SSLC ಹಿಂದಿ ಪರೀಕ್ಷೆ ವಿವಾದ: ಕೇಂದ್ರಗಳಿಗೆ ಮುತ್ತಿಗೆ ಎಚ್ಚರಿಕೆ.

SSLC ಹಿಂದಿ ಪರೀಕ್ಷೆ ವಿವಾದ: ಕೇಂದ್ರಗಳಿಗೆ ಮುತ್ತಿಗೆ ಎಚ್ಚರಿಕೆ.

ಕನ್ನಡ ಸಂಘಟನೆಗಳ ಪ್ರತಿಭಟನೆ ಎಚ್ಚರಿಕೆ ಹಿನ್ನೆಲೆ ಶಿಕ್ಷಣ ಇಲಾಖೆ ಪೊಲೀಸ್ ಭದ್ರತೆಗೆ ಮೊರೆ.

ಬೆಂಗಳೂರುಕರ್ನಾಟಕದಲ್ಲಿ ಮಾರ್ಚ್ 30ರಂದು ನಡೆಯಬೇಕಿದ್ದ ಎಸ್​​ಎಸ್​ಎಲ್​ಸಿ ತೃತೀಯ ಭಾಷೆ ಹಿಂದಿ ಪರೀಕ್ಷೆಯನ್ನು ಮಾರ್ಚ್​​ 31ಕ್ಕೆ ಮುಂದೂಡಲಾಗಿದೆ. ಮಹಾವೀರ ಜಯಂತಿ ಹಿನ್ನೆಲೆ ಪರೀಕ್ಷಾ ದಿನಾಂಕದಲ್ಲಿ ಬದಲಾವಣೆ ಮಾಡಿ ಶಿಕ್ಷಣ ಇಲಾಖೆ ನಿನ್ನೆ ಆದೇಶಿಸಿದೆ. ಇನ್ನೊಂದೆಡೆ ಹಿಂದಿ ಪರೀಕ್ಷಾ ವಿಚಾರವಾಗಿ ಕನ್ನಡ ಸಂಘಟನೆಗಳು ವಿರೋಧ ವ್ಯಕ್ತಪಡಿಸಿವೆ. ವಿದ್ಯಾರ್ಥಿಗಳು ಹಿಂದಿ ಪರೀಕ್ಷೆ ಬರೆಯದೇ ಇದ್ದರೂ ಪಾಸ್ ಮಾಡಬೇಕು ಎಂಬ ಬೇಡಿಕೆ ಮುಂದಿಟ್ಟಿವೆ. ಒಂದು ವೇಳೆ ಹಿಂದಿ ಪರೀಕ್ಷೆ ನಡೆಸಿದರೆ ಕೇಂದ್ರಗಳಿಗೆ ಮುತ್ತಿಗೆ ಹಾಕುವುದಾಗಿದೆ ಎಚ್ಚರಿಕೆ ನೀಡಲಾಗಿದೆ.

ಮಹಾವೀರ ಜಯಂತಿಯ ಪ್ರಯುಕ್ತ, ಮಾರ್ಚ್ 30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆಯನ್ನು ಮಾರ್ಚ್ 31ಕ್ಕೆ ಮುಂದೂಡಲಾಗಿದೆ. ಆದರೆ ಈ ಮಧ್ಯೆ ತ್ರಿಭಾಷಾ ಸೂತ್ರವನ್ನು ವಿರೋಧಿಸಿ ಕನ್ನಡ ಪರ ಸಂಘಟನೆಗಳು ಸರ್ಕಾರಕ್ಕೆ ಒತ್ತಾಯಿಸಿದ್ದು, ಜೊತೆಗೆ ಹಿಂದಿ ಪರೀಕ್ಷೆ ರದ್ದುಗೊಳಿಸುವಂತೆ ಆಗ್ರಹಿಸಿದ್ದಾರೆ. ಸದ್ಯ ಇದು ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ.

ಇನ್ನು ಈ ವಿಚಾರವಾಗಿ ಸಾರಾ ಗೋವಿಂದು, ಶಿವರಾಮೇಗೌಡ, ಮಂಜು ಸೇರಿ ಕನ್ನಡ ಸಂಘಟನೆಗಳ ಒಕ್ಕೂಟದಿಂದ ಸಚಿವ ಮಧು ಬಂಗಾರಪ್ಪರನ್ನು ಭೇಟಿ ಮಾಡಲಾಗಿದ್ದು, ಹಿಂದಿ ಪರೀಕ್ಷೆ ಬರೆಯದಿದ್ದರೂ ವಿದ್ಯಾರ್ಥಿಗಳನ್ನು ಪಾಸ್ ಮಾಡಬೇಕು. ಪಾಸ್ ವಿತೌಟ್ ಹಿಂದಿ ಎಂಬ ನಿಯಮ‌ ಜಾರಿ ಮಾಡಿ. ಹಿಂದಿ ಪರೀಕ್ಷೆ ರದ್ದು ಮಾಡಿ, ಹಿಂದಿ ಹೇರಿಕೆ ಮಾಡಬೇಡಿ. ಹಿಂದಿ ಪರೀಕ್ಷೆ ನಡೆಸಿದರೆ ಕೇಂದ್ರಗಳಿಗೆ ಮುತ್ತಿಗೆ ಹಾಕುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.

ಕನ್ನಡ ಸಂಘಟನೆಗಳ ಎಚ್ಚರಿಕೆ ಬೆನ್ನಲ್ಲೇ ಶಿಕ್ಷಣ ಇಲಾಖೆ ಅಲರ್ಟ್

ಕನ್ನಡ ಸಂಘಟನೆಗಳ ಎಚ್ಚರಿಕೆ ಹಿನ್ನೆಲೆ ಶಿಕ್ಷಣ ಇಲಾಖೆ ಅಲರ್ಟ್ ಆಗಿದ್ದು, ಪರೀಕ್ಷೆ ದಿನ ಪೊಲೀಸ್ ಭದ್ರತೆ ಪಡೆಯಲು ಮುಂದಾಗಿದೆ. ಪರೀಕ್ಷೆ ಸಮಯದಲ್ಲಿ ತೊಂದರೆಯಾಗದಂತೆ ಭದ್ರತೆ ಒದಗಿಸುವಂತೆ ಕರ್ನಾಟಕ ಶಾಲಾ‌ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಿಂದ ಪೊಲೀಸ್ ಭದ್ರತೆಗೆ ಮನವಿ ಮಾಡಲಾಗಿದೆ.

For More Updates Join our WhatsApp Group :

https://chat.whatsapp.com/JVoHqE476Wn3pVh1gWNAcH

Leave a Reply

Your email address will not be published. Required fields are marked *