ಪಶು ವೈದ್ಯಾಧಿಕಾರಿಗಳ ಹುದ್ದೆಗಳ ನೇಮಕಾತಿ : ಅರ್ಜಿ ಆಹ್ವಾನ

ಕೆಲಸದ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್

ಬೆಂಗಳೂರು: ಪಶುಪಾಲನಾ ಮತ್ತು ಪಶು ವೈದ್ಯ ಸೇವಾ ಇಲಾಖೆಯಿಂದ 400 ಪಶು ವೈದ್ಯಾಧಿಕಾರಿಗಳ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಗುತ್ತಿಗೆ ಆಧಾರದ ಮೇಲೆ ಈ ಹುದ್ದೆಗಳ ಭರ್ತಿ ನಡೆಸಲಾಗುವುದು. ಬಿವಿಎಸ್ಸಿ ಪದವೀಧರರು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ.

ವಿದ್ಯಾರ್ಹತೆ: ಅಭ್ಯರ್ಥಿಗಳು ಕಾನೂನಿಂದ ಸ್ಥಾಪಿತವಾದ ಪಶುವೈದ್ಯಕೀಯ ವಿಜ್ಞಾನ ವಿಶ್ವವಿದ್ಯಾಲಯ ಅಥವಾ ಕೃಷಿ ವಿಶ್ವವಿದ್ಯಾಲಯದಿಂದ ಬಿವಿಎಸ್ಸಿ, ಬಿವಿಎಸ್ಸಿ ಅಂಡ್​ ಎಹೆಚ್ ಪದವಿಯನ್ನು ಪೂರ್ಣಗೊಳಿಸಿರಬೇಕು.

ವಯೋಮಿತಿ: ಅಭ್ಯರ್ಥಿಗಳು ಕನಿಷ್ಠ 18 ವರ್ಷ, ಗರಿಷ್ಠ ಅಭ್ಯರ್ಥಿ 35 ವರ್ಷ ಭರ್ತಿಯಾಗಿರಬೇಕು. ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ 3 ವರ್ಷ, ಪ.ಜಾ, ಪ.ಪಂ ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಸಡಿಲಿಕೆ ಮಾಡಲಾಗಿದೆ.

ಅರ್ಜಿ ಸಲ್ಲಿಕೆ: ಅಭ್ಯರ್ಥಿಗಳು ಆನ್​ಲೈನ್​ ಮೂಲಕ ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ. ಅಭ್ಯರ್ಥಿಗಳು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಈ ಹುದ್ದೆಗೆ ಅಭ್ಯರ್ಥಿಗಳು ಜೂನ್​ 14ರಿಂದ ಅರ್ಜಿ ಸಲ್ಲಿಕೆ ಮಾಡಬಹುದಾಗಿದ್ದು, ಅರ್ಜಿ ಸಲ್ಲಿಕೆಗೆ ಕಡೇಯ ದಿನ ಜೂನ್​ 24 ಆಗಿದೆ.

ಈ ಹುದ್ದೆ ಕುರಿತು ಹೆಚ್ಚಿನ ಮಾಹಿತಿ ಮತ್ತು ಅಧಿಕೃತ ಅಧಿಸೂಚನೆಗೆ ಅಭ್ಯರ್ಥಿಗಳು ahvs.karnataka.gov.in ಭೇಟಿ ನೀಡಿ

Leave a Reply

Your email address will not be published. Required fields are marked *