ಮೋದಿ ವಿರುದ್ಧ ಸಿದ್ದರಾಮಯ್ಯ ಪೋಸ್ಟ್: ರಾಹುಲ್ ಹೆಸರೇಳಿಸಿ BJP ತಿರುಗೇಟು.

ಮೋದಿ ವಿರುದ್ಧ ಸಿದ್ದರಾಮಯ್ಯ ಪೋಸ್ಟ್: ರಾಹುಲ್ ಹೆಸರೇಳಿಸಿ BJP ತಿರುಗೇಟು.

ಪ್ರಧಾನಿ ಉತ್ತರ ನೀಡಿಲ್ಲ ಎಂಬ ಆರೋಪ | ಬಿಜೆಪಿ ಅಧ್ಯಕ್ಷ ವಿಜಯೇಂದ್ರ ಕೌಂಟರ್.

ಬೆಂಗಳೂರು: ಪ್ರಧಾನಿ ನರೇಂದ್ರಮೋದಿ ಅವರ ವಿರುದ್ಧ ಕರ್ನಾಟಕ ಸಿಎಂ ಸಿದ್ದರಾಮಯ್ಯ ಮಾಡಿರುವ ಎಕ್ಸ್​​ ಪೋಸ್ಟ್​​ ವಿಚಾರವೀಗ ರಾಜಕೀಯ ವಾಗ್ಯುದ್ಧಕ್ಕೆ ಕಾರಣವಾಗಿದೆ. ಮುಖ್ಯಮಂತ್ರಿಗಳ ಪೋಸ್ಟ್​​ ಕಂಡು ಕೆರಳಿರುವ ರಾಜ್ಯದ ಕೆಸರಿ ಪಡೆ ರಾಹುಲ್​​ ಗಾಂಧಿ ಹೆಸರು ಉಲ್ಲೇಖಿಸಿ ಕೌಂಟರ್​​ ಕೊಟ್ಟಿದೆ. ಸಿಎಂ ಪದವಿ ವಿಚಾರವಾಗಿ ಕಿತ್ತಾಡುತ್ತಿರುವ ನೀವು ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್​​​ ಸೇರಿ ಮೊದಲು ರಾಹುಲ್‌ ಗಾಂಧಿಯವರು ಎಲ್ಲಿದ್ದಾರೋ ಹುಡುಕಿಕೊಳ್ಳಿ ಎಂದು ತಿವಿದಿದೆ.

ಲೋಕಸಭೆಯಲ್ಲಿ ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯದ ಚರ್ಚೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಉತ್ತರ ನೀಡದೆ ತಪ್ಪಿಸಿಕೊಂಡಿರುವುದು ಸಂಸತ್‌ಗೆ ತೋರಿಸಿರುವ ಅಗೌರವ ಮಾತ್ರವಲ್ಲ, ಸತ್ಯವನ್ನು ಎದುರಿಸಲಾಗದ ಹೇಡಿತನವೂ ಆಗಿದೆ‌. ಭಾರತದ ಸಂಸತ್ತಿನ ಇತಿಹಾಸದಲ್ಲಿ ಮೊದಲ ಬಾರಿಗೆ ಪ್ರಧಾನ ಮಂತ್ರಿಯವರ ಉತ್ತರ ಇಲ್ಲದೆ ವಂದನಾ ನಿರ್ಣಯವನ್ನು ಅಂಗೀಕರಿಸಲಾಗಿದೆ. ಓರ್ವ ಪ್ರಧಾನಿ ಸಂಸತ್ತನ್ನು ನಿರ್ಲಕ್ಷಿಸುವುದೆಂದರೆ ಜವಾಬ್ದಾರಿಯಿಂದ ತಪ್ಪಿಸಿಕೊಳ್ಳುವ ನಡೆ ಎಂದರ್ಥ ಎಂದು ಸಿದ್ದರಾಮಯ್ಯ ಆರೋಪಿಸಿದ್ದಾರೆ.

ಸಿಎಂಗೆ ವಿಜಯೇಂದ್ರ ಕೌಂಟರ್​​

ಪ್ರಧಾನಿ ಮೋದಿ ಕುರಿತು ಸಿಎಂ ಸಿದ್ದರಾಮಯ್ಯ ಆರೋಪಕ್ಕೆ ಬೆಂಗಳೂರಿನಲ್ಲಿ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ತಿರುಗೇಟು ನೀಡಿದ್ದಾರೆ. ಸಿದ್ದರಾಮಯ್ಯನವರೇ ಪ್ರಧಾನಿ ಎಲ್ಲೂ ತಪ್ಪಿಸಿಕೊಂಡು ಹೋಗಿರಲಿಲ್ಲ. ಪ್ರಧಾನಿ ನರೇಂದ್ರ ಮೋದಿಯವರು ಸಂಸತ್‌ ಭವನದಲ್ಲೇ ಇದ್ದರು. ರಾಜ್ಯಸಭೆಯಲ್ಲಿ ನಿಮ್ಮ ಪಕ್ಷ ಹಾಗೂ ವಿರೋಧ ಪಕ್ಷಗಳ ನಡವಳಿಕೆ, ಧೋರಣೆಗಳನ್ನು ಬಯಲಿಗೆಳೆದು ದಿಟ್ಟತನದಿಂದ ಮಾತನಾಡಿದರು. ವಾಸ್ತವವಾಗಿ ತಪ್ಪಿಸಿಕೊಳ್ಳುವ ಸಂಸ್ಕೃತಿ ಇದ್ದರೆ ಅದು ನಿಮ್ಮ ಕಾಂಗ್ರೆಸ್‌ನ ನೆಲೆಯಿಂದ ಉದ್ಭವಿಸಿದ್ದು.ಇದಕ್ಕೆ ಸಾಕ್ಷಿಯಾಗಿ ರಾಹುಲ್ ಗಾಂಧಿಯೇ ನಮ್ಮ ಕಣ್ಣಮುಂದೆ ಇದ್ದಾರೆ ಎಂದು ಕೌಂಟರ್​​ ಕೊಟ್ಟಿದ್ದಾರೆ.

For More Updates Join our WhatsApp Group :

https://chat.whatsapp.com/JVoHqE476Wn3pVh1gWNAcH

Leave a Reply

Your email address will not be published. Required fields are marked *