ದ್ವಿತೀಯ PUC ಫಲಿತಾಂಶ 2026 ಪ್ರಕಟ: ಆನ್‌ಲೈನ್‌ನಲ್ಲಿ ಲಭ್ಯ.

ದ್ವಿತೀಯ PUC ಫಲಿತಾಂಶ 2026 ಪ್ರಕಟ: ಆನ್‌ಲೈನ್‌ನಲ್ಲಿ ಲಭ್ಯ.

ಕರ್ನಾಟಕ ದ್ವಿತೀಯ ಪಿಯುಸಿ ಫಲಿತಾಂಶ 2026: ಆನ್​​​ಲೈನ್​​​ನಲ್ಲಿ ರಿಸಲ್ಟ್ ಪ್ರಕಟ

ಬೆಂಗಳೂರು: ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ-1  ಫಲಿತಾಂಶ  ಹೊರಬಿದ್ದಿದೆ. ಆನ್​​ಲೈನ್​​ ನಲ್ಲಿ ಫಲಿತಾಂಶ ಪ್ರಕಟವಾಗಿದ್ದು,  ಬಳಿಕ  ಶಿಕ್ಷಣ ಸಚಿವ ಮಧುಬಂಗಾರಪ್ಪ ಅವರು ಇಂದು (ಏಪ್ರಿಲ್ 09) ಸಂಜೆ 6ಕ್ಕೆ ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ಕಚೇರಿಯಲ್ಲಿ  ಸುದ್ದಿಗೋಷ್ಠಿ ನಡೆಸಿ ಫಲಿತಾಂಶವನ್ನು ಅಧಿಕೃತವಾಗಿ  ಪ್ರಕಟಿಸಲಿದ್ದಾರೆ. ಇದಕ್ಕೂ ಮೊದಲು ಆನ್​​ಲೈನ್​​ನಲ್ಲಿ https://karresults.nic.in ವೆಬ್​​ಸೈಟ್ ಮೂಲಕ ಫಲಿತಾಂಶವನ್ನು ಪರಿಶೀಲನೆ ಮಾಡಬಹುದು. ಒಂದು ವೇಳೆ ಸರ್ವರ್ ಸಮಸ್ಯೆ ಎದುರಾದರೆ ಡಿಜಿಲಾಕರ್ ಮೂಲಕವೂ ರಿಸ್ಟಲ್ ಚೆಕ್ ಮಾಡಬಹುದಾಗಿದ್ದು ಹೇಗೆ ಎನ್ನುವುದು ಈ ಕೆಳಗಿನಂತಿದೆ ನೋಡಿ.

ಶೇ.86ರಷ್ಟು ಮಕ್ಕಳು ಉತ್ತೀರ್ಣ

ಈ ಬಾರಿ ದ್ವಿತೀಯ ಪಿಯು ಪರೀಕ್ಷೆ ಫಲಿತಾಂಶ ದಾಖಲೆ ಮಟ್ಟದಲ್ಲಿ ಏರಿಕೆ ಕಂಡಿದೆ. ಹೌದು…2025-26ನೇ ಸಾಲಿನ ಸೆಕೆಂಡ್ ಪಿಯುಸಿ ಪರೀಕ್ಷೆಯಲ್ಲಿ ಶೇ.86ರಷ್ಟು ಮಕ್ಕಳು ಉತ್ತೀರ್ಣರಾಗಿದ್ದಾರೆ. ಅಂದರೆ 7,10,363 ವಿದ್ಯಾರ್ಥಿಗಳ ಪೈಕಿ 6.10 ಲಕ್ಷ ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ.  ಕಳೆದ ವರ್ಷ ಶೇ.73.45ರಷ್ಟು ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದರು. ಇದರೊಂದಿಗೆ ಈ ಬಾರಿ ಪಿಯುಸಿ ಫಲಿತಾಂಶದಲ್ಲಿ ಸುಧಾರಣೆ ಕಂಡಿದೆ.

 ಪರೀಕ್ಷೆಗೆ ಎದುರಿಸಿದ ವಿದ್ಯಾರ್ಥಿಗಳ ಸಂಖ್ಯೆ

ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ-1 ಫೆಬ್ರವರಿ 28ರಿಂದ ಮಾರ್ಚ್ 12ರವರೆಗೆ ರಾಜ್ಯಾದ್ಯಂತ ಒಟ್ಟು 1217 ಕೇಂದ್ರಗಳಲ್ಲಿ ನಡೆದಿದ್ದು, 5174 ಕಾಲೇಜುಗಳ ಒಟ್ಟು 7.10 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ನೊಂದಣಿ ಮಾಡಿಕೊಂಡಿದ್ದರು. ಈ ಪೈಕಿ ಸೈನ್ಸ್ ವಿಷಯದಲ್ಲಿ 2.92 ಲಕ್ಷ, ವಾಣಿಜ್ಯ ವಿಭಾಗದಲ್ಲಿ 2.11 ಲಕ್ಷ ಹಾಗೂ ಕಲಾ ವಿಭಾಗದಲ್ಲಿ 1.42 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಎದುರಿಸಿದ್ದರು.

ನಿಮ್ಮ ರಿಸಲ್ಟ್‌ ಹೀಗೆ ಚೆಕ್ ಮಾಡಿ

ದ್ವಿತೀಯ ಪಿಯುಸಿ ಫಲಿತಾಂಶದ ಮಾಹಿತಿ ಅಧಿಕೃತ ವೆಬ್‌ಸೈಟ್‌ https://karresults.nic.in ಲಿಂಕ್ ಮೂಲಕ ರಿಸಲ್ಟ್ ವೀಕ್ಷಿಸಬಹುದಾಗಿದೆ. ಲಿಂಕ್ ಮೇಲೆ ಕ್ಲಿಕ್ ಮಾಡಿ ರಿಜಿಸ್ಟ್ರೇಶನ್ ನಂಬರ್ ಮತ್ತು ಜನ್ಮ ದಿನಾಂಕವನ್ನು ನಮೂದಿಸಿ, ‘Submit’ ಬಟನ್ ಒತ್ತಿದ ತಕ್ಷಣ ಅಂಕಪಟ್ಟಿ ಪರದೆ ಓಪನ್ ಆಗಲಿದೆ.

ಈ ಬಾರಿ ಡಿಜಿಲಾಕರ್‌ನಲ್ಲೂ ಫಲಿತಾಂಶ ಲಭ್ಯ

ಇನ್ನುಳಿದಂತೆ ಕರ್ನಾಟಕ ಒನ್ ಮೊಬೈಲ್ ಆ್ಯಪ್‌ ನಲ್ಲಿ ಸಿಗಲಿದೆ. ವಿದ್ಯಾರ್ಥಿಗಳ ಮೊಬೈಲ್‌ಗೆ SMS ಮೂಲಕ ಫಲಿತಾಂಶದ ಮಾಹಿತಿ ರವಾನೆಯಾಗುತ್ತದೆ. ಇನ್ನು ಈ ವರ್ಷ ಪ್ರಥಮ ಬಾರಿಗೆ ಡಿಜಿಲಾಕರ್‌ನಲ್ಲೂ https://www.digilocker.govt.in ನಲ್ಲೂ ರಿಸಲ್ಟ್‌ ವೀಕ್ಷಿಸಬಹುದಾಗಿದೆ.

ಇದೇ ಮೊದಲ ಬಾರಿಗೆ ವಿದ್ಯಾರ್ಥಿಗಳ ಫಲಿತಾಂಶದ ಅಂಕಪಟ್ಟಿಯು ಡಿಜಿಲಾಕರ್ ಮೂಲಕ ಲಭ್ಯವಾಗಲಿದೆ. ಒಂದು ವೇಳೆ ವೆಬ್​​ಸೈಟ್​​ನಲ್ಲಿ ರಿಸಲ್ಟ್ ನೋಡುವಾಗ ಸರ್ವರ್ ಸಮಸ್ಯೆ ಎದುರಾದರೆ ಡಿಜಿಲಾಕರ್ ಮೂಲಕವೇ ಮಾರ್ಕ್ಸ್ ಕಾರ್ಡ್ ಪಡೆದುಕೊಳ್ಳಬಹುದು.

ಸಾಮಾನ್ಯವಾಗಿ ಫಲಿತಾಂಶ ಪ್ರಕಟವಾದ ತಕ್ಷಣ ಲಕ್ಷಾಂತರ ವಿದ್ಯಾರ್ಥಿಗಳು ಒಮ್ಮೆಗೆ ಅಧಿಕೃತ ವೆಬ್‌ಸೈಟ್‌ಗಳ ಮೇಲೆ ಮುಗಿಬೀಳುತ್ತಾರೆ. ಇದರಿಂದ ಸರ್ವರ್ ಸಮಸ್ಯೆ ಅಥವಾ ಪೇಜ್ ಲೋಡ್ ಆಗಲು ಬಹಳ ಸಮಯ ತೆಗೆದುಕೊಳ್ಳುವುದು ಮಾಮೂಲಿ. ಆದರೆ ಈ ಬಾರಿ ನೀವು ವೆಬ್‌ಸೈಟ್ ಓಪನ್ ಆಗುವವರೆಗೆ ಕಾಯಬೇಕಾದ ಅಗತ್ಯವಿಲ್ಲ. ಡಿಜಿಲಾಕರ್ ಮೂಲಕವೇ ನೇರವಾಗಿ ಅಂಕಪಟ್ಟಿ ಡೌನ್ ಲೋಡ್ ಮಾಡಿಕೊಂಡು ನಿಮ್ಮ ಫಲಿತಾಂಶ ಪಡೆಯಬಹುದು. ವೆಬ್‌ಸೈಟ್‌ಗಿಂತಲೂ ವೇಗವಾಗಿ ಮತ್ತು ಸುಲಭವಾಗಿ ನಿಮ್ಮ ಅಂಕಪಟ್ಟಿ ಪಡೆಯಲು ನಿಮ್ಮ ಮೊಬೈಲ್ ನಲ್ಲಿ ‘DigiLocker’ ಡೌನ್‌ಲೋಡ್ ಮಾಡಿ. ಅಪ್ಲಿಕೇಶನ್ ಇಲ್ಲದಿದ್ದರೆ ನೇರವಾಗಿ digilocker.gov.in ವೆಬ್‌ಸೈಟ್‌ಗೂ ಭೇಟಿ ನೀಡಬಹುದು.

For More Updates Join our WhatsApp Group :

https://chat.whatsapp.com/JVoHqE476Wn3pVh1gWNAcH

Leave a Reply

Your email address will not be published. Required fields are marked *