ಕಾಂಗ್ರೆಸ್ ಟಿಕೆಟ್ ಯಾರಿಗೆ?
ದಾವಣಗೆರೆ : ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದ ತೆರವಾಗಿರೋ ದಾವಣಗೆರೆ ದಕ್ಷಿಣ ವಿಧಾನ ಸಭಾ ಕ್ಷೇತ್ರದ ಉಪಚುನಾವಣೆ ಕುರಿತು ಸಚಿವ ಜಮೀರ್ ಅಹ್ಮದ್ ಖಾನ್ ಮಹತ್ವದ ಹೇಳಿಕೆ ನೀಡಿದ್ದಾರೆ. ಕ್ಷೇತ್ರದಲ್ಲಿ ಹೆಚ್ಚಿನ ಸಂಖ್ಯೆಯ ಮುಸ್ಲಿಂ ಮತದಾರರಿದ್ದು, ಈ ಉಪಚುನಾವಣೆ ಸಂದರ್ಭದಲ್ಲಿ ಅಲ್ಪಸಂಖ್ಯಾತ ಅಭ್ಯರ್ಥಿಗೆ ಟಿಕೆಟ್ ನೀಡುವ ಕುರಿತು ಚರ್ಚೆ ನಡೆದಿದೆ. ಶಾಮನೂರು ಶಿವಶಂಕರಪ್ಪ ಅವರು ಹಿಂದಿನ ಚುನಾವಣೆಯ ಸಂದರ್ಭದಲ್ಲಿ ತಾವು 2023ರ ಚುನಾವಣೆಯನ್ನು ತಮ್ಮ ಕೊನೆಯ ಚುನಾವಣೆ ಎಂದು ಘೋಷಿಸಿದ್ದರು.
ಮುಂದಿನ ಚುನಾವಣೆಯಲ್ಲಿ ಅಲ್ಪಸಂಖ್ಯಾತ ಸಮುದಾಯದವರಿಗೆ ಟಿಕೆಟ್ ನೀಡಿ, ಅವರನ್ನು ಗೆಲ್ಲಿಸಿಕೊಂಡು ಬರುವುದಾಗಿ ಅವರು ಸ್ವತಃ ಹೇಳಿದ್ದರು ಎಂದು ಹಲವು ಮುಖಂಡರು ನನಗೆ ವಿಡಿಯೋ ಕ್ಲಿಪ್ ಸಮೇತ ತೋರಿಸಿದ್ದಾರೆ. ಪಕ್ಷದ ಮುಖಂಡರಾದ ಶಾಮನೂರು ಶಿವಶಂಕರಪ್ಪ ಅವರ ಈ ಭರವಸೆಯನ್ನು ಮುಂದಿಟ್ಟುಕೊಂಡು ಅನೇಕರು ನನ್ನನ್ನು ಭೇಟಿ ಮಾಡಿದ್ದಾರೆ. ಆದ್ರೆ ಈ ಕುರಿತು ಅಂತಿಮ ನಿರ್ಧಾರವನ್ನು ಪಕ್ಷದ ಹಿರಿಯ ನಾಯಕರು ಕೈಗೊಳ್ಳಲಿದ್ದಾರೆ ಎಂದು ಜಮೀರ್ ಅಹ್ಮದ್ ಖಾನ್ ಹೇಳಿದ್ದಾರೆ.
For More Updates Join our WhatsApp Group :




