ಗ್ಯಾರಂಟಿ ಯೋಜನೆಗಳಿಗೆ ಅಪಸ್ವರ – ಒತ್ತಡವನ್ನು ಕಡಿಮೆ ಮಾಡುವಂತೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೈಕಮಾಂಡ್ ನಾಯಕರಿಗೆ ಮನವಿ
ಬೆಂಗಳೂರು: ರಾಜ್ಯ ಕಾಂಗ್ರೆಸ್(Congress) ಸರ್ಕಾರದ ಗ್ಯಾರಂಟಿ ಯೋಜನೆಗಳಿಗೆ(Guarantee scheme) ಮತ್ತೆ ಸಚಿವರಿಂದಲೇ ಅಪಸ್ವರ ವ್ಯಕ್ತವಾಗಿತ್ತಿದೆ. ಗ್ಯಾರಂಟಿ ಯೋಜನೆಗಳಿಂದಾಗಿ ಅಭಿವೃದ್ಧಿಗೆ ಹಣಕಾಸಿನ ಸಮಸ್ಯೆಯಾಗುತ್ತಿದೆ ಎಂದು ಆರೋಪಗಳು ಕೇಳಿಬರುತ್ತಿವೆ.
ಗ್ಯಾರಂಟಿ ಯೋಜನೆಗಳ ಮೇಲಿನ ಒತ್ತಡವನ್ನು ಕಡಿಮೆ ಮಾಡುವಂತೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ(Sathish Jarakihole) ಹೈಕಮಾಂಡ್ ನಾಯಕರಿಗೆ ಮನವಿ ಮಾಡಿದ್ದಾರೆ ಎಂದು ತಿಳಿದುಬಂದಿದೆ.
ಶ್ರೀಮಂತರಿಗೆ ಗ್ಯಾರಂಟಿ ಯೋಜನೆ ಕೊಡುವುದು ಬೇಡ, ಗೃಹಲಕ್ಷ್ಮೀ ಯೋಜನೆಯಿಂದಾಗಿ ಸಾಕಷ್ಟು ಹೊರೆಯಾಗುತ್ತಿದೆ. ಗ್ಯಾರಂಟಿಗಳಿಂದ ಅಭಿವೃದ್ಧಿ ಯೋಜನೆಗಳಿಗೆ ಹಣ ಸಿಗುತ್ತಿಲ್ಲ. ಹಾಗಾಗಿ ಗ್ಯಾರಂಟಿ ಯೋಜನೆಗಳಲ್ಲಿ ಒಂದಿಷ್ಟು ಪರಿಷ್ಕರಣೆ ಮಾಡುವಂತೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲ ಅವರಿಗೆ ಮನವಿ ಮಾಡಿದ್ದಾರೆ ಎಂದು ತಿಳಿದುಬಂದಿದೆ.