ಕೈಗಾರಿಕಾ ಅಭಿವೃದ್ಧಿ ಮಂಡಳಿಯಲ್ಲಿ ಭಾರೀ ಆರ್ಥಿಕ ಅವ್ಯವಹಾರ.
ಬಳ್ಳಾರಿ: ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ ಬಳ್ಳಾರಿ ವಲಯ ಕಚೇರಿಯಲ್ಲಿ ಭಾರೀ ಆರ್ಥಿಕ ಅವ್ಯವಹಾರ ಬೆಳಕಿಗೆ ಬಂದಿದೆ. ಈ ವರ್ಷದ ಆಂತರಿಕ ಆಡಿಟ್ ವೇಳೆ ಒಟ್ಟೂ 16 ಕೋಟಿ ರೂ.ಗೂ ಹೆಚ್ಚು ಹಣ ಅಕ್ರಮವಾಗಿ ವರ್ಗಾವಣೆಯಾಗಿರುವುದು ತಿಳಿದುಬಂದಿದೆ. ಈ ಹಿನ್ನೆಲೆ ಮಂಡಳಿಯ ಎಕ್ಸಿಕ್ಯೂಟಿವ್ ಇಂಜಿನಿಯರ್ ಪೊಲೀಸರಿಗೆ ದೂರು ನೀಡಿದ್ದು, ಏಳು ಮಂದಿ ಮೇಲೆ ಎಫ್ಐಆರ್ ದಾಖಲಾಗಿದೆ.
ಅಧಿಕಾರಿಗಳ ಸಹಿ ಫೋರ್ಜರಿ ಮಾಡಿದ್ದ ಆರೋಪಿ
2022ರಿಂದ 2026ರವರೆಗೆ ನಾಲ್ಕು ವರ್ಷಗಳ ಅವಧಿಯಲ್ಲಿ ಒಟ್ಟು 16 ಕೋಟಿ 17 ಲಕ್ಷ ರೂ. ಹಣವನ್ನು ಅಕ್ರಮವಾಗಿ ವರ್ಗಾವಣೆ ಮಾಡಿರುವುದು ಪತ್ತೆಯಾಗಿದೆ. ಈ ಪ್ರಕರಣದಲ್ಲಿ ಕೆಐಎಡಿಬಿ ಗುತ್ತಿಗೆ ನೌಕರ ಸಂತೋಷ್ ಕುಮಾರ್, ಖಾಸಗಿ ಬ್ಯಾಂಕ್ ಮ್ಯಾನೇಜರ್ ಸೇರಿ ಏಳು ಜನರ ವಿರುದ್ಧ ಬಳ್ಳಾರಿ ಎಪಿಎಂಸಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಎಫ್ಐಆರ್ ದಾಖಲಾಗುತ್ತಿದ್ದಂತೆಯೇ ಸಂತೋಷ್ ಕುಮಾರ್ ಪರಾರಿಯಾಗಿದ್ದಾನೆ ಎಂದು ಹೇಳಲಾಗಿದೆ.
ಒಟ್ಟೂ ನಾಲ್ಕು ವರ್ಷದ ಅವಧಿಯಲ್ಲಿ 16 ಕೋಟಿ 17 ಲಕ್ಷ ರೂ.ಗಳ ಅಕ್ರಮ ವಹಿವಾಟು ನಡೆದಿದೆ ಎಂದ ಎಸ್ಪಿ, ಅದನ್ನು ಹಾಲಿ ಎಕ್ಸಿಕ್ಯೂಟಿವ್ ಇಂಜಿನಿಯರ್ ವರದಿ ಮಾಡಿ ದೂರು ದಾಖಲಿಸಿದ್ದಾರೆ. ಅಲ್ಲಿನ ಗುತ್ತಿಗೆ ನೌಕರ ಚೆಕ್ ಬುಕ್ ವ್ಯವಹಾರಗಳನ್ನು ನಿರ್ವಹಿಸುತ್ತಿದ್ದ. ಇದೇ ವೇಳೆ ಈ ಕೃತ್ಯ ಎಸಗಿದ್ದಾನೆ ಎಂದು ಆರೋಪಿಸಲಾಗಿದೆ. ಸಧ್ಯಕ್ಕೆ ಯಾವ ಆರೋಪಿಗಳೂ ಸೆರೆ ಸಿಕ್ಕಿಲ್ಲ ಎಂದಿದ್ದಾರೆ.
For More Updates Join our WhatsApp Group :




