ಸಿಗಂಧೂರು ಕೇಬಲ್ ಸೇತುವೆ ಕಾಮಗಾರಿ ಬಹುತೇಕ ಪೂರ್ಣ: ಮುಂದಿನ 4 ತಿಂಗಳಲ್ಲಿ ಲೋಕಾರ್ಪಣೆ

ಸಿಗಂಧೂರು ಕೇಬಲ್ ಸೇತುವೆ ಕಾಮಗಾರಿ ಬಹುತೇಕ ಪೂರ್ಣ: ಮುಂದಿನ 4 ತಿಂಗಳಲ್ಲಿ ಲೋಕಾರ್ಪಣೆ

ಶಿವಮೊಗ್ಗ : ರಾಜ್ಯದಲ್ಲಿ ಮಲೆನಾಡಿನ ಎರಡು ಪ್ರಮುಖ ದೇವಾಲಯ ಪಟ್ಟಣಗಳಾದ ಕೊಲ್ಲೂರು ಹಾಗೂ ಸಿಗಂಧೂರು ಪಟ್ಟಣಗಳಿಗೆ ಸಂಪರ್ಕ ಕಲ್ಪಿಸಲು ನಿರ್ಮಾಣ ಮಾಡಲಾಗುತ್ತಿರುವ 2.13 ಕಿ.ಮೀ. ಉದ್ದದ ಸಿಗಂಧೂರು ಕೇಬಕ್ ಬ್ರಿಡ್ಸ್ (ತುಮರಿ ಸೇತುವೆ) ಮುಕ್ತಾಯಗೊಳ್ಳುವ ಹಂತಕ್ಕೆ ಬಂದಿದ್ದು, ಮುಂದಿನ ನಾಲ್ಕು ತಿಂಗಳಲ್ಲಿ ಸಾರ್ವಜನಿಕ ಬಳಕೆಗೆ ಮುಕ್ತಗೊಳ್ಳಲಿದೆ.

ಈ ಸಿಗಂಧೂರು ಸೇತುವೆಯು ಭಾರತದ ಕೇಬಲ್ ಆಧಾರಿತ ಸೇತುವೆಗಳಲ್ಲಿ 7ನೇ ಅತೊದೊಡ್ಡ ಸೇತುವೆ ಎಂಬ ಖ್ಯಾತಿ ಪಡೆಯಲಿದೆ. ಹಲವು ವರ್ಚಗಳಿಂದ ಈ ಸೇತುವೆ ಕಾಮಗಾರಿ ನಡೆಯುತ್ತಿದ್ದು, ಇದೀಗ ಪೂರ್ಣಗೊಳ್ಳುವ ಹಂತಕ್ಕೆ ತಲುಪಿದೆ. ಇನ್ನು ಕೆಲವೇ ಗರ್ಡರ್ ಬಾಕ್ಸ್‌ಗಳನ್ನು ಅಳವಡಿಕೆ ಮಾಡುವುದು ಮಾತ್ರ ಬಾಕಿಯಿದ್ದು, ಕೆಲವೇ ಒಂದೆರಡು ತಿಂಗಳಲ್ಲಿ ಈ ಕಾಮಗಾರಿ ಮುಕ್ತಾಯಗೊಳ್ಳಲಿದೆ. ಇದಾದ ನಂತರ ಉಳಿಕೆ ಕೆಲಸಗಳನ್ನು ಮಗಿಸಿಕೊಂಡು, ಸುರಕ್ಷತಾ ತಪಾಸಣೆ ಮಾಡಿದ ನಂತರ ಈ ಸೇತುವೆಯನ್ನು ಸಾರ್ವಜನಿಕ ಸಂಚಾರಕ್ಕೆ ಮುಕ್ತಗೊಳಿಸಲಾಗುತ್ತದೆ. ಇದರಿಂದ ಮಲೆನಾಡಿನ ಜನರ ಬಹುಬೇಡಿಕೆಯ ಸಿಗಂಧೂರು ಸೇತುವೆ ಸಂಚಾರಕ್ಕೆ ಮುಕ್ತಗೊಳ್ಳಲಿದೆ

Leave a Reply

Your email address will not be published. Required fields are marked *