ಬೆಂಗಳೂರು: ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಮುಂದಿನ 7 ದಿನಗಳಲ್ಲಿ ವ್ಯಾಪಕವಾಗಿ ಸಾಧಾರಣ ಮಳೆ ಸಾಧ್ಯತೆಯಿದ್ದು, ಅಲ್ಲಲ್ಲಿ ಭಾರಿ ಚದುರಿದ ಸಾಧಾರಣ ಮಳೆ ನಿರೀಕ್ಷಿಸಲಾಗಿದೆ. ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಹಗುರದಿಂದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಇಂದು ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದ್ದು, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳ ಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ಇಂದು ರಾಜ್ಯದ ಕರಾವಳಿ & ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಂತ ಮಲೆನಾಡು ಜಿಲ್ಲೆಗಳಿಗೆ ವ್ಯಾಪಕವಾಗಿ ಸಾಧಾರಣದಿಂದ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಅಲ್ಲಲ್ಲಿ ಅತಿ ಭಾರಿ ಹಾಗೂ ಅತ್ಯಅಧಿಕ ಮಳೆ. ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಚದುರಿದಂತೆ ಹಗುರದಿಂದ ಸಾದಾರಣ ಮಳೆ ಹಾಗೂ ಅಲ್ಲಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಯೆಲ್ಲೋ – ಅಲರ್ಟ್ ಘೋಷಣೆಯಾಗಿದ್ದು, ಮುಂಜಾಗ್ರತಾ ಕ್ರಮವಾಗಿ ವಿಪತ್ತು ನಿರ್ವಹಣಾ ಪ್ರಾಧಿಕಾರವು ಈ ಕೆಳಗಿನಂತೆ ತುರ್ತು ಕ್ರಮಗಳನ್ನು ಕೈಗೊಂಡಿರುತ್ತದೆ.
ಜಿಲ್ಲಾ ವಿಪತ್ತು ನಿರ್ವಹಣೆಯಿಂದ ಮುನ್ನೆಚ್ಚರಿಕೆ:
• ನೀರು ಇರುವ ತಗ್ಗು ಪ್ರದೇಶ, ಕೆರೆ. ನದಿತೀರ ಸಮುದ್ರತೀರಕ್ಕೆ ಮಕ್ಕಳು ಹೋಗದಂತೆ ಪಾಲಕರು ಜಾಗ್ರತೆ ವಹಿಸುವುದು.
• ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಈ ಮೂಲಕ ಸೂಚನೆ ನೀಡಿದೆ.
• ಜಿಲ್ಲಾ ಮಟ್ಟದ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು, ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿರತಕ್ಕದು ಹಾಗೂ ವಿಪತ್ತು ನಿರ್ವಹಣೆಯನ್ನು ಚಾಚೂ ತಪ್ಪದೇ ಕಡ್ಡಾಯವಾಗಿ ನಿರ್ವಹಿಸುವುದು.
• ಜಿಲ್ಲಾಡಳಿತದಿಂದ ವಿವಿಧ ಪ್ರದೇಶಗಳಿಗೆ ನೇಮಿಸಲಾಗಿರುವ ನೋಡಲ್ ಅಧಿಕಾರಿಗಳು ಸದಾ ಜಾಗೃತರಾಗಿದ್ದು, ಸಾರ್ವಜನಿಕ ದೂರುಗಳಿಗೆ ತಕ್ಷಣ ಸ್ಪಂದಿಸುವುದು ಮತ್ತು ಜಿಲ್ಲಾಧಿಕಾರಿ ಕಛೇರಿಯ ನಿಯಂತ್ರಣ ಕೊಠಡಿಯೊಂದಿಗೆ ನಿರಂತರ ಸಂಪರ್ಕದಲ್ಲಿರುವುದು.
• ಪ್ರವಾಸಿಗರು / ಸಾರ್ವಜನಿಕರು ನದಿತೀರಕ್ಕೆ, ಸಮುದ್ರತೀರಕ್ಕೆ ತೆರಳದಂತೆ ಸೂಚಿಸಲಾಗಿದೆ.