ಸೇಲಂ || ಯೋಗವನ್ನು ಜಾಗತಿಕ ವೇದಿಕೆಗೆ ಪರಿಚಯಿಸಿದ Modi ಅವರಿಗೆ ಅಭಿನಂದನೆ

ಸೇಲಂ || ಯೋಗವನ್ನು ಜಾಗತಿಕ ವೇದಿಕೆಗೆ ಪರಿಚಯಿಸಿದ ಮೋದಿ ಅವರಿಗೆ ಅಭಿನಂದನೆ

ಸೇಲಂ (ತಮಿಳುನಾಡು): ಕೇಂದ್ರದ ಭಾರೀ ಕೈಗಾರಿಕೆ ಮತ್ತು ಉಕ್ಕು ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರು ಸೇಲಂ ಉಕ್ಕು ಸ್ಥಾವರದಲ್ಲಿ ನಡೆದ 11ನೇ ಅಂತಾರಾಷ್ಟ್ರೀಯ ಯೋಗ ದಿನ ಕಾರ್ಯಕ್ರಮದಲ್ಲಿ.ಪಾಲ್ಗೊಂಡರು.

ಕಾರ್ಖಾನೆಯ ಸಿಬ್ಬಂದಿ, ಅವರ ಕುಟುಂಬ ಸದಸ್ಯರು, ಹಿರಿಯ ಅಧಿಕಾರಿಗಳು, ಭಾರತೀಯ ಉಕ್ಕು ಪ್ರಾಧಿಕಾರ ಹಾಗೂ ಉಕ್ಕು ಸಚಿವಾಲಯದ ಉನ್ನತ ಅಧಿಕಾರಿಗಳ ಜೊತೆಯಲ್ಲಿ ಸಚಿವರು ಯೋಗಾಭ್ಯಾಸ ನಡೆಸಿದರು.

ಸೇಲಂ ಟೌನ್ಶಿಪ್ನಲ್ಲಿರುವ ಹಿಲ್ ವ್ಯೂ ಕ್ರೀಡಾಂಗಣದಲ್ಲಿ ಯೋಗ ಶಿಕ್ಷಕರ ಮಾರ್ಗದರ್ಶನದಲ್ಲಿ ಸಚಿವರು ಕೆಲ ಪ್ರಮುಖ, ಸರಳ ಆಸನಗಳನ್ನು ಹಾಗೂ ಪ್ರಾಣಾಯಾಮವನ್ನು ಹಾಗೂ ಪ್ರಾಣಾಯಾಮವನ್ನೂಅಭ್ಯಾಸ ಮಾಡಿದರು.

ಮೋದಿ ಅವರನ್ನು ಅಭಿನಂಧಿಸಿದ ಸಚಿವರು:

ಈ ಸಂದರ್ಭದಲ್ಲಿ ಮಾತನಾಡಿದ ಸಚಿವ ಕುಮಾರಸ್ವಾಮಿ ಅವರು; ಯೋಗ ಎನ್ನುವುದು ನಮ್ಮ ಭಾರತದಲ್ಲಿ ಪ್ರಾಚೀನ ಕಾಲದಿಂದ ಬೆಳೆದುಬಂದ ಜೀವನಶೈಲಿಯಾಗಿದೆ. ಭಾರತಕ್ಕಷ್ಟೇ ಸೀಮಿತವಾಗಿದ್ದ ಯೋಗವನ್ನು ಹನ್ನೊಂದು ವರ್ಷಗಳ ಹಿಂದೆ ಪ್ರಧಾನಿಗಳಾಗಿ ಅಧಿಕಾರ ವಹಸಿಕೊಂಡ ನರೇಂದ್ರ ಮೋದಿ ಅವರು ಇಡೀ ಜಗತ್ತಿನ ವೇದಿಕೆಗೆ ತೆಗೆದುಕೊಂಡು ಹೋದರು. ಅದರ ಪರಿಣಾಮವಾಗಿ ಜಗತ್ತಿನ ಎಲ್ಲೆಡೆ ಜೂನ್ ೨೧ನೇ ದಿನವನ್ನು ಅಂತಾರಾಷ್ಟ್ರೀಯ ಯೋಗ ದಿನ ಎಂದು ಆಚರಿಸಲಾಗುತ್ತಿದೆ. ಇದರ ಸಂಪೂರ್ಣ ಹೆಗ್ಗಳಿಕೆ ಮೋದಿ ಅವರಿಗೆ ಸಲ್ಲಬೇಕು ಎಂದರು.

Leave a Reply

Your email address will not be published. Required fields are marked *