Siddaramaiah ಕೈ ಸೇರಿದ ಅಚ್ಚರಿ ನ್ಯಾ.ಡಿ.ಕುನ್ಹಾ ವರದಿ.. ವರದಿಯಲ್ಲಿ ಏನು ಇತ್ತು ಗೊತ್ತಾ..?

Siddaramaiah ಕೈ ಸೇರಿದ ಅಚ್ಚರಿ ನ್ಯಾ.ಡಿ.ಕುನ್ಹಾ ವರದಿ.. ವರದಿಯಲ್ಲಿ ಏನು ಇತ್ತು ಗೊತ್ತಾ..?

ಬೆಂಗಳೂರು : ಆರ್.ಸಿ.ಬಿ ತಂಡದ ವಿಜಯೋತ್ಸವದ ಸಂದರ್ಭದಲ್ಲಿ ಕಾಲ್ತುಳಿತಕ್ಕೆ ಸಿಲುಕಿ ಹನ್ನೊಂದು ಜನ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿ ನಿವೃತ್ತ ನ್ಯಾಯಮೂರ್ತಿ ಜಸ್ಟೀಸ್ ಕುನ್ಹಾ ಅವರ ಅಧ್ಯಕ್ಷತೆಯಲ್ಲಿ ಸರ್ಕಾರ ರಚಿಸಿದ್ದ ಏಕ ವ್ಯಕ್ತಿ ಆಯೋಗವು ಎರಡು ಸಂಪುಟಗಳಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ವರದಿ ಸಲ್ಲಿಸಿದೆ. \

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾತನಾಡಿ, ಜುಲೈ 17 ರಂದು ನಡೆಯಲಿರುವ ಸಚಿವ ಸಂಪುಟದಲ್ಲಿ ನ್ಯಾಯಮೂರ್ತಿ ಕುನ್ಹಾ ಅವರ ವರದಿಯನ್ನು ಮಂಡಿಸಿ ಚರ್ಚಿಸಿ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಆರ್.ಸಿ.ಬಿ ತಂಡದ ವಿಜಯೋತ್ಸವದ ಸಂದರ್ಭದಲ್ಲಿ ಕಾಲ್ತುಳಿತಕ್ಕೆ ಸಿಕ್ಕು ಹನ್ನೊಂದು ಜನ ಮೃತ ಪಟ್ಟಿದ್ದ ಹಿನ್ನೆಲೆಯಲ್ಲಿ ನಿವೃತ್ತ ನ್ಯಾಯಮೂರ್ತಿ ಜಸ್ಟೀಸ್ ಕುನ್ಹಾ ಅವರ ಅಧ್ಯಕ್ಷತೆಯಲ್ಲಿ ಸರ್ಕಾರ ರಚಿಸಿದ್ದ ಏಕ ವ್ಯಕ್ತಿ ಆಯೋಗವು ಎರಡು ಸಂಪುಟಗಳಲ್ಲಿ ವರದಿಯಲ್ಲಿ ಸಲ್ಲಿಸಿದೆ ಎಂದರು.

ವರದಿಯಲ್ಲಿ ಮಾಡಿರುವ ಶಿಫಾರಸುಗಳ ಬಗ್ಗೆ ಚರ್ಚಿಸಿದ ನಂತರ ಸಂಪುಟ ನಿರ್ಧಾರ ಮಾಡಲಿದೆ. ನಾನು ನ್ಯಾಯಮೂರ್ತಿ ಜಸ್ಟೀಸ್ ಕುನ್ಹಾ ಅವರ ವರದಿಯನ್ನು ಪೂರ್ಣವಾಗಿ ಓದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು. ಕಾಲ್ತುಳಿತ ಘಟನೆಗೆ ಸಂಬಂಧಪಟ್ಟಂತೆ ಪೊಲೀಸರ ಅಮಾನತ್ತನ್ನು ಸಿಎಟಿಯವರು ವಿರೋಧಿಸಿ ಆದೇಶಿಸಿರುವ ಬಗ್ಗೆ ಆಯೋಗದ ವರದಿಯಲ್ಲಿ ಪ್ರಸ್ತಾಪಿಸಲಾಗಿರುವ ಕುರಿತು ಮಾತನಾಡಿದ ಸಿದ್ದರಾಮಯ್ಯ ಅವರು, ವರದಿಯನ್ನು ಸಚಿವ ಸಂಪುಟದಲ್ಲಿ ಚರ್ಚಿಸಿ, ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದರು.

Leave a Reply

Your email address will not be published. Required fields are marked *