ಶ್ರೀನಗರ || Pulwamaದಲ್ಲಿ ಭದ್ರತಾಪಡೆಗಳೊಂದಿಗೆ ಗುಂಡಿನ ಚಕಮಕಿ – ಮೂವರು ಜೈಶ್ terrorists ಮಟಾಶ್

ಶ್ರೀನಗರ || Pulwamaದಲ್ಲಿ ಭದ್ರತಾಪಡೆಗಳೊಂದಿಗೆ ಗುಂಡಿನ ಚಕಮಕಿ – ಮೂವರು ಜೈಶ್ terrorists ಮಟಾಶ್

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪುಲ್ಪಾಮಾದಲ್ಲಿ ನಡೆದ ಭಾರೀ ಗುಂಡಿನ ಚಕಮಕಿಯಲ್ಲಿ ಭದ್ರತಾ ಪಡೆಗಳು ಮೂವರು ಜೈಶ್‌ ಉಗ್ರರನ್ನು ಹತ್ಯೆ ಮಾಡಿರುವುದಾಗಿ ಹಿರಿಯ ಸೇನಾಧಿಕಾರಿಗಳು ತಿಳಿಸಿದ್ದಾರೆ.

ಪುಲ್ವಾಮಾ ಜಿಲ್ಲೆಯ ಉಪನಗರವಾದ ಅವಂತಿಪೋರಾದ ನಾಡರ್‌ ಮತ್ತು ಟ್ರಾಲ್‌ ಪ್ರದೇಶಗಳಲ್ಲಿ ಇಂದು ಬೆಳಗ್ಗೆ ನಡೆದ ಗುಂಡಿನ ಚಕಮಕಿಯಲ್ಲಿ ಭಾರತೀಯ ಸೇನೆ ಉಗ್ರರನ್ನು ಹೊಡೆದುರುಳಿಸಿದೆ. ಕಳೆದ ಮೂರು ದಿನಗಳಲ್ಲಿ ನಡೆದ 2ನೇ ಎನ್‌ಕೌಂಟರ್‌ ಇದಾಗಿದೆ. ಹತ್ಯೆಗೀಡಾದ ಮೂವರು ಜೈಶ್‌ ಎ ಮೊಹಮ್ಮದ್‌ ಸಂಘಟನೆಗೆ ಸೇರಿದವರು ಎಂದು ಉನ್ನತ ಮೂಲಗಳು ತಿಳಿಸಿರುವುದಾಗಿ ವರದಿಯಾಗಿದೆ.

ಇದಕ್ಕೂ ಮುನ್ನ ಮಂಗಳವಾರ (ಮೇ 13) ಶೋಪಿಯಾನ್ (Shopian) ಜಿಲ್ಲೆಯ ಶುಕ್ರೂ ಕೆಲ್ಲರ್ ಅರಣ್ಯ ಪ್ರದೇಶದಲ್ಲಿ ಭದ್ರತಾ ಪಡೆಗಳೊಂದಿಗೆ ಗುಂಡಿನ ಚಕಮಕಿ ನಡೆದಿತ್ತು. ಈ ವೇಳೆ ಉನ್ನತ ಭಯೋತ್ಪಾದಕ ಕಮಾಂಡರ್ ಶಾಹಿದ್ ಕುಟ್ಟಯ್, ಹರಿಸ್ ನಜೀರ್, ಅದ್ನಾನ್ ಶಫಿ ಎಂಬ ಮೂವರು ಉಗ್ರರನ್ನ ಹತ್ಯೆಗೈಯಲಾಗಿತ್ತು.

ದಕ್ಷಿಣ ಕಾಶ್ಮೀರ ಜಿಲ್ಲೆಯ ಶುಕ್ರೂ ಕೆಲ್ಲರ್ ಪ್ರದೇಶದಲ್ಲಿ ಭಯೋತ್ಪಾದಕರು ಇರುವ ಬಗ್ಗೆ ನಿರ್ದಿಷ್ಟ ಮಾಹಿತಿಯ ಆಧಾರದ ಮೇಲೆ ಭದ್ರತಾ ಪಡೆಗಳು ಅಲ್ಲಿ ಸುತ್ತುವರಿದು ಶೋಧ ಕಾರ್ಯಾಚರಣೆ ಪ್ರಾರಂಭಿಸಿದ್ದವು. ಭಯೋತ್ಪಾದಕರು ಪ್ರತಿದಾಳಿ ನಡೆಸಿದ್ದರು. ಇದು ಪರಸ್ಪರರ ನಡುವೆ ಗುಂಡಿನ ಚಕಮಕಿಗೆ ಕಾರಣವಾಗಿತ್ತು.

ಇಂದು ಮತ್ತೆ ಗುಂಡಿನ ಚಕಮಕಿ ನಡೆದಿದ್ದು, ಮೂವರು ಜೈಶ್‌ ಉಗ್ರರನ್ನ ಹತ್ಯೆಗೈಯಲಾಗಿದೆ.

Leave a Reply

Your email address will not be published. Required fields are marked *