ಬೈರತಿ ಬಸವರಾಜ್ ಜಾಮೀನು ಅರ್ಜಿ ತಿರಸ್ಕೃತ.
ಬೆಂಗಳೂರು: ರೌಡಿಶೀಟರ್ ಶಿವಪ್ರಕಾಶ ಅಲಿಯಾಸ್ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಆರ್ ಪುರಂ ಕ್ಷೇತ್ರದ ಬಿಜೆಪಿ ಶಾಸಕ ಬೈರತಿ ಬಸವರಾಜ್ ಜಾಮೀನು ಅರ್ಜಿಯಲ್ಲಿ ಕೋರ್ಟ್ ವಜಾಗೊಳಿಸಿದೆ. ಇಂದು (ಡಿಸೆಂಬರ್ 23) ಬೈರತಿ ಬಸವರಾಜ್ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ನ್ಯಾಯಾಧೀಶ ಸಂತೋಷ್ ಗಜಾನನ್ ಭಟ್, ಜಾಮೀನು ಅರ್ಜಿ ತಿರಸ್ಕರಿಸಿ ಆದೇಶ ಹೊರಡಿಸಿದ್ದಾರೆ. ಹೀಗಾಗಿ ಸದ್ಯ ನಾಪತ್ತೆಯಾಗಿರುವ ಬೈರತಿ ಬಸವರಾಜ್ ಯಾವುದೇ ಸಂದರ್ಭದಲ್ಲೂ ಅರೆಸ್ಟ್ ಆಗಬಹುದು.
ಬೈರತಿ ಬಸವರಾಜ್ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ಬೆಂಗಳೂರಿನ ಜನಪ್ರತಿನಿಧಿಗಳ ಕೋರ್ಟ್‌ನಲ್ಲಿಂದು ನಡೆಯಿತು. ಬೈರತಿ ಬಸವರಾಜ್ ಪರ ವಕೀಲ ಸಂದೇಶ್ ಚೌಟ ವಾದ ಮಂಡಿಸಿದ್ರೆ, ಸಿಐಡಿ ಪರ ಎಸ್‌ಪಿಪಿ ಅಶೋಕ್ ನಾಯ್ಕ್ ವಾದ ಮಂಡಿಸಿದರು.
ವಾದ- ಪ್ರತಿವಾದ ಹೇಗಿತ್ತು?
SPP ಅಶೋಕ್ ನಾಯ್ಕ್: SPP ಅಶೋಕ್ ನಾಯ್ಕ್ ಅವರು ಕೋರ್ಟ್ಗೆ ಚಾರ್ಜ್ಶೀಟ್ ಪ್ರತಿ ಸಲ್ಲಿಕೆ ಮಾಡಿದ್ದು, ಚಾರ್ಜ್ಶೀಟ್ನ ಪೇಜ್ ನಂ.298ರಲ್ಲಿ ಟವರ್ ಲೊಕೇಷನ್ ನಮೂದಿಸಿದೆ. ಎ1 ಮತ್ತು ಎ 5 ನಡುವೆ ದೂರವಾಣಿ ಮಾತುಕತೆ ಇರುವ ದಾಖಲೆಯಿದೆ. ಬಂಧಿಸಿ ವಿಚಾರಣೆಗೆ ಒಳಪಡಿಸಿದ ನಂತರ ಹೆಚ್ಚಿನ ಮಾಹಿತಿ ತಿಳಿಯಲಿದೆ. ಪ್ರಮುಖ ಲಿಂಕ್ಗಳೇನಿದೆ ಎಂಬುದು ಬಳಿಕ ತಿಳಿಯಲಿದೆ ಎಂದು ವಾದ ಮಂಡಿಸಿದರು.
ಬೈರತಿ ಪರ ಸಂದೇಶ್ ಚೌಟ ವಾದ :ಇದಕ್ಕೆ ಪ್ರತಿಯಾಗಿ ಬೈರತಿ ಬಸವರಾಜ್ ಪರವಾಗಿ ಹಿರಿಯ ವಕೀಲ ಸಂದೇಶ್ ಚೌಟ ವಾದ ಮಂಡಿಸಿದ್ದು, ಒಳಸಂಚು, ಉದ್ದೇಶವಾಗಿದೆ. ಇದಕ್ಕೆ ಸಾಕ್ಷ್ಯಗಳು ಯಾವುದೂ ಲಭ್ಯವಿಲ್ಲ. 5 ತಿಂಗಳಾದರೂ ಇವರಿಗೆ ಯಾವುದೇ ಸಾಕ್ಷ್ಯ ಸಿಕ್ಕಿಲ್ಲ. ಎ1 ಜಗ್ಗ, ಎ 5 ಬೈರತಿ ಬಸವರಾಜ್ ನಡುವಿನ ಸಂಪರ್ಕ ಸಾಬೀತಿಗೆ ಯತ್ನಿಸುತ್ತಿದ್ದಾರೆ. ಹುಟ್ಟುಹಬ್ಬ, ಕುಂಭ ಮೇಳಕ್ಕೆ ಹೋಗಿರುವುದನ್ನು ಉಲ್ಲೇಖಿಸಿದ್ದಾರೆ. ಆದರೆ ಕೊಲೆಯ ಸಂಚಿನ ಬಗ್ಗೆ ಯಾವುದೇ ಸಾಕ್ಷ್ಯ ಸಂಗ್ರಹಿಸಿಲ್ಲ.ಅಲ್ಲದೇ ತನಿಖೆಗೆ ಸಿದ್ಧವೆಂದು ಪದೇ ಪದೇ ಹೇಳಿದ್ದರೂ ಸಮನ್ಸ್ ನೀಡಿಲ್ಲ. ಹೀಗಾಗಿ ನಿರೀಕ್ಷಣಾ ಜಾಮೀನು ನೀಡುವಂತೆ ಮನವಿ ಮಾಡಿದರು.
For More Updates Join our WhatsApp Group :




