ಬೆಂಗಳೂರು: ಕರ್ನಾಟಕದಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಇಂದಿಗೆ ಎರಡೂವರೆ ವರ್ಷ ಯಶಸ್ವಿಯಾಗಿ ಪೂರೈಸಿದೆ. ಇದರ ಬೆನ್ನಲ್ಲೇ ಇದೀಗ ಅಧಿಕಾರ ಹಂಚಿಕೆ ಚರ್ಚೆ ಜೋರಾಗಿದೆ. ನವೆಂಬರ್ ಕ್ರಾಂತಿ ಶಾಂತಿಯಾಗುವ ಹೊತ್ತಲ್ಲೇ ಕಾಂಗ್ರೆಸ್ನಲ್ಲಿ ಮತ್ತೊಂದು ಮಹತ್ವದ ರಾಜಕೀಯ ಬೆಳಗಣಿಗೆಗಳು ಗರಿಗೆದರಿವೆ. ಹೌದು..ಸಿದ್ದರಾಮಯ್ಯ ಸರ್ಕಾರಕ್ಕೆ ಇಂದಿಗೆ ಎರಡಯವರೆ ವರ್ಷ ತುಂಬಿದ ದಿನವೇ ಕೆಲ ಶಾಸಕರು, ಸಚಿವರು ದೆಹಲಿಗೆ ಹಾರಿದ್ದಾರೆ.
ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ನಡುವೆ ಪವರ್ ಶೇರಿಂಗ್ ಮುಸುಕಿನ ಗುದ್ದಾಟ ನಡೆಯುತ್ತಿದ್ದು, ಇದರ ನಡುವೆಯೇ ಬಹುತೇಕ ಡಿಕೆ ಶಿವಕುಮಾರ್ ಬಣದ ಶಾಸಕರು, ಸಚಿವರು ಹೈಕಮಾಂಡ್ ಭೇಟಿಗೆ ದೆಹಲಿ ತೆರಳಿದ್ದು, ಭಾರೀ ಕುತೂಹಲಕ್ಕೆ ಕಾರಣವಾಗಿದೆ.
For More Updates Join our WhatsApp Group :
