ಓಣಂ ಹಬ್ಬದ ಪ್ರಯುಕ್ತ ಹುಬ್ಬಳ್ಳಿ-ಕೊಚುವೇಲಿ ನಡುವೆ ವಿಶೇಷ

ಬೆಂಗಳೂರು: ಓಣಂ ಹಬ್ಬದ ಪ್ರಯುಕ್ತ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ಸರಿದೂಗಿಸಲು ಹುಬ್ಬಳ್ಳಿ ಮತ್ತು ಕೇರಳದ ಕೊಚುವೇಲಿ ನಿಲ್ದಾಣಗಳ ನಡುವೆ ಒಂದು ಟ್ರಿಪ್ ಓಣಂ ವಿಶೇಷ ರೈಲು ಸೇವೆಯನ್ನು ಓಡಿಸಲು ನೈಋತ್ಯ ರೈಲ್ವೆ ನಿರ್ಧರಿಸಿದೆ. ಅವುಗಳ ವಿವರ ಈ ಕೆಳಗಿನಂತಿವೆ:

ರೈಲುಗಳ ಸಂಖ್ಯೆ 07333/07334 ಎಸ್ಎಸ್ಎಸ್ ಹುಬ್ಬಳ್ಳಿ-ಕೊಚುವೇಲಿ-ಎಸ್ಎಸ್ಎಸ್ ಹುಬ್ಬಳ್ಳಿ ವಿಶೇಷ ಎಕ್ಸ್ ಪ್ರೆಸ್ (1 ಟ್ರಿಪ್)

ರೈಲು ಸಂಖ್ಯೆ 07333 ಸೆಪ್ಟೆಂಬರ್ 13, 2024 ರಂದು ಬೆಳಿಗ್ಗೆ 06:55 ಗಂಟೆಗೆ ಎಸ್ಎಸ್ಎಸ್ ಹುಬ್ಬಳ್ಳಿಯಿಂದ ಹೊರಟು, ಮರುದಿನ ಬೆಳಿಗ್ಗೆ 06:45 ಕ್ಕೆ ಕೊಚುವೇಲಿ ತಲುಪಲಿದೆ.

ಹಿಂದಿರುಗುವ ದಿಕ್ಕಿನಲ್ಲಿ, ರೈಲು ಸಂಖ್ಯೆ 07334 ಸೆಪ್ಟೆಂಬರ್ 14, 2024 ರಂದು ಮಧ್ಯಾಹ್ನ 12:50 ಗಂಟೆಗೆ ಕೊಚುವೇಲಿಯಿಂದ ಹೊರಟು, ಮರುದಿನ ಮಧ್ಯಾಹ್ನ 12:50 ಗಂಟೆಗೆ ಎಸ್ಎಸ್ಎಸ್ ಹುಬ್ಬಳ್ಳಿ ನಿಲ್ದಾಣಕ್ಕೆ ಆಗಮಿಸಲಿದೆ.

ಈ ರೈಲು ಎರಡೂ ದಿಕ್ಕುಗಳಲ್ಲಿ ಎಸ್ಎಂಎಂ ಹಾವೇರಿ, ರಾಣಿಬೆನ್ನೂರು, ಹರಿಹರ, ದಾವಣಗೆರೆ, ಬೀರೂರು, ಅರಸೀಕೆರೆ, ತುಮಕೂರು, ಚಿಕ್ಕಬಾಣಾವರ, ಎಸ್ಎಂವಿಟಿ ಬೆಂಗಳೂರು, ಕೃಷ್ಣರಾಜಪುರಂ, ಬಂಗಾರಪೇಟೆ, ಸೇಲಂ, ಈರೋಡ್, ತಿರುಪ್ಪೂರು, ಕೊಯಮತ್ತೂರು, ಪಾಲಕ್ಕಾಡ್, ತ್ರಿಶೂರ್, ಅಲುವಾ, ಎರ್ನಾಕುಲಂ ಟೌನ್, ಕೊಟ್ಟಾಯಂ, ತಿರುವಲ್ಲಾ, ಚೆಂಗಣ್ಣೂರ್, ಕಾಯಂಕುಲಂ ಮತ್ತು ಕೊಲ್ಲಂ ನಿಲ್ದಾಣಗಳಲ್ಲಿ ನಿಲುಗಡೆಗೊಳ್ಳಲಿದೆ. ಈ ವಿಶೇಷ ರೈಲಿನಲ್ಲಿ ಎರಡು ಎಸಿ-2 ಟೈಯರ್, ನಾಲ್ಕು ಎಸಿ -3 ಟೈಯರ್, ಹತ್ತು ಸ್ಲೀಪರ್ ಕ್ಲಾಸ್, ಎರಡು ಸಾಮಾನ್ಯ ದ್ವಿತೀಯ ದರ್ಜೆ ಮತ್ತು ಎರಡು ಎಸ್ಎಲ್ಆರ್ / ಡಿ ಬೋಗಿಗಳು ಸೇರಿದಂತೆ ಒಟ್ಟು 20 ಬೋಗಿಗಳು ಒಳಗೊಂಡಿರುತ್ತದೆ.

Leave a Reply

Your email address will not be published. Required fields are marked *