ರೇಣುಕಾ ಸ್ವಾಮಿ ಕೊ* ಪ್ರಕರಣ: ವಕೀಲರಿಗೆ ದಂಡ, ದರ್ಶನ್ ಭೇಟಿಗೆ ಅನುಮತಿ.
ರೇಣುಕಾ ಸ್ವಾಮಿ ಕೊಲೆ ಪ್ರಕರಣದ ವಿಚಾರಣೆ ಚಾಲ್ತಿಯಲ್ಲಿದೆ. 57ನೇ ಸಿಸಿಹೆಚ್ ನ್ಯಾಯಾಲಯದಲ್ಲಿ ವಿಚಾರಣೆ ಚಾಲ್ತಿಯಲ್ಲಿದ್ದು, ಆರೋಪಿಗಳ ಪರ ವಕೀಲರು ವಾದ ಮಂಡನೆ ಮಾಡುತ್ತಿದ್ದಾರೆ. ಕಳೆದ ವಿಚಾರಣೆ ವೇಳೆ, ಪ್ರಕರಣದ ಆರೋಪಿಗಳಲ್ಲಿ ಒಬ್ಬನಾದ ಪವನ್ (ಎ3) ಪರ ವಕೀಲರು, ಪ್ರಕರಣದ ತನಿಖಾಧಿಕಾರಿಗಳ ವಿರುದ್ಧವೇ ಆರೋಪ ಮಾಡಿದ್ದರು ಮಾತ್ರವಲ್ಲದೆ, ತನಿಖಾಧಿಕಾರಿಗಳಲ್ಲಿ ಒಬ್ಬರಾಗಿರುವ ಎಸಿಪಿ ಚಂದನ್ ಅವರನ್ನು ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಯನ್ನಾಗಿ ಪರಿಗಣಿಸಬೇಕು ಎಂದು ವಾದಿಸಿದ್ದರು.
ಬಳಿಕ ನ್ಯಾಯಾಲವು ವಿಚಾರಣೆ ಮುಂದೂಡಿತ್ತು. ಪವನ್ ಪರ ವಕೀಲರ ಅರ್ಜಿ ಕುರಿತು ಆದೇಶ ನೀಡಿರುವ ನ್ಯಾಯಾಲಯವು, ಪವನ್ ಪರ ವಕೀಲರಿಗೆ ದಂಡ ವಿಧಿಸಿದೆ. ಆರೋಪಿಗಳ ಮೊಬೈಲ್ ಗಳನ್ನು ವಶಕ್ಕೆ ಪಡೆಯುವಾಗ ಪೊಲೀಸರು ಫೋಟೋ ತೆಗೆದಿದ್ದರು. ಆ ಫೋಟೊನಲ್ಲಿರುವ ಟೈಲ್ಸ್ನ ಬಣ್ಣವನ್ನು ಉಲ್ಲೇಖಿಸಿ, ತನಿಖಾಧಿಕಾರಿಗಳ ವಿರುದ್ಧ ಸುಳ್ಳು ಸಾಕ್ಷ್ಯ ಸೃಷ್ಟಿ, ಸಾಕ್ಷ್ಯ ತಿದ್ದಿದ ಆರೋಪಗಳನ್ನು ಪವನ್ ಪರ ವಕೀಲರು ಮಾಡಿದ್ದರು. ಆದರೆ ನ್ಯಾಯಾಲವು ಅರ್ಜಿಯನ್ನು ತಿರಸ್ಕರಿಸಿದ್ದು ಮಾತ್ರವೇ ಅಲ್ಲದೆ, ನ್ಯಾಯಾಲಯದ ಸಮಯ ಹಾಳು ಮಾಡಿದ್ದಕ್ಕೆ ವಕೀಲರಿಗೆ ಐದು ಸಾವಿರ ರೂಪಾಯಿ ದಂಡ ಸಹ ಹೇರಿದೆ. ಈ ಹಣವನ್ನು ಕಾನೂನು ಸೇವೆಗಳ ಪ್ರಾಧಿಕಾರಕ್ಕೆ ನೀಡಲು ಸೂಚನೆ ನೀಡಿದೆ.
ರೇಣುಕಾ ಸ್ವಾಮಿ ಕೊಲೆ ಪ್ರಕರಣ ನಡೆದು ಎರಡು ವರ್ಷವಾಗುತ್ತಾ ಬಂದಿದೆ. ನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಹಲವು ಆರೋಪಿಗಳು ಈ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿದ್ದಾರೆ. ದರ್ಶನ್, ಜೈಲು ಸೇರಿ ಬಳಿಕ ಜಾಮೀನು ಪಡೆದು ಹೊರಬಂದಿದ್ದರು. ಆದರೆ ಸುಪ್ರೀಂಕೋರ್ಟ್ ಮತ್ತೆ ಅವರಿಗೆ ನ್ಯಾಯಾಂಗ ಬಂಧನ ವಿಧಿಸಿದೆ. ಇದೀಗ ದರ್ಶನ್ ಸೇರಿದಂತೆ ಹಲವು ಆರೋಪಿಗಳು ಪರಪ್ಪನ ಅಗ್ರಹಾರ ಸೇರಿದಂತೆ ಇತರೆ ಕೆಲವು ಜೈಲುಗಳಲ್ಲಿ ಇದ್ದಾರೆ. ದರ್ಶನ್ ಪರ ವಕೀಲರು ಮತ್ತೆ ಜಾಮೀನಿಗೆ ಅರ್ಜಿ ಹಾಕಿಲ್ಲ ಆದರೆ ವಿಚಾರಣೆಯನ್ನು ಬೇಗನೆ ನಡೆಸುವಂತೆ ನ್ಯಾಯಾಲಯದ ಬಳಿ ಮನವಿ ಮಾಡಿದ್ದಾರೆ. ಆದರೆ ಎಸ್ಪಿಪಿ ಅವರು ಸತತ ವಿಚಾರಣೆ ಅಥವಾ ತ್ವರಿತ ವಿಚಾರಣೆಗೆ ಒಪ್ಪಿಲ್ಲ.
For More Updates Join our WhatsApp Group :



