ಯಾದಗಿರಿ: ಜಿಲ್ಲೆಯ ಶಹಾಪುರ ತಾಲೂಕಿನಾದ್ಯಂತ ಧಾರಾಕಾರ ಮಳೆಯಾಗಿದ್ದು ಜನ ಜೀವನ ಅಸ್ತವ್ಯಸ್ತಗೊಂಡಿದೆ. ನಿರಂತರ ಮಳೆಯಿಂದ ಸಗರ ಗ್ರಾಮದಲ್ಲಿ ರಸ್ತೆಗಳು ಸಂಪೂರ್ಣ ಜಲಾವೃತವಾಗಿದ್ದು, ನಿವಾಸಿಗಳು ಪರದಾಟ ನಡೆಸಿದ್ದಾರೆ. ರಸ್ತೆಯಲ್ಲೇ ಹಳ್ಳದ ರೀತಿ ನೀರು ಹರಿಯುತ್ತಿದ್ದು, ತಗ್ಗು ಪ್ರದೇಶಗಳಿಗೆ ನೀರು ನುಗ್ಗಿ ಅವಾಂತರ ಸೃಷ್ಟಿಯಾಗಿದೆ. ಕೆಲ ಮನೆಗಳು ಮತ್ತು ಅಂಗಡಿಗೂ ಕೊಳಚೆ ನೀರು ಪ್ರವೇಶಿಸಿ ತೊಂದರೆ ಉಂಟಾಗಿದೆ.
For More Updates Join our WhatsApp Group :
