ಕಳ್ಳತನ ಕೇಸ್‌ನಲ್ಲಿ ಅರೆಸ್ಟ್‌ ಆಗಿದ್ದ ಆರೋಪಿ ಠಾಣೆಯಲ್ಲಿ ಆತ್ಮಹ* ಕಾರಣ ಇದೆ ನೋಡಿ. | suicide

ಕಳ್ಳತನ ಕೇಸ್‌ನಲ್ಲಿ ಅರೆಸ್ಟ್‌ ಆಗಿದ್ದ ಆರೋಪಿ ಠಾಣೆಯಲ್ಲಿ ಆತ್ಮಹ* ಕಾರಣ ಇದೆ ನೋಡಿ. | suicide

ರಾಮನಗರ : ಬೆಂಗಳೂರು ದಕ್ಷಿಣ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಎಂ.ಕೆ.ದೊಡ್ಡಿ ಠಾಣೆಯ ಶೌಚಾಲಯದಲ್ಲಿ ಬಂಧಿತ ಆರೋಪಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಎಸ್​​ಐ ಸೇರಿದಂತೆ ಮೂವರು ಪೊಲೀಸ್ ಸಿಬ್ಬಂದಿಯನ್ನು ಸಸ್ಪೆಂಡ್  ಮಾಡಲಾಗಿದೆ. ಕರ್ತವ್ಯ ಲೋಪ ಹಿನ್ನಲೆ ಎಂ.ಕೆ.ದೊಡ್ಡಿ ಠಾಣೆಯ ಎಎಸ್ಐ ನಾಗರಾಜು, ಕಾನ್ಸ್‌ಟೇಬಲ್‌ಗಳಾದ ಪ್ರತಾಪ್‌, ಲಕ್ಷ್ಮೀನಾರಾಯಣ ಹಾಗೂ ಸೋಮನಾಥ್‌ ಅಮಾನತುಗೊಳಿಸಿ ಪೊಲೀಸ್ ವರಿಷ್ಠಾಧಿಕಾರಿ ಶ್ರೀನಿವಾಸ್ ಗೌಡ ಆದೇಶಿಸಿದ್ದಾರೆ.

ಕಳ್ಳತನ ಕೇಸ್‌ನಲ್ಲಿ ಆರೋಪಿ ರಮೇಶ್​ ಅರೆಸ್ಟ್‌ ಆಗಿದ್ದ. ಮೂಲತಃ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ದುಂಡನಹಳ್ಳಿ ನಿವಾಸಿ ರಮೇಶ್​, ಆಗಸ್ಟ್ 20ರಂದು ಠಾಣೆಯ ಶೌಚಾಲಯದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದ. ಹೀಗಾಗಿ ಕರ್ತವ್ಯ ಲೋಪ ಕಂಡುಬಂದ ಹಿನ್ನಲೆ ಎಎಸ್​​ಐ ಸೇರಿ ಮೂವರು ಪೊಲೀಸ್ ಸಿಬ್ಬಂದಿಯನ್ನ ಅಮಾನತು ಮಾಡಲಾಗಿದೆ.

ನಡೆದದ್ದೇನು?

ಎರಡು ತಿಂಗಳ ಹಿಂದೆ ಚನ್ನಪಟ್ಟಣ ತಾಲ್ಲೂಕಿನ ಬೊಮ್ಮನಾಯಕನಹಳ್ಳಿ ಗ್ರಾಮದ ದೇವಸ್ಥಾನವೊಂದರಲ್ಲಿ ದೇವಸ್ಥಾನದ ಬಾಗಿಲು ಒಡೆದು ಹುಂಡಿ ಕಳ್ಳತನ ಮಾಡಿದ್ದರು. ಪ್ರಕರಣ ಸಂಬಂಧ ಆರೋಪಿ ರಮೇಶ್, ಮಂಜು ಹಾಗೂ ಮಂಜುನ ಸ್ನೇಹಿತ ಶ್ರೀನಿವಾಸ್ ಎಂಬಾತನನ್ನ ಪೊಲೀಸರು ಬಂಧಿಸಿದ್ದರು. ಆಗಸ್ಟ್ 18ರಂದು ಚನ್ನಪಟ್ಟಣದ ನ್ಯಾಯಾಲಯದ ಮುಂದೆ ಆರೋಪಿಗಳನ್ನ ಹಾಜರುಪಡಿಸಿ ಹೆಚ್ಚಿನ ವಿಚಾರಣೆಗೆಂದು ಮೂರು ದಿನ ಪೊಲೀಸ್ ಕಸ್ಟಡಿಗೆ ಪಡೆದಿದ್ದರು.

ಬಳಿಕ ಮತ್ತೆ ನ್ಯಾಯಾಧೀಶರ ಮುಂದೆ ಹಾಜರುಪಡಿಸಬೇಕಿತ್ತು. ಆದರೆ ಅಷ್ಟರಲ್ಲಿ ಬೆಳಗಿನ ಜಾವ ಶೌಚಕ್ಕೆಂದು ತೆರಳಿದ್ದ ವೇಳೆ ರಮೇಶ್ ತನ್ನ ಪಂಚೆಯಲ್ಲೇ ಶೌಚಾಲಯದಲ್ಲಿ ನೇಣಿಗೆ ಶರಣಾಗಿದ್ದ. ಬಹಳ ಹೊತ್ತಿನಿಂದ ಬಾರದಿದ್ದ ಹಿನ್ನೆಲೆ ಪೊಲೀಸ್ ಸಿಬ್ಬಂದಿ ಹೋಗಿ‌ ನೋಡಿದ್ದಾರೆ. ಈ ವೇಳೆ ನೇಣು ಬಿಗಿದ ಸ್ಥಿತಿಯಲ್ಲಿ ಇದ್ದ ಆತನನ್ನ ತಕ್ಷಣ ಚನ್ನಪಟ್ಟಣ ಸಾರ್ವಜನಿಕ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಅಷ್ಟರಲ್ಲಿ ಸಾವನ್ನಪ್ಪಿದ್ದ.

ಇನ್ನು ವಿಷಯ ತಿಳಿಯುತ್ತಿದ್ದಂತೆ ಕುಟುಂಬಸ್ಥರು ಆಸ್ಪತ್ರೆ ಬಳಿ ಜಮಾಯಿಸಿದ್ದರು. ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು. ಪೊಲೀಸರ ಮೇಲೆ ಕುಟುಂಬಸ್ಥರು ಗಂಭೀರ ಆರೋಪ ಮಾಡಿದ್ದರು. ಪ್ರಕರಣವನ್ನು ಈಗಾಗಲೇ ಸಿಐಡಿ ತನಿಖೆಗೆ ವಹಿಸಲಾಗಿದೆ.

For More Updates Join our WhatsApp Group :

https://chat.whatsapp.com/JVoHqE476Wn3pVh1gWNAcH

Leave a Reply

Your email address will not be published. Required fields are marked *