“ಕನ್ನಡ ನಟಿಗೆ ಲೈಂಗಿಕ ಕಿರುಕುಳ: ನಿರ್ಮಾಪಕ ಅರವಿಂದ್ ವೆಂಕಟೇಶ ರೆಡ್ಡಿ ಬಂಧನ”.

 “ಕನ್ನಡ ನಟಿಗೆ ಲೈಂಗಿಕ ಕಿರುಕುಳ: ನಿರ್ಮಾಪಕ ಅರವಿಂದ್ ವೆಂಕಟೇಶ ರೆಡ್ಡಿ ಬಂಧನ”.

ಕನ್ನಡ ಚಿತ್ರರಂಗದಲ್ಲಿ ಹಲವು ಸಿನಿಮಾಗಳಲ್ಲಿ ನಟಿಸಿ ಗಮನ ಸೆಳೆದ ನಟಿಯೊಬ್ಬರಿಗೆ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಎವಿಆರ್ ಗ್ರೂಪ್ ಸಂಸ್ಥಾಪಕ ಆಗಿರುವ ಅರವಿಂದ್ ರೆಡ್ಡಿನ ಬಂಧಿಸಲಾಗಿದೆ. ಎಸಿಪಿ ಚಂದನ್ ಮತ್ತು ತಂಡದಿಂದ ಆರೋಪಿ ಅರೆಸ್ಟ್ ಮಾಡಲಾಗಿದೆ. ಶ್ರೀಲಂಕದಿಂದ ಬೆಂಗಳೂರಿಗೆ ಬರುವಾಗ ಆರೋಪಿ ಲಾಕ್ ಆಗಿದ್ದಾನೆ. ಕಳೆದ ತಿಂಗಳು 17ರಂದು ಅರವಿಂದ್ ವಿರುದ್ಧ ಎಫ್​ಐಆರ್​ ದಾಖಲಾಗಿತ್ತು.

ಕನ್ನಡದಲ್ಲಿ 9ಕ್ಕೂ ಅಧಿಕ ಸಿನಿಮಾಗಳಲ್ಲಿ ಈ ನಟಿ ಅಭಿನಯಿಸಿದ್ದಾರೆ. 2021ರಲ್ಲಿ ಅರವಿಂದ್​ಗೂ ಈ ನಟಿಗೂ ಪರಿಚಯ ಬೆಳೆದಿತ್ತು. 2022ರಲ್ಲಿ ಶ್ರೀಲಂಕಾದಲ್ಲಿ ನಡೆದ ‘ಲಾರ್ಸ್​ ಕ್ರಿಕೆಟ್ ಕಪ್’ ಉದ್ಘಾಟನೆಗೆ ಬರುವಂತೆ ಅರವಿಂದ್ ನಟಿ ಬಳಿ ಕೇಳಿದ್ದ. ಅಂತೆಯೇ ನಟಿ ತೆರಳಿದ್ದರು. ಅಲ್ಲಿಂದ ಇಬ್ಬರ ಮಧ್ಯೆ ಒಳ್ಳೆಯ ಬಾಂಧವ್ಯ ಬೆಳೆಯಿತು. ಅಲ್ಲಿಂದ ಪ್ರೀತಿ-ಕಾಳಜಿಯಿಂದ ಅರವಿಂದ್ ನಡೆದುಕೊಳ್ಳುತ್ತಿದ್ದನಂತೆ. ಆ ಬಳಿಕ 2022ರ ಆಗಸ್ಟ್​ನಲ್ಲಿ ಅರವಿಂದ್ ನಟಿಯ ಜೊತೆ ಸಂಪರ್ಕ ಕಳೆದುಕೊಂಡ. ಇದಕ್ಕೆ ಕಾರಣ ನಟಿಗೆ ತಿಳಿದಿರಲಿಲ್ಲ.

ನಂತರ ಅರವಿಂದ್ ಮತ್ತೆ ನಟಿಯ ಜೊತೆ ಸಂಪರ್ಕ ಬೆಳೆಸಿದ್ದೂ ಅಲ್ಲದೆ, ನಟಿಗೆ ಕಿರುಕುಳ ನೀಡಲು ಶುರು ಮಾಡಿದ್ದ. ಆತನ ಮಾನಸಿಕ ಸ್ಥಿತಿ ಹಾಗೂ ಕುಡಿತದ ಚಟದ ಬಗ್ಗೆ ನಟಿಗೆ ಆಗ ಗೊತ್ತಾಯಿತು. 2024ರಲ್ಲಿ ಒಮ್ಮೆ ಅರವಿಂದ್ ನಟಿಗೆ ಕರೆ ಮಾಡಿದ್ದೂ ಅಲ್ಲದೆ, ನಿನ್ನನ್ನು ಮದುವೆ ಆಗುತ್ತೇನೆ ಎಂದು ಹೇಳಿದ್ದ. ಇದರಿಂದ ಭಯಗೊಂಡ ನಟಿ ನೂರು ಮಾತ್ರೆಗಳನ್ನು ನುಂಗಿ ಆತ್ಮಹತ್ಯೆಗೆ ಪ್ರಯತ್ನಿಸಿದ್ದರಂತೆ. ಈ ಬಗ್ಗೆ ದೂರಿನಲ್ಲಿ ತಿಳಿಸಲಾಗಿದೆ.

ನಂತರ ಅರವಿಂದ್ ಮನೆಗೆ ಬಂದು ನಟಿಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿ ಚಿಕಿತ್ಸೆ ಕೊಡಿಸಿದ್ದ. ಈ ವಿಚಾರವನ್ನು ನಟಿಯ ಮನೆಯವರಿಗೆ ಹೇಳಲು ಅವಕಾಶವನ್ನೇ ನೀಡಿರಲಿಲ್ಲವಂತೆ. ಕರೆ ಮಾಡುತ್ತೇನೆ ಮೊಬೈಲ್ ಕೊಡು ಎಂದು ನಟಿ ಹೇಳಿದಾಗ, ಅರವಿಂದ್ ಏಕಾಏಕಿ ನಟಿಯ ಮೇಲೆ ಮೇಲೆ ಹಲ್ಲೆ ಮಾಡಿದ್ದೂ ಅಲ್ಲದೆ. ಬಟ್ಟೆ ಹರಿದು ಅರೆಬೆತ್ತಲೆ ಮಾಡಿದ್ದ.

For More Updates Join our WhatsApp Group :

https://chat.whatsapp.com/JVoHqE476Wn3pVh1gWNAcH

Leave a Reply

Your email address will not be published. Required fields are marked *