ರೇಣುಕಾಸ್ವಾಮಿ ಕೊ* ಪ್ರಕರಣ: ದರ್ಶನ್, ಪವಿತ್ರಾ ಸೇರಿ 7 ಆರೋಪಿಗಳ ಜಾಮೀನು ರದ್ದು. | Darshan, Pavithra

ರೇಣುಕಾಸ್ವಾಮಿ ಕೊ* ಪ್ರಕರಣ: ದರ್ಶನ್, ಪವಿತ್ರಾ ಸೇರಿ 7 ಆರೋಪಿಗಳ ಜಾಮೀನು ರದ್ದು. | Darshan, Pavithra

ಬೆಂಗಳೂರು,: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಜತೆ ಪವಿತ್ರಾ ಸೇರಿ 7 ಆರೋಪಿಗಳ ಜಾಮೀನನ್ನು ಸುಪ್ರೀಂಕೋರ್ಟ್​ ರದ್ದುಪಡಿದಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ದರ್ಶನ್ ಅವರ ಜಾಮೀನು ರದ್ದು ಕೋರಿ ರಾಜ್ಯ ಸರ್ಕಾರ ರಾಜ್ಯ ಸರ್ಕಾರ ಸಲ್ಲಿಸಿರುವ ಅರ್ಜಿಯ ಆದೇಶ ಇಂದು ಹೊರಬಿದ್ದಿದೆ. ಅರ್ಜಿಯ ವಿಚಾರಣೆ ನಡೆಸಿರುವ ಸುಪ್ರೀಂ ಕೋರ್ಟ್​ನ ಜಸ್ಟೀಸ್ ಜೆ.ಬಿ.ಪರ್ದಿವಾಲಾ, ಜಸ್ಟೀಸ್ ಮಹದೇವನ್​ ಪೀಠವು ಈ ಮಹತ್ವದ ತೀರ್ಪು ನೀಡಿದೆ.

ಈ ಕೊಲೆ ಪ್ರಕರಣದಲ್ಲಿ ಎ1 ಪವಿತ್ರಾಗೌಡ, ಎ2 ದರ್ಶನ್, ಎ6 ಜಗದೀಶ್ ಅಲಿಯಾಸ್ ಜಗ್ಗ, ಎ7 ಅನುಕುಮಾರ್ ಅಲಿಯಾಸ್ ಅನು, ಎ14 ಪ್ರದೋಶ್ , ಎ11 ನಾಗರಾಜು ಅಲಿಯಾಸ್ ನಾಗ, ಎ12 ಲಕ್ಷ್ಮಣ್ ಜಾಮೀನು ರದ್ದು ಪಡಿಸಲಾಗಿದೆ.

ಮೃತ ರೇಣುಕಾಸ್ವಾಮಿ ಆರೋಪಿ ದರ್ಶನ್ ಅಭಿಮಾನಿಯಾಗಿದ್ದ. ಆರೋಪಿ ದರ್ಶನ್ ಜೊತೆ ಪವಿತ್ರಗೌಡ ಲಿವ್-ಇನ್ ಸಂಬಂಧದಲ್ಲಿದ್ದರು. ರೇಣುಕಾ ಪವಿತ್ರಾಗೆ ಇನ್​ಸ್ಟಾದಲ್ಲಿ ಅಶ್ಲೀಲ ಸಂದೇಶ ಕಳುಹಿಸಿದ್ದ. ರೇಣುಕಾಸ್ವಾಮಿಯನ್ನ ಅಪಹರಿಸಿ, ಶೆಡ್​​​ನಲ್ಲಿ ಕೊಲೆ ಮಾಡಿದ್ದರು. ಆರೋಪಿಗಳು ಕೊಲೆ ಆದ ಸ್ಥಳದಲ್ಲಿದ್ದರು ಎಂಬುದು ತನಿಖೆಯಲ್ಲಿ ಬಯಲಾಗಿದೆ. ಕಿಡ್ನ್ಯಾಪ್ ವೇಳೆ, ಕೊಲೆ ಸ್ಥಳದಲ್ಲಿ ಆರೋಪಿಗಳಿದ್ದಿದ್ದು ತಿಳಿದುಬಂದಿದೆ.

ಕೊಲೆ ನಡೆದ ಸ್ಥಳದಲ್ಲಿನ ಮಣ್ಣಿನ ಮಾದರಿ, ದರ್ಶನ್, A4 ರಾಘವೇಂದ್ರ, ನಂದೀಶ್ ಮತ್ತು ನಾಗರಾಜು ಪಾದರಕ್ಷೆಗಳಲ್ಲಿ ಸಿಕ್ಕ ಮಾದರಿ ಹೊಂದಾಣಿಕೆ ಆಗಿದೆ. ಡಿಎನ್​ಎಯಲ್ಲೂ ಮೃತನ ರಕ್ತದ ಕಲೆಗಳು ಕೆಲ ಆರೋಪಿಗಳ ಬಟ್ಟೆಗಳ ಮೇಲೆ ಇದೆ. ಕೊಲೆ ನಡೆದ ಸಮಯದಲ್ಲಿ ಪವಿತ್ರಾ ಗೌಡ ಮತ್ತು A2 ದರ್ಶನ್  ಭಾಗಿ ಆಗಿದ್ದಾರೆ.

ಹೈಕೋರ್ಟ್ ಜಾಮೀನು ನೀಡಿದ್ದು ಸರಿ ಇಲ್ಲ, ದಾಖಲೆಗಳಿಗೆ ವಿರುದ್ಧ ತೀರ್ಪು ನೀಡಲಾಗಿದೆ. ಕೊಲೆ ಮಾಡಲು ಬಳಸಿದ ಆಯುಧಗಳು ಮಾರಕವಲ್ಲ ಅಂದಿರೋದು ತಪ್ಪು. ಮೃತನ ರೇಣುಕಾ ಮೈ ಮೇಲಿನ ಗಾಯಗಳು ಇದನ್ನು ಸುಳ್ಳಾಗಿಸುತ್ತವೆ. ಸಾಕ್ಷಿ ಹೇಳಿಕೆ ತಡವಾಗಿ ದಾಖಲಿಸಲಾಗಿದೆ ಅಂತ ಅನುಮಾನಿಸಿದ್ದು ಸರಿಯಲ್ಲ.

ವಿಳಂಬಕ್ಕೆ ಸೂಕ್ತ ಕಾರಣಗಳನ್ನು ನೀಡಲಾಗಿದೆ ಎಂದು ಸರ್ಕಾರ ಹೇಳಿದೆ. ಸೂಕ್ತ ಎಫ್​​ಎಸ್​ಎಳ್, ಎಲೆಕ್ಟ್ರಾನಿಕ್ ಮತ್ತು ಸಿಡಿಆರ್ ಪುರಾವೆಗಳಿವೆ  ಎಂದು ಪರಿಗಣಿಸಿಲ್ಲ. ಜಾಮೀನು ವಿಚಾರಣೆ ಹಂತದಲ್ಲಿ ಹೈಕೋರ್ಟ್ ಮಿನಿ ಟ್ರಯಲ್ ನಡೆಸಿದೆ. ಕೊಲೆ ಆರೋಪಿ ದರ್ಶನ್​ಗೆ ಈ ಹಿಂದೆ ಕೂಡ ಅಪರಾಧದ ಹಿನ್ನೆಲೆ ಇದೆ. ಬೆನ್ನು ನೋವಿನ ಅಂತ ಕೋರ್ಟ್​​​ ಹಾಜರಾಗೋದ್ರಿಂದ ವಿನಾಯಿತಿ ಪಡೆದಿದ್ರು. ಮರು ದಿನವೇ ದರ್ಶನ್​​ ಚಲನಚಿತ್ರ ಪ್ರದರ್ಶನದಲ್ಲಿ ಭಾಗವಹಿಸಿದ್ದಾರೆ ಎಂದು ಸರ್ಕಾರ ವಾದ ಮಂಡಿಸಿತ್ತು.

For More Updates Join our WhatsApp Group :

https://chat.whatsapp.com/JVoHqE476Wn3pVh1gWNAcH

Leave a Reply

Your email address will not be published. Required fields are marked *