ರೇಣುಕಾಸ್ವಾಮಿ ಹತ್ಯೆ ಪ್ರಕರಣ: ಪವಿತ್ರಾ ಗೌಡ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಯಲ್ಲಿ ಚಿಕಿತ್ಸೆ

Another difficulty for Pavitra Gowda; Renukaswamy's blood stain was also found on her slippers

Another difficulty for Pavitra Gowda; Renukaswamy's blood stain was also found on her slippers

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಪವಿತ್ರಾ ಗೌಡ ಮಂಗಳವಾರ ಅಸ್ವಸ್ಥರಾದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಿ, ಬಳಿಕ ಪೊಲೀಸ್ ಠಾಣೆಗೆ ಕರೆತರಲಾಗಿದೆ.

ಅನ್ನಪೂರ್ಣೇಶ್ವರಿನಗರ ಪೊಲೀಸ ಠಾಣೆಯಲ್ಲಿ ಕೊಲೆ ಪ್ರಕರಣದ ಆರೋಪಿಗಳ ವಿಚಾರಣೆ ಮುಂದುವರೆದಿದೆ. ಮಂಗಳವಾರ ಪವಿತ್ರಾ ಗೌಡ ಅವರ ದೇಹದಲ್ಲಿ ಗ್ರೂಕೋಸ್ ಪ್ರಮಾಣ ಕಡಿಮೆಯಾಗಿದ್ದ ಹಿನ್ನೆಲೆಯಲ್ಲಿ ಅಸ್ವಸ್ಥಗೊಂಡಿದ್ದರು.

ಕೂಡಲೇ ಪೊಲೀಸರು ಆಕೆಯನ್ನು ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದಿದ್ದರು. ಈ ವೇಳೆ ವೈದ್ಯರು ಆಕೆಯ ಆರೋಗ್ಯ ತಪಾಸಣೆ ನಡೆಸಿ ಐವಿ ಫ್ಲ್ಯೂಯೆಡ್ ಹಾಕಿದ್ದಾರೆ. ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದ ಹಿನ್ನೆಲೆಯಲ್ಲಿ ವೈದ್ಯರ ಸಲಹೆ ಮೇರೆಗೆ ಪೊಲೀಸರು ಆಕೆಯನ್ನು ಮತ್ತೆ ಠಾಣೆಗೆ ಕರೆತಂದಿದ್ದಾರೆ.

Leave a Reply

Your email address will not be published. Required fields are marked *