‘ಛತ್ರಪತಿ ಶಿವಾಜಿ’ ಪಾತ್ರದಲ್ಲಿ ಕಾಣಿಸಿಕೊಂಡ ರಿಷಬ್ ಶೆಟ್ಟಿ : ಅಭಿಮಾನಿಗಳು ದಿಲ್ಖುಷ್

'ಛತ್ರಪತಿ ಶಿವಾಜಿ' ಪಾತ್ರದಲ್ಲಿ ಕಾಣಿಸಿಕೊಂಡ ರಿಷಬ್ ಶೆಟ್ಟಿ : ಅಭಿಮಾನಿಗಳು ದಿಲ್ಖುಷ್

ನಟ ರಿಷಬ್ ಶೆಟ್ಟಿ ಅವರಿಗೆ ಕಾಂತರ ಬಳಿಕ ಇದೀಗ ಎಲ್ಲಾ ಇಂಡಸ್ಟ್ರಿ ಗಳಿಂದಲೂ  ಅವರಿಗೆ ಬಾರಿ ಬೇಡಿಕೆ ಹೆಚ್ಚಾಗಿದೆ. ಈಗಾಗಲೇ  ತೆಲುಗಿನಲ್ಲಿ ‘ಹನುಮಾನ್’ ಸಿನಿಮಾ ಘೋಷಣೆಯಾಗಿದ್ದು, ಇದೀಗ ನಟ ರಿಷಬ್ ಶೆಟ್ಟಿ ಅವರ ‘ದಿ ಪ್ರೈಡ್ ಆಫ್ ಭಾರತ್ ಛತ್ರಪತಿ ಶಿವಾಜಿ ಮಹಾರಾಜ್’ ಎಂಬ ಸಿನಿಮಾ ಸಹ ಘೋಷಣೆಯಾಗಿದೆ.

ಈ ಚಿತ್ರವನ್ನು ಸಂದೀಪ್ ಸಿಂಗ್ ನಿರ್ದೇಶನ ಮಾಡುತ್ತಿದ್ದಾರೆ. ಈಗಾಗಲೇ ಚಿತ್ರತಂಡ 2027ರ ಜನವರಿ 21ರಂದು ವಿಶ್ವದಾದ್ಯಂತ ಸಿನಿಮಾ ಬಿಡುಗಡೆಯಾಗಲಿದೆ ಎಂದು ಸಹ ತಿಳಿಸಿದೆ.

ಸಂದೀಪ್ ಸಿಂಗ್ ಅವರು 2024ರ ಫೆಬ್ರುವರಿ 16ರಂದು ಈ ಸಿನಿಮಾವನ್ನು ಘೋಷಿಸಿದ್ದರು. ಹಿಂದಿ, ಮರಾಠಿ, ಕನ್ನಡ, ತಮಿಳು ಸೇರಿ ಆರು ಭಾಷೆಗಳಲ್ಲಿ ಸಿನಿಮಾ ಬಿಡುಗಡೆಯಾಗಲಿದೆ.

ಛತ್ರಪತಿ ಶಿವಾಜಿ ಪಾತ್ರದಲ್ಲಿ ರಿಷಬ್ ಶೆಟ್ಟಿ ನಟಿಸುತ್ತಿದ್ದಾರೆ. ಹಿಂದಿಯಲ್ಲಿ ಅನೇಕ ಸೂಪರ್ ಹಿಟ್ ಸಿನಿಮಾಗಳನ್ನು ನೀಡಿರುವ ನಿರ್ದೇಶಕ ಸಂದೀಪ್ ಸಿಂಗ್ ಈ ಸಿನಿಮಾ ನಿರ್ದೇಶನ ಮಾಡಲಿದ್ದಾರೆ. ಸಿನಿಮಾದ ಮೊದಲ ಪೋಸ್ಟರ್ ಈಗಾಗಲೇ ಬಿಡುಗಡೆಯಾಗಿದ್ದು, ಛತ್ರಪತಿ ಶಿವಾಜಿ ಪಾತ್ರದಲ್ಲಿ ರಿಷಬ್ ಶೆಟ್ಟಿ ಮಿಂಚುತ್ತಿದ್ದಾರೆ.

ಛತ್ರಪತಿ ಶಿವಾಜಿ ಮಹಾರಾಜ್’ ಸಿನಿಮಾವನ್ನು ಅವರು ನಿರ್ದೇಶಕ ಸಂದೀಪ್ ಸಿಂಗ್ ಊಹಿಸಿರುವ ರೀತಿ ಅದ್ಭುತವಾಗಿದೆ. ಛತ್ರಪತಿ ಶಿವಾಜಿ ಮಹಾರಾಜರ ಪಾತ್ರ ಅದೆಷ್ಟು ಅದ್ಭುತವಾದುದು ಎಂದರೆ ಕತೆ ಕೇಳಿದ ಬಳಿಕ ಕ್ಷಣ ಕಾಲವೂ ಯೋಚಿಸದೆ ಒಪಪಿಕೊಂಡುಬಿಟ್ಟೆ. ಅಂಥಹಾ ಅದ್ಭುತವಾದ ನಾಯಕನ ಪಾತ್ರಕ್ಕೆ ಜೀವ ತುಂಬುತ್ತಿರುವುದು ನನಗೆ ದೊರಕಿದ ಅಭೂತಪೂರ್ವ ಅವಕಾಶ ಮತ್ತು ಗೌರವ ಎಂದು ರಿಷಬ್ ಶೆಟ್ಟಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *