ಯತೀಂದ್ರ ಹೇಳಿಕೆ ಸಂಚಲನ | ಡಿಕೆಶಿ ಸ್ಮೈಲ್ ಕೌಂಟರ್.
ಬೆಂಗಳೂರು: ಸಿದ್ದರಾಮಯ್ಯ ಪೂರ್ಣಾವಧಿ ಸಿಎಂ ಎಂದು ಅವರ ಪುತ್ರ ಯತೀಂದ್ರ ಸಿದ್ದರಾಮಯ್ಯ ಸೋಮವಾರ ಬೆಳಗಾವಿಯಲ್ಲಿ ನೀಡಿರುವ ಹೇಳಿಕೆ ರಾಜ್ಯ ರಾಜಕೀಯದಲ್ಲಿ ಸಾಕಷ್ಟು ಸಂಚಲನ ಸೃಷ್ಟಿಸಿದೆ. ಯತೀಂದ್ರ ಹೇಳಿಕೆಯ ಬೆನ್ನಲ್ಲೇ ವಿರೋಧ ಪಕ್ಷಗಳು ಕೂಡ ಈ ವಿಷಯಕ್ಕೆ ಧ್ವನಿಗೂಡಿಸಿ, ಮುಖ್ಯಮಂತ್ರಿ ಬದಲಾವಣೆ ಕುರಿತ ಚರ್ಚೆಯನ್ನು ಮತ್ತೆ ಮುನ್ನೆಲೆಗೆ ತಂದಿವೆ.
ಈ ಹೇಳಿಕೆಗಳ ಕುರಿತು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಪ್ರತಿಕ್ರಿಯೆ ನೀಡಿದ್ದಾರೆ. ಬೆಳಗಾವಿಗೆ ತೆರಳುವ ಮುನ್ನ ಬೆಂಗಳೂರಿನ ಸದಾಶಿವನಗರದ ತಮ್ಮ ನಿವಾಸದ ಬಳಿ ಮಾಧ್ಯಮಗಳೊಂದಿಗೆ ಮಾತನಾಡಿದ ಡಿಕೆ ಶಿವಕುಮಾರ್, ‘ಬಹಳ ಸಂತೋಷ, ಒಳ್ಳೆಯದಾಗಲಿ, ರಾಜ್ಯಕ್ಕೆ ಒಳ್ಳೆಯದಾಗಲಿ’ ಎಂದು ಹೇಳಿದರು.
For More Updates Join our WhatsApp Group :




