45,000 ಕೋಟಿ ರೂ. ಅಬಕಾರಿ ಗುರಿ: ಮದ್ಯ ವ್ಯಾಪಾರಿಗಳಲ್ಲಿ ಆಕ್ರೋಶ.

45,000 ಕೋಟಿ ರೂ. ಅಬಕಾರಿ ಗುರಿ: ಮದ್ಯ ವ್ಯಾಪಾರಿಗಳಲ್ಲಿ ಆಕ್ರೋಶ.

ಕರ್ನಾಟಕ ಸರ್ಕಾರದ ಹೊಸ ಅಬಕಾರಿ ನೀತಿ ವಿರುದ್ಧ ವ್ಯಾಪಾರಿಗಳ ಪ್ರತಿಭಟನೆ; ದರ ಏರಿಕೆ ಹತ್ತಿರ

ಬೆಂಗಳೂರು : ಸಿಎಂ ಸಿದ್ದರಾಮಯ್ಯ ಇಂದು ತಮ್ಮ ದಾಖಲೆಯ 17ನೇ ಬಜೆಟ್ ಮಂಡಿಸಿದ್ದಾರೆ. 3 ಗಂಟೆ 30 ನಿಮಿಷಗಳ ಕಾಲ ಭಾಷಣ ಮಾಡಿದ ಸಿಎಂ, ಮಕ್ಕಳಿಂದ ವೃದ್ಧರವರೆಗೂ ಎಲ್ಲರಿಗೂ ಒಂದೊಂದು ಕೊಡುಗೆ ನೀಡಿದ್ದಾರೆ. ಆದರೆ ಮದ್ಯಪ್ರಿಯರಿಗೆ ಶಾಕ್ ನೀಡಲಾಗಿದೆ. ಮದ್ಯದ ಅಂಶ ಆಧರಿಸಿ ತೆರಿಗೆ ವಿಧಿಸಲು ನಿರ್ಧಾರ ಮಾಡಿರೋದು ದರ ಹೆಚ್ಚಳದ ಸುಳಿವು ಕೊಟ್ಟಿದೆ. ಅಬಕಾರಿ ಇಲಾಖೆಯಿಂದ 45 ಸಾವಿರ ಕೋಟಿ ಸಂಗ್ರಹದ ಗುರಿ ನೀಡಿದೆ. ಸದ್ಯ ಸರ್ಕಾರ ನೀಡಿರುವ ಟಾರ್ಗೆಟ್​ ಬಗ್ಗೆ ಮದ್ಯ ವ್ಯಾಪಾರಿಗಳು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ನಮ್ಮ ಬೇಡಿಕೆಗಳ ಬಗ್ಗೆ ಸರ್ಕಾರ ಯಾವುದೇ ಮನ್ನಣೆಯನ್ನೇ ನೀಡಿಲ್ಲ: ಲೋಕೇಶ್ 

ಈ ಬಗ್ಗೆ ಬೆಂಗಳೂರು ಜಿಲ್ಲಾ ಮದ್ಯ ವ್ಯಾಪಾರಿಗಳ ಸಂಘದ ಅಧ್ಯಕ್ಷ ಲೋಕೇಶ್ ಪ್ರತಿಕ್ರಿಯಿಸಿದ್ದು, 2026-27ನೇ ಸಾಲಿನಲ್ಲಿ ಅಬಕಾರಿ ಇಲಾಖೆಗೆ 45,000 ಕೋಟಿ ರೂ ಟಾರ್ಗೆಟ್​​, ಯಾವ ಅಂಶ ಇಟ್ಟುಕೊಂಡು ಇಷ್ಟು ಆದಾಯ ನಿರೀಕ್ಷಿಸಿದೆಯೋ ಗೊತ್ತಿಲ್ಲ ಎಂದು ಹೇಳಿದ್ದಾರೆ.

ಪ್ರಸ್ತುತ ಅಬಕಾರಿ ಆದಾಯ 2-3 ಸಾವಿರ ಕೋಟಿ ಖೋತಾ ಎಂಬ ಮಾಹಿತಿ. ಇರುವ ಸ್ಲ್ಯಾಬ್​ಗಳನ್ನು ಮತ್ತಷ್ಟು ಇಳಿಕೆ ಮಾಡುವ ಬಗ್ಗೆ ತೀರ್ಮಾನವಾಗಿದೆ. ಸರ್ಕಾರದ ಹೊಸ ಅಬಕಾರಿ ನೀತಿ ಬಗ್ಗೆ ನಮ್ಮ ಜೊತೆ ಮಾತುಕತೆ ನಡೆಸಿಲ್ಲ. ನಮ್ಮ ಬೇಡಿಕೆಗಳ ಬಗ್ಗೆ ಸರ್ಕಾರ ಯಾವುದೇ ಮನ್ನಣೆಯನ್ನೇ ನೀಡಿಲ್ಲ. CL2, CL7, CL5ಗಳಲ್ಲಿ ಸಾಕಷ್ಟು ಬದಲಾವಣೆ ಮತ್ತು ತಿದ್ದುಪಡಿ ಆಗಬೇಕಿದೆ ಎಂದು ಅವರು ಹೇಳಿದ್ದಾರೆ.

ಸರ್ಕಾರದ ಹೊಸ ಅಬಕಾರಿ ನೀತಿಗೆ ವ್ಯಾಪಾರಿಗಳ ವಿರೋಧ

ಮದ್ಯದ ಅಂಶದ ಮೇಲೆ ಸುಂಕ ನಿಗದಿ ಅಂದರೆ ದರದಲ್ಲಿ ವ್ಯತ್ಯಾಸವಾಗುತ್ತೆ. ತಮ್ಮ ಉತ್ಪನ್ನ ಇಂತಹ ಸ್ಲ್ಯಾಬ್​ಗಳಲ್ಲಿ ಬರಬೇಕೆಂದು ಉತ್ಪಾದಕರು ನಿಗದಿ ಮಾಡಿದರೆ ಸರಿಹೋಗಲ್ಲ. ಬೆಲೆ ನಿಗದಿಯಲ್ಲಿ ಅಬಕಾರಿ ಇಲಾಖೆ ಹಸ್ತಕ್ಷೇಪ ಇಲ್ಲವಾದರೆ ಸಮಸ್ಯೆ. ಅಂತಿಮವಾಗಿ ವರ್ತಕರು ಮತ್ತು ಗ್ರಾಹಕರ ಮೇಲೆ ಹೊಡೆತ ಬೀಳಲಿದೆ ಎಂದು ಅವರು ಹೇಳಿದ್ದಾರೆ.

For More Updates Join our WhatsApp Group :

https://chat.whatsapp.com/JVoHqE476Wn3pVh1gWNAcH

Leave a Reply

Your email address will not be published. Required fields are marked *