ಸತ್ಯಮೇವ ಜಯತೆ: ಹೈಕೋರ್ಟ್ ಆದೇಶದ ನಂತರ ಸಿಎಂ ಸಿದ್ದರಾಮಯ್ಯ ಟ್ವೀಟ್

ತುಮಕೂರು : ಡಿ.2ಕ್ಕೆ ಕಲ್ಪತರು ನಾಡಿಗೆ ಸಿಎಂ ಭೇಟಿ

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ)ದ ಸೈಟು ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಪ್ರಾಸಿಕ್ಯೂಷನ್ಗೆ ತಡೆಯಾಜ್ಞೆ ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ಆಗಸ್ಟ್ 29ಕ್ಕೆ ಮುಂದೂಡಿದೆ.

ಇದೇ ವೇಳೆ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ಆದೇಶಿಸುವಂತೆ ಕೋರಿ ಸಲ್ಲಿಕೆಯಾಗಿರುವ ಅರ್ಜಿಗಳ ಆದೇಶವನ್ನು ಆಗಸ್ಟ್ 29ಕ್ಕೆ ಮುಂದೂಡುವಂತೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಗೆ ಹೈಕೋರ್ಟ್ ಸೂಚಿಸಿದ್ದು, ಈ ಮೂಲಕ ಸಿಎಂ ಸಿದ್ದರಾಮಯ್ಯಗೆ ತಾತ್ಕಾಲಿಕ ರಿಲೀಫ್ ಸಿಕ್ಕಿದೆ.

ಹೈಕೋರ್ಟ್ ಆದೇಶದ ಬಗ್ಗೆ ಪ್ರತಿಕ್ರಿಯಿಸಿರುವ ಸಿಎಂ ಸಿದ್ದರಾಮಯ್ಯ, ಅಂತಿಮ ಗೆಲುವು ಸತ್ಯದ್ದೇ ಆಗಿರಲಿದೆ ಎಂಬುದು ನನ್ನ ದೃಢ ನಂಬಿಕೆಯಾಗಿದೆ. ಸತ್ಯಮೇವಜಯತೆ ಎಂದು ಎಕ್ಸ್(ಟ್ವೀಟ್) ನಲ್ಲಿ ಪೋಸ್ಟ್ ಮಾಡಿದ್ದಾರೆ.

ಸಂವಿಧಾನ ಮತ್ತು ನ್ಯಾಯಾಂಗ ವ್ಯವಸ್ಥೆಯ ಮೇಲೆ ಅಪಾರ ನಂಬಿಕೆಯಿಟ್ಟಿರುವ, ಈ ನೆಲದ ಕಾನೂನನ್ನು ಗೌರವಿಸುವ ಓರ್ವ ಪ್ರಜೆಯಾಗಿ ಸುಳ್ಳು ಪ್ರಕರಣದಲ್ಲಿ ನನ್ನ ಮೇಲೆ ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿರುವ ರಾಜ್ಯಪಾಲರ ರಾಜಕೀಯ ಪ್ರೇರಿತ ನಿರ್ಣಯದ ವಿರುದ್ಧ ಘನ ಉಚ್ಛ ನ್ಯಾಯಾಲಯದ ಮೊರೆ ಹೋಗಿದ್ದೇನೆ. ಉಚ್ಚ ನ್ಯಾಯಾಲಯವು ಈ ವಿಚಾರವನ್ನು ಆಲಿಸಿ, ಮುಂದಿನ ವಿಚಾರಣೆಯ ವರೆಗೆ ವಿಶೇಷ ನ್ಯಾಯಾಲಯಗಳು ವಿಚಾರಣೆ ಮುಂದೂಡಬೇಕು, ಯಾವುದೇ ಆತುರದ ನಿರ್ಧಾರಗಳನ್ನು ತೆಗೆದುಕೊಳ್ಳಬಾರದು ಎಂಬ ಮಧ್ಯಂತರ ಆದೇಶವನ್ನು ನೀಡಿದೆ.

ನ್ಯಾಯಾಲಯದ ಈ ಆದೇಶವನ್ನು ವಿನಮ್ರವಾಗಿ ಸ್ವೀಕರಿಸುತ್ತ ನನ್ನ ಧನ್ಯವಾದ ಸಲ್ಲಿಸುತ್ತೇನೆ. ಅಂತಿಮ ಗೆಲುವು ಸತ್ಯದ್ದೇ ಆಗಿರಲಿದೆ ಎಂಬುದು ನನ್ನ ದೃಢ ನಂಬಿಕೆಯಾಗಿದೆ. ಸತ್ಯಮೇವಜಯತೆ ಎಂದು ಸಿಎಂ ಸಿದ್ದರಾಮಯ್ಯ ಪೋಸ್ಟ್ ಮಾಡಿದ್ದಾರೆ.

Leave a Reply

Your email address will not be published. Required fields are marked *