ಯುವತಿಗೆ ಲೈಂಗಿಕವಾಗಿ ದುರುಪಯೋಗ – DJ ಹಳ್ಳಿ ಇನ್ಸ್ಪೆಕ್ಟರ್ ಸುನೀಲ್ ಅಮಾನತು!

ಯುವತಿಗೆ ಲೈಂಗಿಕವಾಗಿ ದುರುಪಯೋಗ – DJ ಹಳ್ಳಿ ಇನ್ಸ್ಪೆಕ್ಟರ್ ಸುನೀಲ್ ಅಮಾನತು!

ಬೆಂಗಳೂರು: ಯುವತಿ ಮೇಲೆ ಅತ್ಯಾಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಡಿಜೆ ಹಳ್ಳಿ ಪೊಲೀಸ್ ಇನ್ಸ್​​ಪೆಕ್ಟರ್ ಸುನೀಲ್ ಅವರನ್ನ ಅಮಾನತು ಮಾಡಲಾಗಿದೆ. ಈ ಬಗ್ಗೆ ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಪ್ರತಿಕ್ರಿಯಿಸಿದ್ದು, ಇನ್ಸ್​ಪೆಕ್ಟರ್​ ಹಾಗೂ ಎಎಸ್ಐ ವಿರುದ್ಧ ಪ್ರಕರಣ ದಾಖಲಾಗಿತ್ತು. ಸದ್ಯ ಇಬ್ಬರನ್ನೂ ಸಸ್ಪೆಂಡ್ ಮಾಡಲಾಗಿದೆ, ತನಿಖೆ ನಡೆಯುತ್ತಿದೆ ಎಂದು ಮಾಹಿತಿ ನೀಡಿದರು.

ಪ್ರಕರಣವೊಂದರ ಸಂಬಂಧ ಠಾಣೆಗೆ ಹೋಗಿದ್ದ ವೇಳೆ ಮಹಿಳೆಗೆ ಸಹಾಯ ಮಾಡುವುದಾಗಿ ನಂಬರ್ ತೆಗೆದುಕೊಂಡು ವಾಟ್ಸಪ್ ಚಾಟ್ ಮೂಲಕ ಪರಿಚಯ ಮಾಡಿಕೊಂಡಿದ್ದರು.ರಿಜಿಸ್ಟರ್ ಮದುವೆಯಾಗುವುದಾಗಿ ನಂಬಿಸಿದ್ದು, 1 ವರ್ಷದಲ್ಲಿ 3 ಬಾರಿ ಲೈಂಗಿಕವಾಗಿ ಬಳಸಿಕೊಂಡಿದ್ದಾರೆ.ಅಲ್ಲದೇ ಖಾಸಗಿ ಫೋಟೋ, ವಿಡಿಯೋ ಇಟ್ಟುಕೊಂಡು ನಮ್ಮ ವಿಚಾರ ಯಾರಿಗಾದರೂ ಹೇಳಿದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ಮಹಿಳೆ ಆರೋಪಿಸಿದ್ದು, ನ್ಯಾಯಕ್ಕಾಗಿ ಪೊಲೀಸ್ ಮಹಾನಿರ್ದೇಶಕರ ಮೊರೆ ಹೋಗಿದ್ದರು.

For More Updates Join our WhatsApp Group :

https://chat.whatsapp.com/JVoHqE476Wn3pVh1gWNAcH

Leave a Reply

Your email address will not be published. Required fields are marked *