ರೌಡಿ ಅಭಿಮಾನಿಗಳ ಫ್ಯಾನ್ ಪೇಜ್ ಹಾವಳಿ: ಕಡಿವಾಣಕ್ಕೆ ಸಿಸಿಬಿ ಪೊಲೀಸರು ಮುಂದು

9th ​​grade student gives birth in bathroom

ಬೆಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿರುವ ರೌಡಿ ಅಭಿಮಾನಿಗಳ ಫ್ಯಾನ್ ಪೇಜ್ ಗಳಿಗೆ ಕಡಿವಾಣ ಹಾಕಲು ಸಿಸಿಬಿ ಪೊಲೀಸರು ಮುಂದಾಗಿದ್ದಾರೆ. ಸೈಬರ್ ಕ್ರೈಂ ಪೊಲೀಸರ ಸಹಾಯದೊಂದಿಗೆ ಅಂತಹ ಫೇಜ್ ಗಳನ್ನು ನಿಷ್ಕ್ರಿಯಗೊಳಿಸುವ ಕಾರ್ಯಾಚರಣೆ ಆರಂಭಿಸಿದ್ದಾರೆ.

ಕುಖ್ಯಾತ ರೌಡಿಗಳಾದ ವಿಲ್ಸನ್ ಗಾರ್ಡನ್ ನಾಗ, ಸೈಲೆಂಟ್ ಸುನೀಲ, ಸೈಕಲ್ ರವಿ ಸೇರಿದಂತೆ ಹಲವರ ಹೆಸರಿನಲ್ಲಿ ಬಾಸ್ ಟ್ಯಾಗ್ ಲೇನ್ ನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಫ್ಯಾನ್ ಪೇಜ್ ಗಳನ್ನು ತೆರೆಯಲಾಗುತ್ತಿದೆ. ಸಿನಿಮಾಗಳ ಡೈಲಾಗ್, ಹಾಡು ಬಳಸಿ ಪ್ರಚೋದಿಸಲಾಗುತ್ತಿದೆ. ಇಂತಹ ಫೇಜ್ ಗಳ ಫಾಲೋವರ್ಸ್ ಸಂಖ್ಯೆ ಹಾಗೂ ರೌಡಿಸಂನತ್ತ ಆಕರ್ಷಿತರಾಗುತ್ತಿರುವ ಯುವಕರ ಸಂಖ್ಯೆ ಹೆಚ್ಚಾಗುತ್ತಿದೆ

ಇದನ್ನು ಗಂಭೀರವಾಗಿ ಪರಿಗಣಿಸಿರುವ ಸಿಸಿಬಿ ಅಧಿಕಾರಿಗಳು, ಸೈಬರ್ ಕ್ರೈಂ ಪೊಲೀಸರ ಸಹಾಯದಿಂದ ಈಗಾಗಲೇ ಹಲವು ಖಾತೆಗಳನ್ನು ನಿಷ್ಕ್ರಿಯಗೊಳಿಸಿದ್ದಾರೆ. ಮುಂದಿನ ದಿನಗಳಲ್ಲಿ ಇದೇ ರೀತಿಯ ಸಾಮಾಜಿಕ ಜಾಲತಾಣ ಖಾತೆಗಳನ್ನು ಸೃಷ್ಟಿಸುವವರ ವಿರುದ್ಧವೂ ಕ್ರಮ ಕೈಗೊಳ್ಳಲು ನಿರ್ಧರಿಸಿದ್ದಾರೆ.

Leave a Reply

Your email address will not be published. Required fields are marked *