ತಮಿಳು ಚಿತ್ರರಂಗದಲ್ಲಿ ಮತ್ತೊಂದು ದೊಡ್ಡ ಹಿಟ್ ಸಿನಿಮಾ ಪ್ರಾರಂಭ.
ಶ್ರೀಲೀಲಾ ಕನ್ನಡದ ನಟಿ ಆದರೆ ಈಗ ಪರ ಭಾಷೆಗಳಲ್ಲಿ ಹೆಚ್ಚು ಮಿಂಚುತ್ತಿದ್ದಾರೆ. ಕನ್ನಡದ ‘ಕಿಸ್’ ಸಿನಿಮಾ ಮೂಲಕ ನಾಯಕಿಯಾಗಿ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟ ಶ್ರೀಲೀಲಾ, 2022 ರ ಸಿನಿಮಾ ‘ಧಮಾಕ’ ಮೂಲಕ ತೆಲುಗು ಚಿತ್ರರಂಗದಲ್ಲಿ ನೆಲೆ ಕಂಡುಕೊಂಡರು. ‘ಧಮಾಕ’ ಸಿನಿಮಾದ ಬಳಿಕ ಬಲು ಬೇಗನೇ ತೆಲುಗು ಚಿತ್ರರಂಗದ ಟಾಪ್ ನಟಿಯಾದ ಶ್ರೀಲೀಲಾ, ಇದೀಗ ಬಾಲಿವುಡ್ ಹಾಗೂ ತಮಿಳು ಚಿತ್ರರಂಗಕ್ಕೂ ಕಾಲಿಟ್ಟಿದ್ದೂ ಎರಡೂ ಕಡೆ ಒಂದರ ಹಿಂದೊಂದು ದೊಡ್ಡ ಸಿನಿಮಾ ಅವಕಾಶಗಳನ್ನು ಪಡೆದುಕೊಳ್ಳುತ್ತಿದ್ದಾರೆ. ಈಗಂತೂ ಅವರು ‘ಹ್ಯಾಟ್ರಿಕ್ ಹೀರೋ’ ಜೊತೆಗೆ ಹೊಸ ಸಿನಿಮಾನಲ್ಲಿ ನಟಿಸುತ್ತಿದ್ದಾರೆ!
‘ಹ್ಯಾಟ್ರಿಕ್ ಹೀರೋ’ ಎಂದೊಡೆ ಶಿವರಾಜ್ ಕುಮಾರ್ ಜೊತೆಗೆ ನಟಿಸುತ್ತಿದ್ದಾರೆ ಎಂದಲ್ಲ. ಬದಲಿಗೆ ಶ್ರೀಲೀಲಾ ನಟಿಸುತ್ತಿರುವುದು ತಮಿಳಿನ ಹ್ಯಾಟ್ರಿಕ್ ಹೀರೋ ಜೊತೆಗೆ. ಅದುವೇ ಪ್ರದೀಪ್ ರಂಗನಾಥನ್. ಸ್ವಂತ ಬಲದ ಮೇಲೆ ತಮಿಳು ಚಿತ್ರರಂಗಕ್ಕೆ ಎಂಟ್ರಿ ಕೊಟ್ಟ ಪ್ರದೀಪ್ ರಂಗನಾಥ್, ಹಲವು ಅಡೆ-ತಡೆ, ಕುಹುಕ, ವ್ಯಂಗ್ಯ, ಅನುಮಾನ, ಅವಮಾನಗಳನ್ನು ದಾಟಿ ಇದೀಗ ಯಶಸ್ವಿ ನಟ ಎನಿಸಿಕೊಂಡಿದ್ದಾರೆ. ಪ್ರದೀಪ್ ರಂಗನಾಥನ್ ನಾಯಕನಾಗಿ ನಟಿಸಿರುವ ಸತತ ಮೂರು ಸಿನಿಮಾಗಳು 100 ಕೋಟಿಗೂ ಹೆಚ್ಚು ಹಣ ಗಳಿಸಿದ್ದು, ಇದೀಗ ಪ್ರದೀಪ್ ಅವರ ನಾಲ್ಕನೇ ಸಿನಿಮಾಕ್ಕೆ ಕನ್ನಡತಿ ಶ್ರೀಲೀಲಾ ನಾಯಕಿ.
ಶ್ರೀಲೀಲಾ ನಟಿಸಿರುವ ಮೊದಲ ತಮಿಳು ಸಿನಿಮಾ ‘ಪರಾಶಕ್ತಿ’ ಇತ್ತೀಚೆಗಷ್ಟೆ ಬಿಡುಗಡೆ ಆಗಿ ಯಶಸ್ಸು ಗಳಿಸಿದೆ. ಅದರ ಬೆನ್ನಲ್ಲೆ ಇದೀಗ ಶ್ರೀಲೀಲಾಗೆ ಎರಡನೇ ತಮಿಳು ಸಿನಿಮಾ ಆಫರ್ ಬಂದಿದ್ದು, ಸಿನಿಮಾದ ನಾಯಕ ಪ್ರದೀಪ್ ರಂಗನಾಥನ್. ವಿಶೇಷವೆಂದರೆ ಈ ಸಿನಿಮಾ ಸಾಮಾನ್ಯಾ ರಾಮ್-ಕಾಮ್ ಸಿನಿಮಾ ಅಲ್ಲ ಬದಲಿಗೆ ಇದೊಂದು ಸೈ-ಫೈ ಸಿನಿಮಾ ಆಗಿದೆ. ಭವಿಷ್ಯದ ಕತೆಯನ್ನು ಸಿನಿಮಾ ಒಳಗೊಂಡಿದೆ.
For More Updates Join our WhatsApp Group :




