ರಾಜ್ಯದಲ್ಲಿ ನೈರುತ್ಯ ಮುಂಗಾರು ಚುರುಕು: ಈ ಜಿಲ್ಲೆಗಳಿಗೆ ಅಲರ್ಟ್ ಘೋಷಣೆ..!!

ಬೆಂಗಳೂರು: ರಾಜ್ಯದಲ್ಲಿ ನೈರುತ್ಯ ಮುಂಗಾರು ಚುರುಕುಗೊಂಡಿದ್ದು, ಸೆಪ್ಟಂಬರ್ 7 ಮತ್ತು 8 ರಂದು ಭಾರಿ ಮಳೆಯಾಗುವ ಮುನ್ಸೂಚನೆ ಹಿನ್ನೆಲೆಯಲ್ಲಿ ಕೆಲ ಜಿಲ್ಲೆಗಳಲ್ಲಿ ಅಲರ್ಟ್ ಘೋಷಿಸಲಾಗಿದೆ. ರಾಜ್ಯದ ಉತ್ತರ ಒಳನಾಡು, ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಸೆಪ್ಟೆಂಬರ್ 8ರಂದು ಭಾರಿ ಮಳೆಯಾಗುವ ಸಾಧ್ಯತೆಯಿದೆ.

ರಾಜ್ಯ

ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಹಲವು ಜಿಲ್ಲೆಗಳಿಗೆ ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ಮುಖ್ಯವಾಗಿ ಉತ್ತರ ಒಳನಾಡಿನ 6 ಜಿಲ್ಲೆಗಳಿಗೆ ಮುಂದಿನ 24 ಗಂಟೆಗಳಿಗೆ ಯೆಲ್ಲೋ ಅಲರ್ಟ್ ಮುಂದುವರಿಸಲಾಗಿದೆ.

ಉತ್ತರ ಒಳನಾಡಿನ ಜಿಲ್ಲೆಗಳಾದ ಬಾಗಲಕೋಟೆ, ಬೀದರ್ ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಜಿಲ್ಲೆಗಳಲ್ಲಿ ಮುಂದಿನ 24 ಗಂಟೆಗಳ ಕಾಲ ಯೆಲ್ಲೋ ಅಲರ್ಟ್ ನೀಡಲಾಗಿದೆ. ಇನ್ನು ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡದಲ್ಲಿ ಸೆಪ್ಟೆಂಬರ್ 7 ರಿಂದ 9ರ ವರೆಗೆ ಭಾರಿ ಮಳೆ ಆಗುವ ಹಿನ್ನೆಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಸೆ.7 ಮತ್ತು 8 ರಂದು ಕಲಬುರಗಿ, ವಿಜಯಪುರ, ಕೊಡಗು ಮತ್ತು ಕೇವಲ ಸೆ.7 ರಂದು ಯಾದಗಿರಿ ಮತ್ತು ಅದರ ಮುಂದಿನ ದಿನ ರಾಯಚೂರು, ಚಾಮರಾಜನಗರ ಮೈಸೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಸೋಮವಾರ ರಾಜ್ಯಾದ್ಯಂತ ಹಲವೆಡೆ ಮಳೆಯಾಗಿದೆ. ನಿನ್ನೆ ರಾಜ್ಯದಲ್ಲಿ ಬೀದರ್ ಮತ್ತು ಕಲಬುರಗಿ ಜಿಲ್ಲೆಯಲ್ಲಿ ಅತಿ ಹೆಚ್ಚು ಮಳೆಯಾಗಿದ್ದು, ಕ್ರಮವಾಗಿ ತಲಾ 8 ಮತ್ತು 7 ಸೆಂ.ಮೀ ಮಳೆ ದಾಖಲಾಗಿದೆ.

ಸಿಲಿಕಾನ್ ಸಿಟಿ ಬೆಂಗಳೂರಲ್ಲಿ ಬೆಳಗಿನಿಂದ ಮೋಡ ಕವಿದ ವಾತಾವರಣ ಇತ್ತು, ರಾತ್ರಿ ವೇಳೆ ಅಲ್ಲಲ್ಲಿ ಜಿಟಿಜಿಟಿ ಮಳೆ ಸುರಿದಿದೆ. ಮುಂದಿನ 24 ಗಂಟೆಗಳು ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರಲಿದ್ದು, ಸಂಜೆ/ರಾತ್ರಿಯ ವೇಳೆಗೆ ಒಂದೆರಡು ಬಾರಿ ಗುಡುಗು ಸಹಿತ ಮಳೆಯಾಗುವ ಬಹಳಷ್ಟು ಸಾಧ್ಯತೆಯಿದೆ.

Facebook: https://www.facebook.com/PragathiTV/

Pragati TV Social Connect for more latest u

Leave a Reply

Your email address will not be published. Required fields are marked *