ದರ್ಶನ್ ನಟನೆಯ ‘ಡೆವಿಲ್’ ಚಿತ್ರದ ಟ್ರೇಲರ್ ಬಿಡುಗಡೆ ದಿನಾಂಕ ಘೋಷಣೆಯಾಗಿದೆ. ಡಿಸೆಂಬರ್ 5ರಂದು ಬೆಳಗ್ಗೆ 10.05ಕ್ಕೆ ಸರಿಗಮ ಯೂಟ್ಯೂಬ್ ಚಾನೆಲ್‌ನಲ್ಲಿ ಟ್ರೇಲರ್ ಲಭ್ಯವಾಗಲಿದೆ. ಡಿಸೆಂಬರ್ 12ರಂದು ವಿಶ್ವಾದ್ಯಂತ ತೆರೆಗೆ ಬರಲಿರುವ ಈ ಚಿತ್ರವನ್ನು ದರ್ಶನ್ ಅಭಿಮಾನಿಗಳು ದೊಡ್ಡ ಮಟ್ಟದಲ್ಲಿ ಪ್ರಚಾರ ಮಾಡಲು ಸಜ್ಜಾಗಿದ್ದಾರೆ. ದರ್ಶನ್ ಅವರ ಕಾನೂನು ಹೋರಾಟದ ನಡುವೆಯೂ ಸಿನಿಮಾ ಬಿಡುಗಡೆ ಆಗುತ್ತಿದೆ.
ದರ್ಶನ್ ನಟನೆಯ ‘ಡೆವಿಲ್’ ಸಿನಿಮಾ ಡಿಸೆಂಬರ್ 12ರಂದು ವಿಶ್ವಾದ್ಯಂತ ತೆರೆಗೆ ಬರುತ್ತಿದೆ. ಈ ಚಿತ್ರ ಅಭಿಮಾನಿಗಳ ಪಾಲಿಗೆ ಸಖತ್ ವಿಶೇಷ. ದರ್ಶನ್ ಅವರು ಜೈಲಿನಲ್ಲಿ ಇರುವಾಗಲೇ ಚಿತ್ರ ರಿಲೀಸ್ ಆಗುತ್ತಿದೆ. ಹೀಗಾಗಿ, ಇದನ್ನು ಪ್ರಚಾರ ಮಾಡುವ ಜವಾಬ್ದಾರಿ ಅಭಿಮಾನಿಗಳ ಮೇಲೆ ಇದೆ. ಈಗ ಚಿತ್ರದ ಟ್ರೇಲರ್ ರಿಲೀಸ್ ದಿನಾಂಕ ರಿವೀಲ್ ಆಗಿದೆ. ಈ ವಿಷಯ ತಿಳಿದು ಫ್ಯಾನ್ಸ್ ಸಾಕಷ್ಟು ಖುಷಿಪಟ್ಟಿದ್ದಾರೆ.
For More Updates Join our WhatsApp Group :
