ದೊಡ್ಮನೆ ಮಗ ಯುವರಾಜ್ಕುಮಾರ್ ಇದೀಗ ಪತ್ನಿ ಶ್ರೀದೇವಿಗೆ ಡಿವೋರ್ಸ್ ನೀಡಲು ಮುಂದಾಗಿದ್ದಾರೆ. ಮಾನಸಿಕ ಕಿರುಕುಳ ಎಂದು ಆರೋಪಿಸಿ ಯುವರಾಜ್ಕುಮಾರ್ ಫ್ಯಾಮಿಲಿ ಕೋರ್ಟ್ ಮೆಟ್ಟಿಲೇರಿದ್ದಾರೆ. ಈ ವಿಚಾರವಾಗಿ ಶಿವಣ್ಣ ಪ್ರತಿಕ್ರಿಯೆ ನೀಡಿದ್ದಾರೆ
ಯುವ ಡಿವೋರ್ಸ್ ವಿಚಾರದ ಬಗ್ಗೆ ನನಗೆ ಮಾಹಿತಿ ಇಲ್ಲ ಎಂದಿದ್ದಾರೆ. ಮಾಹಿತಿ ಇಲ್ಲದೇ ಮಾತನಾಡೋದು ಸರಿಯಿಲ್ಲ ಎಂದು ಶಿವಣ್ಣ ಮಾತನಾಡಿದ್ದಾರೆ. ಡಿವೋರ್ಸ್ ಬಗ್ಗೆ ಮೊಬೈಲ್ನಲ್ಲಿ ನೋಡಿ ತಿಳಿದುಕೊಂಡಿದ್ದೇನೆ. ಆ ರೀತಿ ಏನಾದರೂ ಆಗಿದ್ದರೆ ಮನಸ್ಸಿಗೆ ಬೇಜಾರಾಗುತ್ತದೆ ಎಂದು ಶಿವಣ್ಣ ಮಾತನಾಡಿದ್ದಾರೆ.
7 ವರ್ಷಗಳು ಪ್ರೀತಿಸಿ ಮದುವೆಯಾಗಿದ್ದ ಯುವ ಮತ್ತು ಶ್ರೀದೇವಿ ಜೋಡಿ ಈಗ ದಾಂಪತ್ಯಕ್ಕೆ ಅಂತ್ಯ ಹಾಡಲು ಮುಂದಾಗಿದ್ದಾರೆ. ಜೂನ್ 6ರಂದು ಫ್ಯಾಮಿಲಿ ಕೋರ್ಟ್ಗೆ ಅರ್ಜಿ ಸಲ್ಲಿಸಿರುವ ಯುವರಾಜ್ಕುಮಾರ್, ಜುಲೈ 4ರಂದು ವಿಚಾರಣೆಗೆ ನಿಗದಿಯಾಗಿದೆ
ಕಳೆದ 6 ತಿಂಗಳಿಂದ ಇಬ್ಬರ ಡಿವೋರ್ಸ್ ಸುದ್ದಿ ಹರಿದಾಡುತ್ತಿತ್ತು. ಕೆಲವು ತಿಂಗಳುಗಳಿಂದ ಜೊತೆಯಾಗಿ ಕೂಡ ವಾಸಿಸುತ್ತಿಲ್ಲ. ‘ಯುವ’ ಸಿನಿಮಾದ ಪ್ರಚಾರ ಕಾರ್ಯದಲ್ಲಿಯೂ ಕೂಡ ಶ್ರೀದೇವಿ ಭಾಗಿಯಾಗಿಲ್ಲ. ಸದ್ಯ ಯುವ ಪತ್ನಿ ವಿದೇಶದಲ್ಲಿ ನೆಲೆಸಿದ್ದಾರೆ ಎನ್ನಲಾಗಿದೆ