ಕೊರೆಯುವ ಚಳಿಗೆ ವಿಜಯಪುರದಲ್ಲಿ ಶಾಲೆಯ ಸಮಯ ಬದಲಾವಣೆ.

ಕೊರೆಯುವ ಚಳಿಗೆ ವಿಜಯಪುರದಲ್ಲಿ ಶಾಲೆಯ ಸಮಯ ಬದಲಾವಣೆ.

ದಾಖಲೆ ಮಟ್ಟದ ತಾಪಮಾನ ಇಳಿಕೆ.

ವಿಜಯಪುರ: ರಾಜ್ಯದಲ್ಲಿ ಚಳಿ  ಹೆಚ್ಚಳವಾಗಿದೆ. ಅದರಲ್ಲೂ ಬಿಸಿಲು ನಾಡು ವಿಜಯಪುರ ಜಿಲ್ಲೆಯಲ್ಲಿ ರಾಜ್ಯದ ಇತರೆ ಜಿಲ್ಲೆಗಳಿಗಿಂತ ಚಳಿ ಅಧಿಕ ಪ್ರಮಾಣವಿದೆ. ದಾಖಲೆ ಪ್ರಮಾಣದಲ್ಲಿ ತಾಪಮಾನ ದಾಖಲಾಗಿದೆ. ಈ ಹಿನ್ನಲೆ ಜಿಲ್ಲಾಡಳಿತ ಡಿಸೆಂಬರ್ 31ರವರೆಗೆ ಎಲ್ಲಾ ಶಾಲೆಗಳ ಆರಂಭ ಸಮಯ ಬದಲಾವಣೆ ಮಾಡಿ ಆದೇಶ ಜಾರಿ ಮಾಡಿದೆ. ಆದರೆ ಈ ಆದೇಶ ಪಾಲನೆಯಾಗಿಲ್ಲ ಎಂದು ಪೋಷಕರು ಅಸಮಾಧಾನ ಹೊರ ಹಾಕಿದ್ಧಾರೆ.

ಶಾಲೆಗಳ ಸಮಯ ಬದಲಾವಣೆಗೆ ಆದೇಶ

ವಿಜಯಪುರ ಜಿಲ್ಲೆಯಲ್ಲಿ ಈ ಬಾರಿ ಕನಿಷ್ಠ ಪ್ರಮಾಣದ ಉಷ್ಣಾಂಶ ದಾಖಲಾಗಿದೆ. 20ವರ್ಷಗಳಲ್ಲಿ 3ನೇ ಕನಿಷ್ಠ ತಾಪಮಾನ ಹಾಗೂ 10 ವರ್ಷಗಳಲ್ಲಿ 4ನೇ ಬಾರಿ ಅತೀ ಕಡಿಮೆ ಉಷ್ಣಾಂಶ ದಾಖಲಾಗಿದೆ. ಚಳಿಯ ತೀವ್ರತೆ ಶಾಲಾ ಮಕ್ಕಳು, ವೃದ್ಧರು ಹಾಗೂ ವಿವಿಧ ಖಾಯಿಲೆಗಳಿಂದ ಬಳಲುತ್ತಿರುವವರ ಆರೋಗ್ಯದ ಮೇಲೆ ಪರಿಣಾಮ ಬೀರಿದೆ. ಕಾರಣ ಎಲ್ಲಾ ಶಾಲೆಗಳ ಆರಂಭಿಕ ಸಮಯ ಬದಲಾವಣೆಯ ಕೂಗು ಕೇಳಿಬಂದಿತ್ತು. ಜೊತೆಗೆ ರಾಜ್ಯ ವಿಪತ್ತು ನಿರ್ವಹಣಾ ಹಾಗೂ ಐಎಂಡಿ ಬೆಂಗಳೂರು ಪ್ರಕಾರ ರಾಜ್ಯದಲ್ಲಿ ಇನ್ನೂ ಶೀತಗಾಳಿ ಬೀಸುತ್ತಿರುವ ಹಿನ್ನಲೆ ಸೂಕ್ತ ಮುಂಜಾಗೃತಾ ಕ್ರಮ ತೆಗೆದುಕೊಳ್ಳಬೇಕೆಂದು ತಿಳಿಸಿದ್ದರು. ಈ ಹಿನ್ನಲೆ ವಿಜಯಪುರ ಜಿಲ್ಲಾಧಿಕಾರಿ ಕೆ. ಆನಂದ ಎಲ್ಲಾ ಶಾಲೆಗಳ ಸಮಯ ಬದಲಾವಣೆ ಮಾಡಿ ಡಿಸೆಂಬರ್ 20ರಂದು ಆದೇಶ ಜಾರಿ ಹೊರಡಿಸಿದ್ದರು.

ಜಿಲ್ಲೆಯ ಎಲ್ಲಾ ಸರ್ಕಾರಿ, ಸರ್ಕಾರಿ ಅನುದಾನಿತ, ಖಾಸಗಿ ಶಾಲೆಗಳು ಬೆಳಿಗ್ಗೆ 10 ಗಂಟೆಗೆ ಆರಂಭವಾಗಬೇಕೆಂದು ಆದೇಶದಲ್ಲಿ ಉಲ್ಲೇಖಿಸಲಾಗಿತ್ತು. ಆದೇಶ ಜಾರಿಯಾಗಿ ಎರಡು ದಿನವಾದರೂ ಹಲವು ಶಾಲೆಗಳು ಈ ಮುಂಚೆ ಇದ್ದ ಸಮಯದಂತೆ ಬೆಳಿಗ್ಗೆ ಬೇಗ ಶಾಲೆಗಳನ್ನು ಆರಂಭಿಸಿವೆ. ಇದು ಪೋಷಕರ ಆಕ್ರೋಶಕ್ಕೆ ಕಾರಣವಾಗಿದೆ.

ಮಕ್ಕಳ ಆರೋಗ್ಯದ ಮೇಲೆ ಪರಿಣಾಮ ಬೀರಿದರೆ ಯಾರು ಹೊಣೆ?

ಡಿಸಿ ಆದೇಶಕ್ಕೆ ಬೆಲೆ ಇಲ್ಲವೇ. ತೀವ್ರ ಚಳಿಯ ಕಾರಣ ಸಮಯ ಬದಲಾವಣೆ ಮಾಡಿದರೂ ಅದನ್ನು ಏಕೆ ಪಾಲನೆ ಮಾಡುತ್ತಿಲ್ಲ. ಮಕ್ಕಳ ಆರೋಗ್ಯದ ಮೇಲೆ ಪರಿಣಾಮ ಬೀರಿದರೆ ಯಾರು ಹೊಣೆ ಎಂದು ಕಳ್ಳಿಮನಿ, ನಗರದ ನಿವಾಸಿ ಸೋಮನಾಥ್​​ ಎಂಬುವವರು ಕಿಡಿ ಕಾರಿದ್ದಾರೆ.

ವಿಜಯಪುರ ಜಿಲ್ಲೆಯಲ್ಲಿ 1,939 ಸರ್ಕಾರಿ ಶಾಲೆಗಳಿದ್ದ, 2,26,260 ವಿದ್ಯಾರ್ಥಿಗಳು ಓದುತ್ತಿದ್ದಾರೆ. ಸರ್ಕಾರಿ ಶಾಲೆಗಳು ಬೆಳಿಗ್ಗೆ 10 ಗಂಟೆಯಿಂದ ಆರಂಭವಾಗುತ್ತಿದ್ದು, ವಿದ್ಯಾರ್ಥಿಗಳಿಗೆ ಯಾವುದೇ ಸಮಸ್ಯೆಯಾಗಿಲ್ಲ. 347 ಅನುದಾನಿತ ಶಾಲೆಗಳಿದ್ದು, 72,457 ವಿದ್ಯಾರ್ಥಿಗಳು ದಾಖಲಾಗಿದ್ದಾರೆ. ಜೊತೆಗೆ ಖಾಸಗಿಯಾಗಿ 1,158 ಶಾಲೆಗಳಿದ್ದು 1,89,308 ವಿದ್ಯಾರ್ಥಿಗಳು ಓದುತ್ತಿದ್ದಾರೆ.

For More Updates Join our WhatsApp Group :

https://chat.whatsapp.com/JVoHqE476Wn3pVh1gWNAcH

Leave a Reply

Your email address will not be published. Required fields are marked *