ಇಂದು ಬೆಂಗಳೂರಿನಲ್ಲಿ ಪಕ್ಷದ ಕಚೇರಿಯಲ್ಲಿ ಕಾಂಗ್ರೆಸ್ ಪಕ್ಷ ಸೇರಿದ ಶೆಟ್ಟರ್…!

ಬೆಂಗಳೂರಿನಲ್ಲಿರುವ ಪಕ್ಷದ ಕಚೇರಿಯಲ್ಲಿ ಸೋಮವಾರ ಮಲ್ಲಿಕಾರ್ಜುನ ಖರ್ಗೆ ಸಮ್ಮುಖದಲ್ಲಿ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಕಾಂಗ್ರೆಸ್ ಸೇರಿದರು. ಶೆಟ್ಟರ್ ಅವರು ಭಾನುವಾರ ರಾತ್ರಿ ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು.

ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ಭಾನುವಾರ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಬಳಿಕ ಬೆಂಗಳೂರಿನ ಕಾಂಗ್ರೆಸ್ ಶಾಸಕ ಶಾಮನೂರು ಶಿವಶಂಕರಪ್ಪ ಅವರ ನಿವಾಸದಲ್ಲಿ ಸಿದ್ದರಾಮಯ್ಯ, ಎಂ.ಬಿ.ಪಾಟೀಲ್, ರಣದೀಪ್ ಸಿಂಗ್ ಸುರ್ಜೇವಾಲಾ ಸೇರಿದಂತೆ ಕಾಂಗ್ರೆಸ್ ಮುಖಂಡರ ಜತೆ ಶೆಟ್ಟರ್ ವಿಸ್ತೃತ ಚರ್ಚೆ ನಡೆಸಿದರು.

ಹುಬ್ಬಳ್ಳಿ-ಧಾರವಾಡ (ಕೇಂದ್ರ) ಕ್ಷೇತ್ರದಿಂದ ಪಕ್ಷ ಟಿಕೆಟ್ ನಿರಾಕರಿಸಿದ್ದಕ್ಕಾಗಿ ಬಿಜೆಪಿ ತೊರೆದಿದ್ದಾರೆ ಎನ್ನಲಾಗಿದೆ. ಈ ವೇಳೆ ಮಾತನಾಡಿದ ಕರ್ನಾಟಕ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಕರ್ನಾಟಕ ರಾಜಕೀಯದಲ್ಲಿ ಇದೊಂದು ಐತಿಹಾಸಿಕ ದಿನ ಎಂದಿದ್ದಾರೆ.

“ಇದು ನಮಗೆ ಮಂಗಳಕರ ದಿನ. ಶೆಟ್ಟರ್ ಅವರು ಸ್ಪೀಕರ್ ಆಗಿ ಹಾಗೂ ರಾಜ್ಯದ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ್ದಾರೆ. ಅವರು ಎಂದಿಗೂ ಚುನಾವಣೆಯಲ್ಲಿ ಸೋತಿಲ್ಲ ಮತ್ತು ಅವರ ವೃತ್ತಿಜೀವನಕ್ಕೆ ಯಾವುದೇ ಕಪ್ಪು ಚುಕ್ಕೆ ಇಲ್ಲದೆ ಕೆಲಸ ಮಾಡಿದ್ದಾರೆ, ”ಎಂದು ಶಿವಕುಮಾರ್ ಹೇಳಿದರು.

ಶೆಟ್ಟರ್ ಅವರು ಪಕ್ಷದ ಸಿದ್ದಾಂತಕ್ಕೆ ಒಪ್ಪಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ ಎಂದು ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. ಶೆಟ್ಟರ್ ಸೇರ್ಪಡೆಯಿಂದ ಉತ್ತರ ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ ಬಲಗೊಂಡಿದೆ. ಶೆಟ್ಟರ್ ಜೊತೆ ಹಲವಾರು ಮಂದಿ ಕಾಂಗ್ರೆಸ್ ಸೇರಿದ್ದಾರೆ, ಅವರನ್ನು ಸ್ವಾಗತಿಸುತ್ತೇನೆ. ಮುಂಬರುವ ಚುನಾವಣೆಯಲ್ಲಿ ಕಾಂಗ್ರೆಸ್ 150 ಸ್ಥಾನ ಗಳಿಸಲಿದೆ ಎಂದು ಖರ್ಗೆ ಹೇಳಿದರು.

ಪಕ್ಷಕ್ಕೆ ಸೇರ್ಪಡೆಗೊಂಡ ನಂತರ ಕಾರ್ಯಕ್ರಮದಲ್ಲಿ ಮಾತನಾಡಿದ ಶೆಟ್ಟರ್, ಬಿಜೆಪಿಯಿಂದ ನನಗೆ ಅನ್ಯಾಯವಾಗಿದೆ. “ನನ್ನ ಬೆಂಬಲಿಗರು ನನ್ನನ್ನು ನಡೆಸಿಕೊಂಡ ರೀತಿಯಿಂದಾಗಿ ಬಿಜೆಪಿ ವಿರುದ್ಧ ಅಸಮಾಧಾನಗೊಂಡಿದ್ದರು. ರಾಜ್ಯದ ಕೆಲ ನಾಯಕರು ತಮ್ಮ ಸ್ವಹಿತಾಸಕ್ತಿಗಾಗಿ ಕೆಲಸ ಮಾಡುತ್ತಿದ್ದಾರೆ’ ಎಂದು ಶೆಟ್ಟರ್ ಹೇಳಿದರು.

Pragati TV Social Connect for more latest u

Leave a Reply

Your email address will not be published. Required fields are marked *