SSLC ಒಟ್ಟು ಮಾರ್ಕ್ಸ್ 625ದಿಂದ 525ಕ್ಕೆ ಇಳಿಕೆ: ಹಿಂದಿ ಅಂಕಕ್ಕೆ ಕೋಕ್.
ಬೆಂಗಳೂರು: ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಹಿಂದಿ ಭಾಷೆಯನ್ನು ಕಡ್ಡಾಯಗೊಳಿಸಬಾರದು ಮತ್ತು ಅಂಕ ಪಟ್ಟಿಯಿಂದ ಹೊರಗಿಡುವಂತೆ ಇತ್ತೀಚೆಗೆ ವಿವಿಧ ಕನ್ನಡ ಪರ ಸಂಘಟನೆಗಳು ಸರ್ಕಾರಕ್ಕೆ ಒತ್ತಾಯಿಸಿದ್ದವು. ಇದರ ಬೆನ್ನಲ್ಲೇ ಎಸ್ಎಸ್ಎಲ್ಸಿ ಪರೀಕ್ಷೆಗೆ 525 ಅಂಕಗಳು ನಿಗದಿ ಮಾಡಲಾಗಿದೆ. ತೃತೀಯ ಭಾಷೆಯ ಅಂಕಕ್ಕೆ ಕೊಕ್ ನೀಡಲಾಗಿದೆ. ಆ ಮೂಲಕ ಕರ್ನಾಟಕದ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗೆ ಶಿಕ್ಷಣ ಇಲಾಖೆ ಮಹತ್ವದ ಸುದ್ದಿ ನೀಡಿದೆ.
625ರಿಂದ 525 ಅಂಕಕ್ಕೆ ಇಳಿಕೆ
ರಾಜ್ಯದಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆಗಳು ನಡೆಯುತ್ತಿರುವ ಸಂದರ್ಭದಲ್ಲೇ ಶಿಕ್ಷಣ ಇಲಾಖೆ ಎಸ್ಎಸ್ಎಲ್ಸಿ ಪರೀಕ್ಷಾ ವ್ಯವಸ್ಥೆಯಲ್ಲಿ ಬದಲಾವಣೆಗೆ ಮುಂದಾಗಿದೆ. ಇನ್ನು ಮುಂದೆ ತೃತೀಯ ಭಾಷೆಯ (ಹಿಂದಿ, ಅರೇಬಿಕ್, ಉರ್ದು, ಸಂಸ್ಕೃತ, ಕೊಂಕಣಿ, ತುಳು ಮತ್ತು ಮರಾಠಿ) ಅಂಕಗಳನ್ನು ಒಟ್ಟು ಅಂಕಗಳಿಗೆ ಪರಿಗಣಿಸಲಾಗುವುದಿಲ್ಲ. ಬದಲಿಗೆ ತೃತೀಯ ಭಾಷೆ ಪರೀಕ್ಷೆಯ ಅಂಕವನ್ನು ಗ್ರೇಡ್ ಮೂಲಕ ನೀಡಲಾಗುತ್ತದೆ. ಇದರಿಂದ ಒಟ್ಟು ಅಂಕಗಳು 625ರಿಂದ 525 ಇಳಿಕೆ ಮಾಡಲಾಗಿದೆ. ಆದರೆ ವಿದ್ಯಾರ್ಥಿಗಳು ತೃತೀಯ ಭಾಷೆಯ ಪರೀಕ್ಷೆಯನ್ನು ಬರೆಯುವುದು ಕಡ್ಡಾಯ.
ಹಿಂದಿ ಪರೀಕ್ಷೆ ಮುಂದೂಡಿಕೆ
2025-26ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ ಮಾರ್ಚ್ 18ರಿಂದ ಆರಂಭವಾಗಿವೆ. ಮಾ.30ರಂದು ನಡೆಯಬೇಕಿದ್ದ ಹಿಂದಿ ಪರೀಕ್ಷೆಯನ್ನು ಮಹಾವೀರ ಜಯಂತಿ ಹಿನ್ನೆಲೆ ಮಾ. 31ಕ್ಕೆ ಪರೀಕ್ಷೆ ಮುಂದೂಡಲಾಗಿದೆ. ಇನ್ನು ಇದೆಲ್ಲದರ ಮಧ್ಯೆ ಇದೀಗ ಶಿಕ್ಷಣ ಇಲಾಖೆ ಎಸ್ಎಸ್ಎಲ್ಸಿ ಪರೀಕ್ಷೆಗೆ 525 ಅಂಕಗಳನ್ನು ನಿಗದಿ ಮಾಡಿದೆ. ಆ ಮೂಲಕ ತೃತೀಯ ಭಾಷೆಯ ಅಂಕವನ್ನು ಕೈಬಿಡಲಾಗಿದೆ.
For More Updates Join our WhatsApp Group :




