ಅಡುಗೆ ಎಣ್ಣೆಯ ಮರುಬಳಕೆಯಿಂದ ಕ್ಯಾನ್ಸರ್-ಹೃದಯ ಕಾಯಿಲೆ ಅಪಾಯ: NHRC ಎಚ್ಚರಿಕೆ.

ಅಡುಗೆ ಎಣ್ಣೆಯ ಮರುಬಳಕೆಯಿಂದ ಕ್ಯಾನ್ಸರ್-ಹೃದಯ ಕಾಯಿಲೆ ಅಪಾಯ: NHRC ಎಚ್ಚರಿಕೆ.

ಭಾರತದಲ್ಲಿ ಅಡುಗೆ ಎಣ್ಣೆಯ ಮರುಬಳಕೆಯಿಂದ ಯುವಕರಲ್ಲಿ ಹೃದಯ ಕಾಯಿಲೆ, ಕ್ಯಾನ್ಸರ್ ಸೇರಿದಂತೆ ಗಂಭೀರ ಆರೋಗ್ಯ ಸಮಸ್ಯೆಗಳು ಉಂಟಾಗುತ್ತಿವೆ. ಎನ್‌ಎಚ್‌ಆರ್‌ಸಿ ಈ ಬಗ್ಗೆ ಕಳವಳ ವ್ಯಕ್ತಪಡಿಸಿದ್ದು, ಕೇಂದ್ರ ಆರೋಗ್ಯ ಸಚಿವಾಲಯ ಹಾಗೂ ಎಫ್‌ಎಸ್‌ಎಸ್‌ಎಐಗೆ ನೋಟಿಸ್ ಜಾರಿ ಮಾಡಿದೆ. ನಾಗರಿಕರ ಹಕ್ಕುಗಳ ರಕ್ಷಣೆಗಾಗಿ ತಕ್ಷಣ ಕ್ರಮ ಕೈಗೊಳ್ಳಲು ನಿರ್ದೇಶಿಸಿದೆ. ಈ ಎಣ್ಣೆಯ ಬಳಕೆ ಸಾರ್ವಜನಿಕ ಆರೋಗ್ಯಕ್ಕೆ ಅಪಾಯಕಾರಿ.

ಇತ್ತೀಚಿನ ದಿನಗಳಲ್ಲಿ ಭಾರತದ ಯುವಕರಲ್ಲಿ ಆರೋಗ್ಯ ಸಮಸ್ಯೆ, ಹೃದಯ ಕಾಯಿಲೆ, ಇನ್ನು ಅನೇಕ ಅನಾರೋಗ್ಯ ಉಂಟಾಗಲು ಮರುಬಳಕೆ ಮಾಡಿದ ಎಣ್ಣೆಗಳು ಕಾರಣ ಎಂದು ಹೇಳಲಾಗಿದೆ. ದೇಶದಲ್ಲಿ ಅಡುಗೆ ಎಣ್ಣೆಯನ್ನು ವ್ಯಾಪಕವಾಗಿ ಮರುಬಳಕೆ ಮಾಡಲಾಗುತ್ತಿದೆ ಎಂದು ಎನ್‌ಎಚ್‌ಆರ್‌ಸಿಗೆ ದೂರು ನೀಡಲಾಗಿದೆ. ಇದೀಗ ಈ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ. ಈ ದೂರನ್ನು ಗಂಭೀರವಾಗಿ ಪರಿಗಣಿಸಿ ಎನ್‌ಎಚ್‌ಆರ್‌ಸಿ (ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ) ಕೇಂದ್ರ ಆರೋಗ್ಯ ಸಚಿವಾಲಯ ಮತ್ತು ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ (ಎಫ್‌ಎಸ್‌ಎಸ್‌ಎಐ)ಕ್ಕೆ ನೋಟಿಸ್ ಜಾರಿ ಮಾಡಿದೆ. ಆರೋಪಗಳ ತನಿಖೆ ನಡೆಸಿ, ಪ್ರಕರಣಕ್ಕೆ ಸಂಬಂಧಿಸಿದ ವರದಿಯನ್ನು ಹಾಗೂ ಎರಡು ವಾರಗಳಲ್ಲಿ ಕ್ರಮ ಕೈಗೊಂಡಿರುವ ವರದಿಯನ್ನು ಸಲ್ಲಿಸುವಂತೆ ಎನ್‌ಎಚ್‌ಆರ್‌ಸಿ ನಿರ್ದೇಶಿಸಿದೆ.

ಅಕ್ಟೋಬರ್ 22ರಂದು ಬಂದ ದೂರಿನ ಪ್ರಕಾರ, ಪ್ರಾಥಮಿಕವಾಗಿ ಇದು ಮಾನವ ಹಕ್ಕುಗಳ ಉಲ್ಲಂಘನೆಯಂತೆ ಕಂಡುಬರುತ್ತವೆ ಎಂದು ಹೇಳಿದೆ. ಇನ್ನು ಮಧ್ಯಪ್ರದೇಶದ ಭೋಪಾಲ್‌ನ ಸಾರ್ಥಕ್ ಸಮುದಾಯಿಕ್ ವಿಕಾಸ್ ಏವಮ್ ಜನ್ ಕಲ್ಯಾಣ್ ಸಂಸ್ಥೆಯ ಸಂಸ್ಥಾಪಕರು ನೀಡಿರುವ ದೂರಿನ ಪ್ರಕಾರ, ಭಾರತದಲ್ಲಿ ವ್ಯಾಪಕವಾಗಿ ಅಡುಗೆ ಎಣ್ಣೆಯ ಮರುಬಳಕೆ ಮಾಡಲಾಗುತ್ತಿದೆ ಎಂಬ ಬಗ್ಗೆ ಕಳವಳ ವ್ಯಕ್ತಡಿಸಿದ್ದಾರೆ. ಬಳಸಿದ ಅಡುಗೆ ಎಣ್ಣೆಯನ್ನು ಮರುಬಳಕೆ ಮಾಡುತ್ತಿದ್ದಾರೆ. ಸಣ್ಣ ಹೋಟೆಲ್‌ಗಳು, ರಸ್ತೆಬದಿಯ ತಿನಿಸುಗಳು ಮತ್ತು ಆಹಾರ ಮಾರಾಟಗಾರರು ಬಳಸಿದ ಅಡುಗೆ ಎಣ್ಣೆಯನ್ನು ಪದೇ ಪದೇ ಮರುಬಳಕೆ ಮಾಡುತ್ತಾರೆ ಅಥವಾ ಮರುಮಾರಾಟ ಮಾಡುತ್ತಾರೆ. ಇದು ಕ್ಯಾನ್ಸರ್, ಹೃದಯ ಕಾಯಿಲೆಗಳು ಮತ್ತು ಯಕೃತ್ತಿನ ಅಸ್ವಸ್ಥತೆಗಳು ಸೇರಿದಂತೆ ತೀವ್ರ ಸಾರ್ವಜನಿಕ ಆರೋಗ್ಯ ಅಪಾಯಗಳನ್ನುಂಟು ಮಾಡುತ್ತದೆ ಎಂದು ಹೇಳಿದ್ದಾರೆ.

For More Updates Join our WhatsApp Group :

https://chat.whatsapp.com/JVoHqE476Wn3pVh1gWNAcH

Leave a Reply

Your email address will not be published. Required fields are marked *