ಸಾಮಾಜಿಕ ಶೈಕ್ಷಣಿಕ ಸಮೀಕ್ಷೆ : ಜಾತಿ ವಿವರ ಸೇರಿಸಲು ಸೆಪ್ಟೆಂಬರ್ 1 ಕೊನೆಯ ದಿನ || Socio-Educational Survey 2025

Socio-Educational Survey 2025

ಬೆಂಗಳೂರುಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗ ಕರ್ನಾಟಕ ರಾಜ್ಯದಲ್ಲಿರುವ ಹಿಂದುಳಿದ ವರ್ಗಗಳು, ಇತರೆ ಜಾತಿಗಳು ಅನುಸೂಚಿತ ಜಾತಿ ಮತ್ತು ಪಂಗಡಗಳು ಸೇರಿದಂತೆ ಎಲ್ಲ ಜಾತಿಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕೈಗೊಂಡಿದ್ದು, ಯಾವುದೇ ಜಾತಿಗಳು ಬಿಟ್ಟು ಹೋಗಿದ್ದರೆ ಮಾಹಿತಿ ನೀಡಲು ಸೆಪ್ಟೆಂಬರ್ 1ರ ವರೆಗೆ ಅವಧಿಯನ್ನು ವಿಸ್ತರಣೆ ಮಾಡಲಾಗಿದೆ.

ಸೆಪ್ಟೆಂಬರ್ 1 ವರೆಗೆ ಅವಕಾಶಆಗಸ್ಟ್​​ 22, 2025ರಂದು ಯಾವುದೇ ಜಾತಿ, ಉಪ ಜಾತಿಗಳು ಬಿಟ್ಟು ಹೋಗಿದ್ದರೆ, ಅಂತಹ ಅಂಶಗಳ ಬಗ್ಗೆ ಸಲಹೆ, ಸೂಚನೆಗಳು ಇದ್ದಲ್ಲಿ, 7 ದಿನಗಳ ಒಳಗೆ ನೀಡಲು ಕೋರಲಾಗಿತ್ತು. ಆದರೆ, ಸಾರ್ವಜನಿಕರು ಹಾಗೂ ವಿವಿಧ ಸಂಘ ಸಂಸ್ಥೆಗಳು ಈ ಅವಧಿಯನ್ನು ವಿಸ್ತರಿಸಲು ಕೋರಿರುವ ಕಾರಣ, ಈ ಬಗ್ಗೆ ಸಲಹೆ/ಸೂಚನೆ, ಮನವಿಗಳನ್ನು ನೀಡುವ ಅವಧಿಯನ್ನು 1.09.2025ರ ಸಂಜೆ 5 ಗಂಟೆಯ ವರೆಗೆ ವಿಸ್ತರಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಸಂಗ್ರಹಿಸಲಾದ ಜಾತಿ/ಉಪಜಾತಿಗಳ ಪಟ್ಟಿಯನ್ನು ಸೆಪ್ಟೆಂಬ‌ರ್​ ತಿಂಗಳಲ್ಲಿ ಪ್ರಾರಂಭವಾಗಲಿರುವ ಸಮೀಕ್ಷೆಗಾಗಿ ಮಾತ್ರ ಉಪಯೋಗಿಸಲಾಗುವುದು.

ಸಂಪರ್ಕ ಸಂಖ್ಯೆಸಾರ್ವಜನಿಕರು ತಮ್ಮ ಸಲಹೆ, ಸೂಚನೆ, ಮನವಿಗಳನ್ನು ಸದಸ್ಯ ಕಾರ್ಯದರ್ಶಿಗಳು, ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗ, ನಂಬರ್ 16, ಡಿ. ದೇವರಾಜ ಅರಸು ಭವನ, ಮಿಲ್ಲರ್ಸ್ ಟ್ಯಾಂಕ್ ಬಂಡ್ ಪ್ರದೇಶ, ವಸಂತ ನಗರ, ಬೆಂಗಳೂರು ಅಥವಾ kscbcb@gmail.com ಇ-ಮೇಲ್ ವಿಳಾಸಕ್ಕೆ ಕಳುಹಿಸಬಹುದಾಗಿದೆ. ಹೆಚ್ಚಿನ‌ ವಿವರಗಳಿಗೆ ದೂರವಾಣಿ ಸಂಖ್ಯೆ 080-29506668 ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Leave a Reply

Your email address will not be published. Required fields are marked *