ಚಿಕ್ಕಮಗಳೂರು: ಬೀದಿ ನಾಯಿ ಜೊತೆ ಅಸಭ್ಯವಾಗಿ ವರ್ತಿಸಿದ ಆರೋಪ ಪ್ರಕರಣವೊಂದು ಜಿಲ್ಲೆಯ ಕೊಪ್ಪ ತಾಲೂಕಿನ ಜಯಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಜಯಪುರ ಪಟ್ಟಣದ ಬಸ್ ನಿಲ್ದಾಣದ ಬಳಿ ವ್ಯಕ್ತಿಯೊಬ್ಬ ನಾಯಿಯೊಂದಿಗೆ ಅಸಭ್ಯತೆ ತೋರಿದ ಬಗ್ಗೆ ಪೊಲೀಸರು ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡು, ಆರೋಪಿಯನ್ನು ವಶಕ್ಕೆ ಪಡೆದು ತನಿಖೆ ಕೈಗೊಂಡಿದ್ದಾರೆ. ವ್ಯಕ್ತಿಯ ಕೃತ್ಯವು ಅಂಗಡಿಯೊAದರಲ್ಲಿ ಅಳವಡಿಸಿರುವ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ವೈರಲ್ ಆಗಿದೆ. ವಿಡಿಯೋ ಪರಿಶೀಲಿಸಿದಾಗ 18.10.2024 ರಂದು ಬೆಳಗಿನ ಜಾವ ಸುಮಾರು 4.00 ಗಂಟೆ ಸಮಯದಲ್ಲಿ ಕೃತ್ಯ ಎಸಗಿರುವುದು ಬೆಳಕಿಗೆ ಬಂದಿದೆ. ಆರೋಪಿಯ ತನಿಖೆ ಮುಂದುವರೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Related Posts
ನರೇಂದ್ರ ಮೋದಿ ಪ್ರಮಾಣವಚನ ಸ್ವೀಕಾರ ಡೇಟ್ ಫಿಕ್ಸ್
ನವದೆಹಲಿ: ಜೂನ್ 9ಕ್ಕೆ ನರೇಂದ್ರ ಮೋದಿ ಅವರು ಮೂರನೇ ಬಾರಿ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕಾರ ಮಾಡಲಿದ್ದಾರೆ. ದೆಹಲಿಯಲ್ಲಿ ಇಂದು (ಶುಕ್ರವಾರ) ಬೆಳಗ್ಗೆ ದೆಹಲಿಯ ಹಳೆಯ ಸಂಸತ್ ಭವನದ ಸೆಂಟ್ರಲ್…
ಎರಡು ವರ್ಷಗಳ ನಂತರ ಗಾಂಧಿ ಭವನ ಉದ್ಘಾಟನೆ
ಚಿಕ್ಕಬಳ್ಳಾಪುರ: ಕಳೆದ 2017 ರಲ್ಲಿ ಗಾಂದಿ ಭವನ ಕಟ್ಟಡ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿದ್ದು 2022 ರಲ್ಲಿ ಕಟ್ಟಡದ ಕಾಮಗಾರಿ ಪ್ರಾರಂಭಿಸಿ ಎರಡು ವರ್ಷಗಳ ನಂತರ ಗಾಂಧಿ…
ಟೋಲ್ ಡಿವೈಡರ್ಗೆ ಕಾರು ಡಿಕ್ಕಿ, ಮಗು ಸಾವು
ಹುಬ್ಬಳ್ಳಿ: ಕಾರು ಟೋಲ್ ಡಿವೈಡರ್ಗೆ ಡಿಕ್ಕಿ ಹೊಡೆದು ಮೂರು ತಿಂಗಳ ಮಗು ಸಾವನ್ನಪ್ಪಿದ ಘಟನೆ ಧಾರವಾಡ ಜಿಲ್ಲೆಯ ಅಣ್ಣಿಗೇರಿ ತಾಲೂಕಿನ ನಲವಡಿ ಟೋಲ್ ಬಳಿ ನಡೆದಿದೆ. ಮೃತಪಟ್ಟ…