ಮಗಳಿಗೆ ಪರೀಕ್ಷೆ ಸಮೀಪವಿದ್ದರೂ ಕೋರ್ಟ್ ಜಾಮೀನನ್ನು ನೀಡಲು ತಿರಸ್ಕರಿಸಿದೆ.
ಬೆಂಗಳೂರು: ರೇಣುಕಾ ಸ್ವಾಮಿ ಕೊಲೆ ಕೇಸ್ನಲ್ಲಿ ಎ1 ಆಗಿರೋ ಪವಿತ್ರಾ ಗೌಡ ಅವರು ಜಾಮೀನು ಪಡೆಯಬೇಕು ಎಂದು ಎಲ್ಲಿಲ್ಲದ ಪ್ರಯತ್ನ ಮಾಡುತ್ತಿದ್ದಾರೆ. ಆದರೆ, ಅದು ಸಾಧ್ಯವಾಗುತ್ತಿಲ್ಲ. ಈಗ ಮಗಳಿಗೆ ಪರೀಕ್ಷೆ ಸಮೀಪಿಸಿದ್ದರಿಂದ ಮಧ್ಯಂತರ ಜಾಮೀನು ನೀಡಬೇಕು ಎಂದು ಪವಿತ್ರಾ ಅವರು ಕೋರ್ಟ್ನಲ್ಲಿ ಕೋರಿದ್ದರು. ಆದರೆ, ಕೋರ್ಟ್ ಈ ಮನವಿಯನ್ನು ತಿರಸ್ಕರಿಸಿದೆ. ಇದರಿಂದ ಜೈಲುವಾಸ ಮುಂದುವರಿಸಬೇಕಾದ ಅನಿವಾರ್ಯತೆ ಎದುರಾಗಿದೆ.
ಪವಿತ್ರಾ ಗೌಡ ಅವರು ದರ್ಶನ್ ಆಪ್ತೆ ಎನಿಸಿಕೊಂಡಿದ್ದರು. ಇಬ್ಬರೂ ಲಿವಿನ್ ರಿಲೇಶನ್ಶಿಪ್ನಲ್ಲಿ ಇದ್ದ ಬಗ್ಗೆ ಚಾರ್ಜ್ಶಿಟ್ನಲ್ಲಿ ಉಲ್ಲೇಖಿಸಲಾಗಿದೆ. ಪವಿತ್ರಾಗೆ ಚಿತ್ರದುರ್ಗದ ರೇಣುಕಾಸ್ವಾಮಿ ಎಂಬಾತ ಕಿರುಕುಳ ನೀಡಿದ್ದ. ಈ ವಿಷಯ ದರ್ಶನ್ ಕಿವಿಗೂ ಬಿತ್ತು. ಹೀಗಾಗಿ, ಆತನನ್ನು ಬೆಂಗಳೂರಿಗೆ ಕರೆಸಿ, ಪಟ್ಟಣಗೆರೆ ಶೆಡ್ನಲ್ಲಿ ಆತನ ಹಲ್ಲೆ ಮಾಡಿ ಕೊಲೆ ಮಾಡಲಾಗಿದೆ. ಈ ವೇಳೆ ಪವಿತ್ರಾ ಗೌಡ, ದರ್ಶನ್ ಕೂಡ ಸ್ಥಳದಲ್ಲಿ ಇದ್ದರು ಮತ್ತು ಹಲ್ಲೆ ಮಾಡಿದ್ದರು ಎಂದು ಆರೋಪಿಸಲಾಗಿದೆ.
ಈ ಪ್ರಕರಣದಲ್ಲಿ ಪವಿತ್ರಾ ಗೌಡ ಅವರು ಎ1 ಆರೋಪಿ ಆಗಿದ್ದಾರೆ. ದರ್ಶನ್ ಎ2 ಆಗಿದ್ದಾರೆ. ಪವಿತ್ರಾಗೆ ಇರೋದು ಎಂದರೆ ಮಗಳು ಮಾತ್ರ. ಅವಳಿಗೆ ಪರೀಕ್ಷೆ ಸಮೀಪಿಸಿದೆ. ಹೀಗಾಗಿ, 25 ದಿನಗಳ ಮಧ್ಯಂತ ಜಾಮೀನು ನೀಡಿ ಎಂದು ಕೋರ್ಟ್ ಅಲ್ಲಿ ಮನವಿ ಮಾಡಿದ್ದರು. ಆದರೆ, ಇದನ್ನು ಕೋರ್ಟ್ ನಿರಾಕರಿಸಿದೆ. ಬೆಂಗಳೂರಿನ 57ನೇ ಸಿಸಿಹೆಚ್ ಕೋರ್ಟ್ ಪವಿತ್ರಾಗೆ ಜಾಮೀನು ನೀಡಲು ನಿರಾಕರಿಸಿದೆ.
ಈ ಮೊದಲು ಪವಿತ್ರಾ ಅವರು ಮನೆ ಊಟಕ್ಕೆ ಬೇಡಿಕೆ ಇಟ್ಟಿದ್ದರು. ಜೈಲು ಊಟದಿಂದ ಆರೋಗ್ಯ ಸಮಸ್ಯೆ ಆಗುತ್ತಿದೆ ಎಂದು ಹೇಳಿದ್ದರು. ಕೆಲ ದಿನ ಇದಕ್ಕೆ ಅವಕಾಶ ಇತ್ತು. ನಂತರ ಇದನ್ನು ರದ್ದು ಮಾಡಲಾಯಿತು.
For More Updates Join our WhatsApp Group :




