಸೂಚನೆಗೆ ಅಭ್ಯರ್ಥಿಗಳು ಹಾವೇರಿ ಜಿಲ್ಲಾ ವೆಬ್​ಸೈಟ್​ haveri.nic.in ಭೇಟಿ ನೀಡಿ.

Leave a Reply

Your email address will not be published. Required fields are marked *