‘ಯಾರ ಮನೆಯನ್ನೂ ಒಡೆಯಬಾರದು’ ಎಂದು ಖಡಕ್ ಸಂದೇಶ.
ಸೋಶಿಯಲ್ ಮೀಡಿಯಾ ತುಂಬೆಲ್ಲ ದರ್ಶನ್ ಫ್ಯಾನ್ಸ್ ವರ್ಸಸ್ ಸುದೀಪ್ ಫ್ಯಾನ್ಸ್ ಎಂಬಂತಹ ವಾತಾವರಣ ನಿರ್ಮಾಣ ಆಗಿದೆ. ‘ದಿ ಡೆವಿಲ್’ ಮತ್ತು ‘ಮಾರ್ಕ್’ ಸಿನಿಮಾಗಳು ಕೆಲವೇ ದಿನಗಳ ಅಂತರದಲ್ಲಿ ಬಿಡುಗಡೆ ಆಗಿದ್ದು, ಫ್ಯಾನ್ಸ್ ವಾರ್ ಶುರುವಾಗಿದೆ. ಇದೇ ಸಮಯದಲ್ಲಿ ಶಿವರಾಜ್ಕುಮಾರ್ ಅಭಿನಯದ ‘45’ ಸಿನಿಮಾ ಕೂಡ ತೆರೆಕಂಡಿದೆ.
ಫಸ್ಟ್ ಡೇ ಫಸ್ಟ್ ಶೋ ಸಿನಿಮಾ ನೋಡಿದ ಬಳಿಕ ಮಾಧ್ಯಮಗಳ ಜೊತೆ ಶಿವಣ್ಣ ಮಾತನಾಡಿದ್ದಾರೆ. ಫ್ಯಾನ್ಸ್ ವಾರ್ ಕುರಿತು ಅವರು ಖಡಕ್ ರಿಯಾಕ್ಷನ್ ನೀಡಿದ್ದಾರೆ. ‘ಎಲ್ಲರೂ ಅರ್ಥ ಮಾಡಿಕೊಳ್ಳಬೇಕು. ಯಾರ ಮನೆಯನ್ನೂ ಒಡೆಯೋಕೆ ಹೋಗಬಾರದು. ಯಾರ ಭಾವನೆಗಳ ಜೊತೆಗೂ ಆಟ ಆಡಬಾರದು. ಸಮಸ್ಯೆ ಪರಿಹರಿಸಲು ಪ್ರಯತ್ನಿಸಬೇಕು. ಬದುಕೋಣ, ಬದುಕೋಕೆ ಬಿಡೋಣ ಎಂಬ ಭಾವನೆ ಎಲ್ಲರಿಗೂ ಇರಬೇಕು. ಸಮಾಜ ಇಷ್ಟೇ. ನಾವು ಎಷ್ಟು ದಿನ ಇರುತ್ತೇವೆ? ಅಷ್ಟು ದಿನ ನಾವೆಲ್ಲರೂ ಅನ್ಯೋನ್ಯವಾಗಿ ಹೊಂದಿಕೊಂಡು ಇರಬೇಕು’ ಎಂದು ಶಿವರಾಜ್ಕುಮಾರ್ ಅವರು ಹೇಳಿದ್ದಾರೆ.
For More Updates Join our WhatsApp Group :



