ಬೆಂಗಳೂರು: ಅತ್ಯಾಚಾರ ಆರೋಪ ಪ್ರಕರಣ ಎದುರಿಸುತ್ತಿರುವ ಬಿಜೆಪಿ ಶಾಸಕ ಮುನಿರತ್ನರನ್ನು 42ನೇ ಎಸಿಎಂಎಂ ಕೋರ್ಟ್ ಎಸ್ಐಟಿ ಕಸ್ಟಡಿಗೆ ನೀಡಿದೆ.
ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶರಾದ ಕೆ.ಎನ್ ಶಿವಕುಮಾರ್ ಅವರು ಅಕ್ಟೋಬರ್ 5ರವರೆಗೆ ಎಸ್ಐಟಿ ಕಸ್ಟಡಿಗೆ ನೀಡಿ ಆದೇಶಿಸಿದ್ದಾರೆ.
ಶಾಸಕ ಮುನಿರತ್ನ ವಿರುದ್ದ ರಾಮನಗರ ಜಿಲ್ಲೆಯ ಕಗ್ಗಲೀಪುರ ಪೊಲೀಸ್ ಠಾಣೆಯಲ್ಲಿ ಅತ್ಯಾಚಾರ ಪ್ರಕರಣ ದಾಖಲಾಗಿತ್ತು. ಈ ಸಂಬಂಧ ಪೊಲೀಸರು ಮುನಿರತ್ನ ಅವರನ್ನು ಕಳೆದ ಶುಕ್ರವಾರ ಬಂಧಿಸಿತ್ತು. ಇದೀಗ ಹೆಚ್ಚಿನ ತನಿಖೆಗಾಗಿ ಇಂದು ಅವರನ್ನು ಎಸ್ಐಟಿ ಕಸ್ಟಡಿಗೆ ನೀಡಿ ಕೋರ್ಟ್ ಆದೇಶಿಸಿದೆ.
ಶಾಸಕ ಮುನಿರತ್ನ ಬಳಿ ಹಲವು ಖಾಸಗಿ ಅಶ್ಲೀಲ ವಿಡಿಯೋಗಳಿದ್ದು ರಾಜಕೀಯ ಎದುರಾಳಿಗಳನ್ನು ಹಣಿಯಲು ಮುನಿರತ್ನ ಹನಿಟ್ರ್ಯಾಪ್ ಮಾಡಿಸುತ್ತಿದ್ದರೂ ಎಂದು 40 ವರ್ಷದ ಸಂತ್ರಸ್ತೆ ದೂರಿನಲ್ಲಿ ಉಲ್ಲೇಖಿಸಿದ್ದಾರೆ.