ಭಾರತೀಯ ರೈಲ್ವೆಯ ಚೆನ್ನೈನ ಇಂಟಿಗ್ರಲ್ ಕೋಚ್ ಫ್ಯಾಕ್ಟರಿ (ಐಸಿಎಫ್) 1010 ಅಪ್ರೆಂಟಿಸ್ ಹುದ್ದೆಗಳಿಗೆ ನೇಮಕಾತಿ ನಡೆಸುತ್ತಿದೆ. ಜುಲೈ 12 ರಿಂದ ಆಗಸ್ಟ್ 11 ರವರೆಗೆ ಅರ್ಜಿ ಸಲ್ಲಿಸಬಹುದು. 10ನೇ ತರಗತಿ ಮತ್ತು ಐಟಿಐ ಅರ್ಹತೆ ಹೊಂದಿರುವವರು ಅರ್ಜಿ ಸಲ್ಲಿಸಬಹುದು. ವಯೋಮಿತಿ ಮತ್ತು ಶುಲ್ಕದ ವಿವರಗಳು ವೆಬ್ಸೈಟ್ನಲ್ಲಿ ಲಭ್ಯವಿದೆ (pb.icf.gov.in). ಆಯ್ಕೆ 10ನೇ ತರಗತಿ ಅಂಕಗಳ ಆಧಾರದ ಮೇಲೆ. ಸ್ಟೈಫಂಡ್ ತಿಂಗಳಿಗೆ 6000 ರಿಂದ 7000 ರೂಪಾಯಿ ಸಿಗಲಿದೆ.

ಭಾರತೀಯ ರೈಲ್ವೆಯ ಚೆನ್ನೈ ಮೂಲದ ಇಂಟಿಗ್ರಲ್ ಕೋಚ್ ಫ್ಯಾಕ್ಟರಿ ಹಲವಾರು ಅಪ್ರೆಂಟಿಸ್ ಹುದ್ದೆಗಳಿಗೆ ನೇಮಕಾತಿಗಳನ್ನು ಪ್ರಕಟಿಸಿದ್ದು, ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಐಸಿಎಫ್ pb.icf.gov.in ನ ಅಧಿಕೃತ ವೆಬ್ಸೈಟ್ ಮೂಲಕ ಈ ನೇಮಕಾತಿಗೆ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬಹುದು. ನೋಂದಣಿ ಪ್ರಕ್ರಿಯೆಯು ಜುಲೈ 12 ರಂದು ಪ್ರಾರಂಭವಾಗಿದ್ದು, ಆಗಸ್ಟ್ 11 ರ ವರೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಈ ನೇಮಕಾತಿ ಅಭಿಯಾನದ ಅಡಿಯಲ್ಲಿ, ಕೋಚ್ ಕಾರ್ಖಾನೆಯಲ್ಲಿ ಒಟ್ಟು 1010 ಅಪ್ರೆಂಟಿಸ್ ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲಾಗುತ್ತದೆ.
10ನೇ ತರಗತಿ ಮತ್ತು ಐಟಿಐ ಹೊಂದಿರುವ ಅಭ್ಯರ್ಥಿಗಳು ಈ ನೇಮಕಾತಿಗೆ ಅರ್ಜಿ ಸಲ್ಲಿಸಬಹುದು. ಐಟಿಐ ಅಭ್ಯರ್ಥಿಗಳ ವಯೋಮಿತಿ 15 ರಿಂದ 24 ವರ್ಷಗಳ ನಡುವೆ ಇರಬೇಕು, ಐಟಿಐ ಅಲ್ಲದ ಅಭ್ಯರ್ಥಿಗಳ ವಯಸ್ಸು 15 ವರ್ಷಕ್ಕಿಂತ ಕಡಿಮೆಯಿರಬಾರದು ಮತ್ತು 22 ವರ್ಷಗಳಿಗಿಂತ ಹೆಚ್ಚಿರಬಾರದು. ಆದಾಗ್ಯೂ, ಸರ್ಕಾರಿ ನಿಯಮಗಳ ಪ್ರಕಾರ, ಎಸ್ಸಿ-ಎಸ್ಟಿ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗುತ್ತದೆ.
ಅರ್ಜಿ ಶುಲ್ಕ ಎಷ್ಟು?
ಅಪ್ರೆಂಟಿಸ್ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 100 ರೂ. ಅರ್ಜಿ ಶುಲ್ಕವನ್ನು ಪಾವತಿಸಬೇಕಾಗುತ್ತದೆ. ಆದಾಗ್ಯೂ, SC/ST/PWD/ಮಹಿಳಾ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸಬೇಕಾಗಿಲ್ಲ. ಶುಲ್ಕವನ್ನು ಆನ್ಲೈನ್ ಮೂಲಕ ಪಾವತಿಸಬೇಕು.
ಆಯ್ಕೆ ಪ್ರಕ್ರಿಯೆ ಏನು?
10 ನೇ ತರಗತಿಯಲ್ಲಿ ಅವರು ಪಡೆದ ಅಂಕಗಳ ಆಧಾರದ ಮೇಲೆ ಅಭ್ಯರ್ಥಿಗಳ ಮೆರಿಟ್ ಪಟ್ಟಿಯನ್ನು ಸಿದ್ಧಪಡಿಸಲಾಗುತ್ತದೆ.
ಆಯ್ಕೆಯಾದವರಿಗೆ ಎಷ್ಟು ಸ್ಟೈಫಂಡ್ ಸಿಗಲಿದೆ?
ಹೊಸಬರು ಈ ವರ್ಷ 10 ನೇ ತರಗತಿ ಪಾಸಾದ ವಿದ್ಯಾರ್ಥಿಗಳಿಗೆ ತಿಂಗಳಿಗೆ 6000 ರೂ. ಸ್ಟೈಫಂಡ್ ಸಿಗುತ್ತದೆ. ಇದಲ್ಲದೇ ಪಿಯುಸಿ ಪಾಸಾದವರಿಗೆ ತಿಂಗಳಿಗೆ 7000 ರೂ. ಹಾಗೂ ಐಟಿಐ ಪಾಸ್ (ರಾಷ್ಟ್ರೀಯ ಮತ್ತು ರಾಜ್ಯ ಪ್ರಮಾಣಪತ್ರ ಹೊಂದಿರುವವರು) ತಿಂಗಳಿಗೆ 7000 ರೂ. ಸಿಗಲಿದೆ.




