ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆಯಾಗಿ ಸೌಮ್ಯ ರೆಡ್ಡಿ ನೇಮಕ || Congress state women president

Soumya Reddy appointed as State Mahila Congress President

Soumya Reddy appointed as State Mahila Congress President

ಬೆಂಗಳೂರು : ಕರ್ನಾಟಕ ಮಹಿಳಾ ಕಾಂಗ್ರೆಸ್(Congress) ಅಧ್ಯಕ್ಷೆಯಾಗಿ ಸಚಿವ ರಾಮಲಿಂಗಾರೆಡ್ಡಿ ಪುತ್ರಿ ಮಾಜಿ ಶಾಸಕಿ ಸೌಮ್ಯ ರೆಡ್ಡಿ (Sowmya Reddy) ಅವರು ನೇಮಕಗೊಂಡಿದ್ದಾರೆ. ಕರ್ನಾಟಕ(Karnataka) ಸೇರಿ ಮೂರು ರಾಜ್ಯಗಳ ಮಹಿಳಾ ಕಾಂಗ್ರೆಸ್ ಘಟಕಗಳಿಗೆ ನೂತನ ಅಧ್ಯಕ್ಷರನ್ನು ನೇಮಕ ಮಾಡಿ ಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅವರು ಆದೇಶ ಹೊರಡಿಸಿದ್ದಾರೆ.

ಎರಡು ವಾರಗಳ ಹಿಂದೆ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸ್ಥಾನಕ್ಕೆ ಸಂದರ್ಶನ ನಡೆಸಿದ್ದ ಕಾಂಗ್ರೆಸ್ ಹೈಕಮಾಂಡ್, ಅಂತಿಮವಾಗಿ ಸೌಮ್ಯರೆಡ್ಡಿಗೆ ಕೆಪಿಸಿಸಿ ಮಹಿಳಾ ಅಧ್ಯಕ್ಷೆಯಾಗಿ ಅವಕಾಶ ಕೊಟ್ಟಿದ್ದಾರೆ. ಸೌಮ್ಯ ರೆಡ್ಡಿ ಒಂದು ಬಾರಿ ಜಯನಗರ ವಿಧಾನಸಭಾ ಕ್ಷೇತ್ರದ ಶಾಸಕರಾಗಿದ್ದರು

ಜೊತೆಗೆ ತಾವು ಪರಿಸರವಾದಿ ಹಾಗೂ ಸಾಮಾಜಿಕ ಕಾರ್ಯಕರ್ತೆ, ಮಾಜಿ ಶಾಸಕಿ ಹೊಂದಿದ್ದು, ಇದೇ ತಮ್ಮ ಉದ್ಯೋಗ ಎಂದು ಈ ಹಿಂದೆ ಲೋಕಸಭಾ ಚುನಾವಣಾ ನಾಮಪತ್ರ ಅಫಿಡವಿಟ್‌ನಲ್ಲಿ ಕಾಣಿಸಿಕೊಂಡಿದ್ದಾರೆ. ಸದ್ಯ ಸೋಷಿಯಲ್ ಮೀಡಿಯಾದಲ್ಲಿ ಸದಾ ಆಕ್ಟೀವ್ ಆಗಿರುತ್ತಾರೆ.

ಸೌಮ್ಯ ರೆಡ್ಡಿ ರಾಜಕೀಯ ಹಾದಿ :
2013- ಅನಿಮಲ್ಸ್ ವೆಲ್ ಫೇರ್ ಬೋರ್ಡ್ ಆಫ್ ಇಂಡಿಯಾ ನಿರ್ದೇಶಕಿ ಆಯ್ಕೆಯಾಗಿದ್ದಾರೆ
2016-ರಾಜಕೀಯ ಪ್ರವೇಶ
ಕೆಪಿಸಿಸಿ ಮಹಿಳಾ ಘಟಕದ ಕಾರ್ಯದರ್ಶಿ,
2017-ಯುವ ಕಾಂಗ್ರೆಸ್ ಬೆಂಗಳೂರು ನಗರ ಉಪಾಧ್ಯಕ್ಷರಾಗಿ ಆಯ್ಕೆ
2018-ಜಯನಗರ ವಿಧಾನಸಭಾ ಕ್ಷೇತ್ರದಿಂದ ಶಾಸಕಿಯಾಗಿ ಆಯ್ಕೆ
2019- ಅಖಿಲ ಭಾರತ ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆ,
2024- ಸಾರ್ವತ್ರಿಕ ಲೋಕಸಭಾ ಚುನಾವಣೆಯಲ್ಲಿ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧೆ
2024-ಕೆಪಿಸಿಸಿ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆ

Leave a Reply

Your email address will not be published. Required fields are marked *