ಸಂಕ್ರಾOತಿ ಹಬ್ಬದ ನಂತರ ಕೆಎಸ್ಆರ್‌ಟಿಸಿ, ಬಿಎಂಟಿಸಿ ಇಂದ ಜನತೆಗೆ ಶಾಕ್

ಸಂಕ್ರಾOತಿ ಹಬ್ಬದ ನಂತರ ಕೆಎಸ್ಆರ್ಟಿಸಿ, ಬಿಎಂಟಿಸಿ ಇಂದ ಜನತೆಗೆ ಶಾಕ್

KSRTC, ಬಿಎಂಟಿಸಿ ಸೇರಿದಂತೆ ನಾಲ್ಕು ನಿಗಮಗಳು ಆರ್ಥಿಕ ಸಂಕಷ್ಟ ಎದುರಿಸುತ್ತಿರುವ ಸಂದರ್ಭದಲ್ಲಿ ಸಾರಿಗೆ ಮುಖಂಡರು ಸಂಕ್ರಾOತಿ ನಂತರ ಸಿಎಂ ಜೊತೆಗೆ ನಡೆಯಲಿರುವ ಸಭೆಯಲ್ಲಿ, ಟಿಕೆಟ್ ಏರಿಕೆಗೆ ಗ್ರೀನ್ ಸಿಗ್ನಲ್ ನೀಡುವಂತೆ ಮನವಿ ಮಾಡಲು ಈಗಾಗಲೇ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ಸಾರಿಗೆ ಸಚಿವರಿಗೆ ಈಗಾಗಲೇ ನಾಲ್ಕು ನಿಗಮಗಳಿಂದಲೂ ಟಿಕೆಟ್ ದರ ಏರಿಕೆಗೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಸಂಕ್ರಾOತಿ ಹಬ್ಬದ ನಂತರ ಸಿಎಂ ಸಿದ್ದರಾಮಯ್ಯ ಜೊತೆಯಲ್ಲಿ ಸಾರಿಗೆ ಮುಖಂಡರ ಸಭೆ ನಡೆಯಲಿದೆ. ಈ ಸಭೆಯಲ್ಲಿ, ನಾಲ್ಕು ನಿಗಮಗಳ ಬಸ್‌ಗಳ ಟಿಕೆಟ್ ದರ ಏರಿಕೆಗೆ ಅನುಮತಿ ನೀಡುವಂತೆ ಸಾರಿಗೆ ನೌಕರರು ಸಿಎಂ ಸಿದ್ದರಾಮಯ್ಯಗೆ ಮನವಿ ಮಾಡಲು ಈಗಾಗಲೇ ಅಂಕಿ ಅಂಶಗಳನ್ನು ಸಿದ್ಧಪಡಿಸಿ ಇಟ್ಟುಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

BMTC ಟಿಕೆಟ್ ದರ ಏರಿಕೆ ಮಾಡಿ 1೦ ವರ್ಷಗಳಾಗಿವೆ. ಕೆಎಸ್ಆರ್ಟಿಸಿ ಟಿಕೆಟ್ ಏರಿಕೆ ಮಾಡಿ ಐದು ವರ್ಷಗಳಾಗಿವೆ. ಹಾಗಾಗಿ ನಿಗಮಗಳನ್ನು ನಡೆಸಲು ಕಷ್ಟ ಆಗುತ್ತಿದೆ. ಆರ್ಥಿಕವಾಗಿ ಸಂಕಷ್ಟವನ್ನು ಎದುರಿಸುತ್ತಿದ್ದೇವೆ ಎಂದು ಮನವಿ ಮಾಡಲು ಸಾರಿಗೆ ಮುಖಂಡರು ಸಿದ್ಧವಾಗಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ.

ಇತ್ತ ಕಳೆದ ವಾರ ಸಿಎಂ ಜೊತೆಗೆ ಸಾರಿಗೆ ಅಧಿಕಾರಿಗಳ ಜತೆ ನಡೆದಿದ್ದ ಸಭೆಯಲ್ಲಿ, ಟಿಕೆಟ್ ದರ ಏರಿಕೆ ಮಾಡಿದರೆ ಮಾತ್ರ BMTC, KSRTC ಉಳಿಸಲು ಸಾಧ್ಯ ಎಂದು ಸಿಎಂಗೆ ಅಧಿಕಾರಿಗಳು ಮನವರಿಕೆ ಮಾಡಿದ್ದಾರೆ ಎನ್ನಲಾಗಿದೆ. ಪೆಟ್ರೋಲ್-ಡೀಸೆಲ್ ದರ ಹಾಗೂ ಬಿಡಿ ಭಾಗಗಳ ದರ ಏರಿಕೆಯಾಗಿದೆ. ಇಂಧನ ದರ ನಾಲ್ಕೈದು ವರ್ಷದಲ್ಲಿ ಏರಿಕೆಯಾಗುತ್ತಲೇ ಬಂದಿದೆ. ಅದಕ್ಕೆ ಅನುಗುಣವಾಗಿ ಟಿಕೆಟ್ ದರ ಏರಿಕೆಯಾಗಬೇಕೆಂದು ನಾಲ್ಕೂ ನಿಗಮಗಳು ಮನವಿ ಮಾಡಿವೆ.

ಶೇ 25 ರಿಂದ 28 ದರ ಹೆಚ್ಚಳಕ್ಕೆ ಪ್ರಸ್ತಾವನೆ

ಟಿಕೆಟ್ ದರದಲ್ಲಿ ಶೇ 25 ರಿಂದ 28 ರಷ್ಟು ಏರಿಕೆಗೆ ನಾಲ್ಕು ನಿಗಮಗಳು ಈ ಹಿಂದೆಯೇ ಪ್ರಸ್ತಾವನೆಯನ್ನು ಸಲ್ಲಿಸಿವೆ. ಸಂಕ್ರಾOತಿ ಸಭೆಯ ನಂತರ ಶೇ 25 ಅಲ್ಲದಿದ್ದರೂ, ಅದರ ಅರ್ಧದಷ್ಟು ಏರಿಕೆಯಾಗುವ ಸಾಧ್ಯತೆಯಿದೆ ಎಂದು ಸಾರಿಗೆ ಮುಖಂಡ ಜಗದೀಶ್ ತಿಳಿಸಿದ್ದಾರೆ.

ಟಿಕೆಟ್ ದರ ಶೇ 15ರ ಹೆಚ್ಚಳ ಪಕ್ಕಾ?

ಇತ್ತೀಚೆಗೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ನೇತೃತ್ವದಲ್ಲಿ ಸಾರಿಗೆ ಇಲಾಖೆಗಳ ಸ್ಥಿತಿಗತಿ ಕುರಿತು ಸಭೆ ನಡೆದಿತ್ತು. ಈ ಸಭೆಯಲ್ಲಿ ಸಾರಿಗೆ ಇಲಾಖೆಗೆ 3650 ಕೋಟಿ ಹೊರೆಯಾಗುತ್ತಿದೆ ಎಂದು ಸಾರಿಗೆ ಅಧಿಕಾರಿಗಳು ಅಳಲು ತೋಡಿಕೊಂಡಿದ್ದರು. ನಷ್ಟ ಪರಿಹಾರಕ್ಕೆ ಶೇ 15ರಷ್ಟು ಪ್ರಯಾಣದರ ಹೆಚ್ಚಳಕ್ಕೆ ಸಭೆಯಲ್ಲಿ ಚರ್ಚೆ ಮಾಡಲಾಗಿತ್ತು ಎನ್ನಲಾಗಿದೆ.

ಆದರೆ ಶೇ 15 ರ ಪ್ರಮಾಣದಲ್ಲಿ ದರ ಪರಿಷ್ಕರಣೆಯಾದರೂ ನಿಗಮಗಳು ಇನ್ನೂ 1,8೦೦ ಕೋಟಿ ನಷ್ಟ ಅನುಭವಿಸುತ್ತವೆ ಎಂಬುದು ಅಧಿಕಾರಿಗಳ ಲೆಕ್ಕಾಚಾರ.

Leave a Reply

Your email address will not be published. Required fields are marked *