ಮಂಗಳೂರಿನ ವಿದ್ಯಾರ್ಥಿನಿಯ ಅದ್ಭುತ ಸಾಧನೆ.
ಮಂಗಳೂರು: 2025-26ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು, ಈ ಬಾರಿ ವಾಣಿಜ್ಯ ವಿಭಾಗದಲ್ಲಿ ಮಂಗಳೂರಿನ ವಿದ್ಯಾರ್ಥಿನಿ ದಿಶಾ ರಾಜ್ಯ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದು ಮೆರೆದಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿನಿಯಾಗಿರುವ ದಿಶಾ, 600ಕ್ಕೆ 600 ಅಂಕಗಳನ್ನು ಗಳಿಸಿ ಅಪರೂಪದ ಸಾಧನೆ ಮಾಡಿದ್ದಾರೆ. ಸಂಪೂರ್ಣ ಅಂಕ ಪಡೆದು ರಾಜ್ಯ ಟಾಪರ್ ಆಗಿರುವುದು ಗಮನಾರ್ಹವಾಗಿದೆ.
ಈ ಸಾಧನೆ ವಿದ್ಯಾರ್ಥಿನಿಯ ಪರಿಶ್ರಮ ಮತ್ತು ಕಾಲೇಜಿನ ಶಿಕ್ಷಣ ಗುಣಮಟ್ಟವನ್ನು ತೋರಿಸುತ್ತದೆ. ಫಲಿತಾಂಶ ಪ್ರಕಟವಾದ ತಕ್ಷಣ ಕಾಲೇಜಿನಲ್ಲಿ ಸಂಭ್ರಮದ ವಾತಾವರಣ ನಿರ್ಮಾಣವಾಗಿದ್ದು, ದಿಶಾಳಿಗೆ ಅಭಿನಂದನೆಗಳ ಮಹಾಪೂರ ಹರಿದುಬಂದಿದೆ.
For More Updates Join our WhatsApp Group :




